Horoscope: ಈ ರಾಶಿಯವರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ, ಪ್ರಭಾವಿ ವ್ಯಕ್ತಿಗಳ ಭೇಟಿ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 09 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ರೇವತೀ, ಯೋಗ: ವೈಧೃತಿ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:29 ರಿಂದ 11:02 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 02:07ರ ವರೆಗೆ.
ಸಿಂಹ ರಾಶಿ: ನಿಮ್ಮ ಕುಟುಂಬದ ಸದಸ್ಯ ಇಂದು ನಿಮ್ಮ ಜೊತೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಹೆಚ್ಚು ಅನಾರೋಗ್ಯವು ನಿಮ್ಮನ್ನು ಕಾಡಬಹುದು. ನೀವು ಕೆಲಸದ ನಿಯಮಗಳ ಬಗ್ಗೆ ಗಮನ ಹರಿಸಬೇಕು. ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮ ಮಾಡಲು ಬಯಸುವಿರಿ. ಯಾರ ಕಡೆಯಿಂದಲಾದರೂ ಸಾಲ ಪಡೆಯುವುದನ್ನು ತಪ್ಪಿಸಿ. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು. ನೇರ ನಡೆಗೆ ನೀವು ಪ್ರಸಿದ್ಧರಾಗಿರುವಿರಿ.
ಕನ್ಯಾ ರಾಶಿ: ಇಂದು ನೀವು ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳುವುದು ಅಗತ್ಯ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ನಿಮ್ಮ ಭೇಟಿಯ ಸಮಯದಲ್ಲಿ ಅಪರಿಚಿತರು ಕೆಲವು ಪ್ರಮುಖ ಮಾಹಿತಿಯನ್ನು ನಿಮ್ಮಿಂದ ಪಡೆಯಬಹುದು. ಸ್ನೇಹಿತರ ಜೊತಗೆ ಸ್ವಲ್ಪ ಸಮಯ ಮೋಜಿನಿಂದ ಕಳೆಯುತ್ತೀರಿ. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು.
ತುಲಾ ರಾಶಿ: ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿರುವ ನಿಮಗೆ ಪ್ರೇಮ ಜೀವನವು ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ವಿದ್ಯಾ ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ. ನೀವು ಹೆಚ್ಚು ಭೌತಿಕ ವಿಷಯಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸುವಿರಿ. ನಿಮ್ಮ ಕಾರ್ಯದ ತಪ್ಪಿನಿಂದ ಅಧಿಕಾರಿಗಳು ನಿಮ್ಮನ್ನು ನಿಂದಿಸಬಹುದು. ನಿಮ್ಮ ಮನಸ್ಸಿಗೆ ಬಂದಂತೆ ವರ್ತಿಸುವುದು ಕಷ್ಟಕರವಾಗುವುದು. ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು. ಇದು ಜಾಣತನವೂ ಹೌದು. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.
ವೃಶ್ಚಿಕ ರಾಶಿ: ಇಂದು ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಪ್ರೇಯಸಿ ಜೊತೆಯಲ್ಲಿ ಸುತ್ತಾಟ ಮಾಡುವಿರಿ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ನೀವು ಸಣ್ಣ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಸಹೋದರರ ಸಂಪೂರ್ಣ ಸಹಕಾರವಿರುತ್ತದೆ. ಸಾಮಾಜಿಕ ಕಾರ್ಯಗಳನ್ನು ನೀವು ಹೆಚ್ಚು ಮಾಡುವಿರಿ. ನೀವು ಹೊಸದನ್ನು ಪ್ರಾರಂಭಿಸುವುದು ಒಳ್ಳೆಯದೇ. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸಲು ಆಲೋಚಿಸುವಿರಿ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು.