Horoscope: ದಿನಭವಿಷ್ಯ: ಇಂದು ನೀವಾಡುವ ಮಾತಿನಿಂದ ಕಲಹವಾಗಬಹುದು-ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 20 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ನೀವಾಡುವ ಮಾತಿನಿಂದ ಕಲಹವಾಗಬಹುದು-ಎಚ್ಚರ
ದಿನಭವಿಷ್ಯ
Edited By:

Updated on: Apr 20, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾ ಫಲ್ಗುಣೀ, ಯೋಗ: ಧ್ರುವ, ಕರಣ: ಬಾವಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:24 ರಿಂದ 10:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:17 ರಿಂದ  07:51ರ ವರೆಗೆ.

ಧನು ರಾಶಿ : ದಂಪತಿಗಳ ನಡುವೆ ಕಲಹವೆದ್ದು ಇಬ್ಬರ ತಪ್ಪುಗಳನ್ನು ಹೇಳಿಕೊಳ್ಳುವಿರಿ. ಹೂಡಿಕೆಗಳನ್ನು ಮಾಡಿ, ಲಾಭವು ನಿಮ್ಮನ್ನು ಬಂದು ಸೇರುವುದು. ಸ್ನೇಹಿತನಿಗೆ ಧನಸಹಾಯ ಅಥವಾ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸಿಕೊಡುವಿರಿ. ಬೆಳಗಿನಿಂದ ಸಂಜೆಯ ತನಕ ಉಲ್ಲಾಸ, ಉತ್ಸಾಹ, ಲವಲವಿಕೆ ನಿಮ್ಮದೇ ಆಗಿರುತ್ತದೆ. ನಿಮ್ಮ ಇಂದಿನ ಪ್ರಯತ್ನವು ನೂರಕ್ಕೆ ನೂರರಷ್ಟು ಇದ್ದರೂ ಫಲವು ಪೂರ್ಣವಾಗಿ ಸಿಗದಿರುವುದು ನಿಮಗೆ ಚಿಂತೆಯಾಗಬಹುದು. ವ್ಯವಹಾರದಲ್ಲಿ ನಿಮಗೆ ವಿಶ್ವಾಸವು ಸಾಲದು. ಯಾರ ಬಳಿಯೂ ಏನನ್ನೂ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ನಿಮ್ಮ ಎಲ್ಲ ಶ್ರಮದಾಯಕ ಯೋಜನೆ ಮತ್ತು ಸಂಘಟನೆಯು ಅಂತಿಮವಾಗಿ ಫಲವನ್ನು ನೀಡಲಿದೆ. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದ್ದು ನಿಮಗೆ ಬೇಸರ ತರಿಸೀತು.

ಮಕರ ರಾಶಿ : ಇಂದು ಕುಟುಂಬದ ಜೊತೆ ದಿನದ ಹೆಚ್ಚು ಕಾಲವನ್ನು ಕಳೆಯಲು ಪ್ರಯತ್ನಿಸಿ. ರೂಪ ಹಾಗೂ ವ್ಯಕ್ತಿತ್ವ ಸ್ನೇಹಿತರನ್ನು ಗಳಿಸಲು ಸಹಕಾರಿ. ಪರಿಸ್ಥಿತಿಗಳು ಹೇಗೂ ಬರಲಿ, ಮನಸ್ಸು ಮತ್ತು ಬುದ್ಧಿ ದೃಢವಾಗಿರಲಿ. ಸಭೆ, ಸಮಾರಂಭಗಳಿಗೆ ಭೇಟಿ ನೀಡಿ, ಮನಸ್ಸನ್ನು ನೆಮ್ಮದಿಯಾಗಿ ಇರುವುದು. ಹಿಂದೆ ಕೂಡಿಟ್ಟ ಹಣವು ಕೈ ಸೇರುವ ಸುದಿನ. ಇಂದು ನೀವಾಡುವ ಮಾತಿನಿಂದ ಕಲಹವಾಗಬಹುದು. ಅನರ್ಥಕ್ಕೆ ಅವಕಾಶ ಮಾಡಿಕೊಡದೇ ಸರಿಯಾಗಿರಿ. ಅಧಿಕ ಹಣವನ್ನು ನೀವು ಕೊಡಬೇಕಾಗಬಹುದು. ಕಾರ್ಯವಿಧಾನದ ಬದಲಾವಣೆಯಿಂದ ನಿಮಗೆ ಸಂತೋಷವಾಗಲಿದೆ. ಆಲಸ್ಯದ ಮನೋಭಾವವನ್ನು ನೀವು ಬಿಡಬೇಕಾದೀತು. ಉದ್ವೋಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ. ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು.

ಕುಂಭ ರಾಶಿ : ಯಾರಿಗಾದರೂ ಸಾಲ ನೀಡುವಾಗ ಪೂರ್ವಾಪರ ಆಲೋಚನೆ ಇರಲಿ. ಸಾಲವು ಮರಳಿ ಬರಬಹುದು ಎಂದು ಹೇಳಲು ಸಾಧ್ಯವಿಲ್ಲ. ಪರರ ದುಃಖದಲ್ಲಿ ಭಾಗಿಯಾಗಿ ಮನಸ್ಸನ್ನು ಹಗುರಗೊಳಿಸುವಿರಿ. ಕಾರ್ಯದ ಒತ್ತಡದಿಂದ ಕಛೇರಿಯಲ್ಲಿ ಹೆಚ್ಚು ಕಾಲ ಇರಬೇಕಾಗುಬುದು. ಇದೇ ಕಾರಣಕ್ಕೆ ಮನೆಯಲ್ಲಿ ಉದ್ವಿಗ್ನತೆಯೂ ಇರುವುದು. ನಿಮ್ಮ ಆರ್ಥಿಕ ಬಿಕ್ಕಟ್ಟು ಸ್ನೇಹಿತರ ಸಹಕಾರದಿಂದ ಸರಿಯಾಗುವುದು. ನಿಮ್ಮ ನಂಬಿಕೆಗೆ ದ್ರೋಹವುಂಟಾದೀತು. ನೀವು ತೆಗೆದುಕೊಳ್ಳುವ ನಿರ್ಧಾರವು ತಪ್ಪಾದೀತು ಎಂಬ ಆತಂಕವು ಇರಲಿದೆ. ರೋಗಬಾಧೆಯಿಂದ ನೀವು ಖಿನ್ನರಾಗುವಿರಿ. ಯಾವ ವಿಚಾರಕ್ಕೂ ಗೊಂದಲವಾಗುವಂತೆ ಇರುವುದು ಬೇಡ. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ತಮ್ಮಷ್ಟಕ್ಕೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಿ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು.

ಮೀನ ರಾಶಿ : ಇಂದು ಮನಸ್ಸು ತಾಳ್ಮೆಯನ್ನು ಬಿಡದಿರಲಿ. ಜನರಿಂದ ಕೆಲಸದ ವಿಚಾರದಲ್ಲಿ ಮನ್ನಣೆ ದೊರೆಯಲಿದೆ. ಉಪಕಾರಕ್ಕೆ ಸತ್ಫಲವನ್ನು ಪಡಯಬಹುದಾಗಿದೆ. ನಿಮ್ಮ ಒಡನಾಟ ದುಃಖದಲ್ಲಿರುವವರಿಗೆ ಸಂತೋಷವನ್ನು ನೀಡುತ್ತದೆ. ನಿಮ್ಮ ವ್ಯಕ್ತಿತ್ವವು ಇತರರಿಗೆ ಇಷ್ಟವಾಗುವುದು. ಇಂದು ನಿಮ್ಮ ವ್ಯಾಪಾರದಲ್ಲಿ ಧನ ಲಾಭವು ಆಗಲಿದ್ದು ಅದು ನಿಮ್ಮ ಮೇಲೆ‌ ಸತ್ಪರಿಣಾಮವನ್ನು ಬೀರಬಹುದು. ಅನಗತ್ಯ ವಿಚಾರಗಳ ಬಗ್ಗೆ ಆಲೋಚನೆ, ಆಸಕ್ತಿಯು ಹೆಚ್ಚಾಗುವುದು. ದಾಂಪತ್ಯದಲ್ಲಿ ಪ್ರೀತಿಯು ಹೆಚ್ಚಾಗಬಹುದು. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)