Horoscope: ದಿನ ಭವಿಷ್ಯ; ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 07 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.7ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧೃತಿ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:46 ರಿಂದ ಸಂಜೆ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:41ರ ವರೆಗೆ.
ಧನು ರಾಶಿ: ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಉದ್ಯೋಗಗಳನ್ನು ಬದಲಾಯಿಸಲು ಯೋಜಿಸುತ್ತಿರುವವರು ಉತ್ತಮ ಆದಾಯದ ಹೊಸ ಉದ್ಯೋಗ ಪ್ರಸ್ತಾಪವು ಬರಬಹುದು. ಅಧಿಕೃತ ಪ್ರವಾಸಕ್ಕೆ ಹೋಗಬಹುದು. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಸುಖಮಯ ಜೀವನ ನಡೆಸುವಿರಿ. ವಿರೋಧಿಗಳನ್ನು ತತ್ಸಾರ ಮಾಡುವ ಅವಶ್ಯಕತೆ ಇಲ್ಲ. ಮಾತು ನಿಯಂತ್ರಣ ತಪ್ಪಬಹುದು. ಕೆಲಸದ ಸ್ಥಳದಲ್ಲಿ ವಾತಾವರಣವು ನಿಮಗೆ ಅನುಕೂಲಕರವಾಗಿಲ್ಲದಿದ್ದರೆ, ನಿಮ್ಮ ಮನಃಸ್ಥಿತಿಯು ಹದಗೆಡುತ್ತದೆ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು. ನೀವು ಯೋಜಿಸಿದ ನಿಮ್ಮ ಕೆಲಸವೂ ಪೂರ್ಣಗೊಳ್ಳುವುದಿಲ್ಲ.
ಮಕರ ರಾಶಿ: ಈ ದಿನವನ್ನು ಕಳೆಯಲು ನಿಮಗೆ ಕಷ್ಟವಾಗುವುದು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ಹಣದ ಒಳಹರಿವಿನ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಉದ್ಯೋಗಗಳನ್ನು ಬದಲಾಯಿಸಲು ಯೋಜಿಸಿದರೆ ಹೊಸ ಉದ್ಯೋಗವು ಸಿಗುವುದು ಕಷ್ಟ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ವೃತ್ತಿ ಜೀವನದಲ್ಲಿ ಧನಾತ್ಮಕ ಬದಲಾವಣೆಗಳಾಗಲಿವೆ. ನ್ಯಾಯಾಲಯದ ಪ್ರಕರಣಗಳಲ್ಲಿ ಜಯ ಸಿಗಲಿದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು. ನಿಮ್ಮ ನೀವು ಪೂರ್ಣವಾಗಿ ನಂಬಲಾರಿರಿ.
ಕುಂಭ ರಾಶಿ: ನೀವು ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವಿರಿ. ವೃತ್ತಿ ಜೀವನದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ನೀವು ಕುಟುಂಬ ಅಥವಾ ಸ್ನೇಹಿತರೊಂದಿಗೆ ಎಲ್ಲೋ ಪ್ರಯಾಣಿಸಲು ಯೋಜಿಸಬಹುದು. ಹಣದ ವ್ಯವಹಾರಗಳನ್ನು ಎಚ್ಚರಿಕೆಯಿಂದ ಮಾಡಿ. ಹಣವನ್ನು ಉಳಿಸುವತ್ತ ಗಮನ ಹರಿಸಿ. ಹೊಸ ಹಣಕಾಸು ಯೋಜನೆಯನ್ನು ಮಾಡಿ. ಕಚೇರಿಯಲ್ಲಿ ನಿಮ್ಮ ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀಡಿ. ಇದು ವೃತ್ತಿಜೀವನದ ಬೆಳವಣಿಗೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ನಿಮ್ಮ ಫಿಟ್ನೆಸ್ ಬಗ್ಗೆ ಗಮನ ಕೊಡಿ. ಒಂಟಿ ಜನರು ಇಂದು ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.
ಮೀನ ರಾಶಿ: ಮನೆಯಲ್ಲಿ ನಿಮಗೆ ನಿರಾಸೆಯ ಅನುಭವವಾಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ಆಪ್ತರ ಭೇಟಿ ಹಾಗೂ ಮಾರ್ಗದರ್ಶನದ ಸುತ್ತಾಟದಲ್ಲಿ ಇಂದು ಮುಕ್ತಾಯಗೊಳ್ಳಲಿದೆ. ಇಂದು ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ಆರೋಗ್ಯ ಸುಧಾರಿಸಲಿದೆ. ವೃತ್ತಿ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಿರಿ. ಕುಟುಂಬಕ್ಕೆ ಕೀರ್ತಿ ತರಲಿದೆ. ಕೆಲವರು ಹಳೆಯ ಆಸ್ತಿಯನ್ನು ಮಾರಾಟ ಮಾಡಲು ಯೋಜಿಸಬಹುದು. ಇಂದು ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ವಿಶೇಷ ವ್ಯಕ್ತಿಯ ಬಗ್ಗೆ ಒಂಟಿ ಜನರ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಹೆಚ್ಚಿಸುತ್ತದೆ. ಉದ್ಯಮಿಗಳಿಗೆ ಸಮಯ ಉತ್ತಮವಾಗಿಲ್ಲ. ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ.
-ಲೋಹಿತ ಹೆಬ್ಬಾರ್-8762924271 (what’s app only)