Horoscope: ನಿತ್ಯಭವಿಷ್ಯ; ಈ ರಾಶಿಯವರಿಗೆ ತಮ್ಮ ಸೌಂದರ್ಯದ ಬಗ್ಗೆಯೇ ಚಿಂತೆ, ದುರಭ್ಯಾಸ ಬೆಳೆಸಿಕೊಳ್ಳುವ ಸಾಧ್ಯತೆ

|

Updated on: Mar 28, 2024 | 12:10 AM

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರಾಗಿದ್ದರೇ, 28 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯಭವಿಷ್ಯ; ಈ ರಾಶಿಯವರಿಗೆ ತಮ್ಮ ಸೌಂದರ್ಯದ ಬಗ್ಗೆಯೇ ಚಿಂತೆ, ದುರಭ್ಯಾಸ ಬೆಳೆಸಿಕೊಳ್ಳುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (ಮಾರ್ಚ್​​​​ 28) ರಾಶಿ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 11:06.

ಮೇಷ ರಾಶಿ: ಜನಸಾಮಾನ್ಯರಂತೆ‌ ವರ್ತಿಸುವುದು ಇಷ್ಟವಾಗಬಹುದು. ದೈನಂದಿನ ಖರ್ಚುಗಳನ್ನು ಸುಲಭವಾಗಿ ಪೂರೈಸಲು ಬೇರೆ ಬೇರೆ ಮಾರ್ಗವನ್ನು ಆಯ್ದುಕೋಳ್ಳು. ವ್ಯಾಪಾರಿಗಳಿಗೆ ಇಂದು ಮಿಶ್ರ ಫಲಿತಾಂಶ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಾವುದನ್ನೂ ಮಾತನಾಡಿದಷ್ಟು ಸುಲಭವಾಗಿ ಮಾಡಲಾಗದು. ತಾಳ್ಮೆಯಿಂದ ಕೆಲಸವನ್ನು ಮಾಡುವುದು ಉತ್ತಮ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ತೋರಿಸಬಹುದು. ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು.

ವೃಷಭ ರಾಶಿ: ನಿಮ್ಮ ನೂತನ ಸಂಗಾತಿಯ ಜೊತೆ ನಿಮ್ಮ ಮಾತುಗಳು ಹೆಚ್ಚು ಪ್ರಬುದ್ಧವಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಅಷ್ಟು ಉತ್ತಮವಲ್ಲ. ಹಣ ಸಂಪಾದಿಸುವ ಬಂದರೂ ಅವಕಾಶ ನಿಮ್ಮ ಕೈಯಿಂದ ಜಾರಿಕೊಳ್ಳಬಹುದು. ಈ ಸಮಯವು ನಿಮಗೆ ಬಹಳ ಮುಖ್ಯವಾಗಿರಲಿದೆ. ವ್ಯಾಪಾರಿಗಳು ಇಂದು ಯಾವುದೇ ಹೊಸ ಮಾಡಿಕೆ ಮಾಡಲು ಹೋಗಬೇಡಿ. ನಿಮಗೆ ತೃಪ್ತಿಯಾಗುವ ಕೆಲಸವನ್ನು ಮಾಡುವಿರಿ. ಹೂಡಿಕೆಯ ಕಾರಣ ಆರ್ಥಿಕವಾಗಿ ಕಷ್ಟವಾಗಬಹುದು. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ನಿಮ್ಮ ಆವಿಷ್ಕಾರಕ್ಕೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ.

ಮಿಥುನ ರಾಶಿ: ನಿಮ್ಮ ಎಲ್ಲ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಮಾಡುವಿರಿ. ಎಂತಹ ಸ್ಥಿತಿಯನ್ನೂ ಎದುರಿಸುವ ಆತ್ಮಬಲವು ನಿಮ್ಮದಾಗುವುದು. ವೈವಾಹಿಕ ಮಾತುಕತೆಗಳನ್ನು ಇಂದೇ ಮಾಡುವುದು ಉತ್ತಮ. ಆದಾಯದ ನಿಖರತೆಯನ್ನು ಸ್ಪಷ್ಟವಾಗಿಸಿಕೊಂಡು ಏನನ್ನಾದರೂ ಖರೀದಿಸುವಿರಿ. ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ.

ಕಟಕ ರಾಶಿ: ನಿಮಗೆ ಇಂದು ದೇಹದ ಬಗ್ಗೆ ಮೋಹ ಆರಂಭವಾಗಿ, ದೇಹವನ್ನು ಸುಂದರ ಮಾಡಿಕೊಳ್ಳುವ ಬಗ್ಗೆ ಚಿಂತೆ ಮಾಡುವಿರಿ. ಖಾಸಗಿ ಹಾಗೂ ವೃತ್ತಿಯ ಜೀವನವನ್ನು ತಳಕುಹಾಕಿಕೊಳ್ಳಬಾರದು. ಉದ್ಯಮಿಗಳು ಇಂದು ಬಯಸಿದ ಲಾಭವನ್ನು ಪಡೆಯುತ್ತಾರೆ. ನಿಮ್ಮ ಆಕಾರ್ಷಕ ಸ್ವಭಾವದಿಂದ ಬೇಕಾದುದನ್ನು ಪಡೆಯುವಿರಿ. ವ್ಯಾಪಾರದಲ್ಲಿ ಇಂದು ಗಮನಾರ್ಹ ಬದಲಾವಣೆ ಅಗಲಿದೆ. ಸುಲಭವಾದ ಕಾರ್ಯವನ್ನು ಕಷ್ಟದಿಂದ ಮಾಡಬೇಕಾಗುವುದು. ರೋಗಕ್ಕೆ ಸೂಕ್ತ ಚಿಕಿತ್ಸೆಯನ್ನು ಮಾಡಿಕೊಳ್ಳುವ ಕಡೆ ಗಮನವಿರಲಿ. ಅತಿಯಾದ ನಿಮ್ಮ ಸೂಕ್ಷ್ಮ ಸ್ವಭಾವದಿಂದ ನಿಮಗೇ ತೊಂದರೆಯಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ.