Nitya Bhavishya: ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ, ಅನಾರೋಗ್ಯವು ಕಾಡಲಿದೆ

|

Updated on: Jan 12, 2024 | 12:15 AM

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 12 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ, ಅನಾರೋಗ್ಯವು ಕಾಡಲಿದೆ
ಪ್ರಾತಿನಿಧಿಕ ಚಿತ್ರ
Follow us on

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿಯಿರಿ. ನಿಮ್ಮ ಇಂದಿನ (ಜನವರಿ 12) ದಿನ ಭವಿಷ್ಯ (Horoscope) ಹೀಗಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶ್ರವಣಾ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:16 ರಿಂದ 12:41ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:30 ರಿಂದ 04:55ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:51ರ ವರೆಗೆ.

ಧನು ರಾಶಿ: ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳುವ ಕಡೆ ಗಮನಹರಿಸುವಿರಿ. ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಆಗಬೇಕೆಂದುಕೊಂಡ ಕಾರ್ಯವನ್ನು ಪೂರ್ಣ ಮಾಡಲಾಗದು.‌

ಮಕರ ರಾಶಿ: ಹಣಕಾಸಿನ ಉದ್ಯಮದಲ್ಲಿ ಕೆಲವು ಅಡಚಣೆಗಳು ಉಂಟಾಗಬಹುದು. ಎಲ್ಲಿಗೇ ಹೋದರೂ ನಿಮಗೆ ಹಿತವೆನಿಸದು. ಬಿಡಿಸಲಾಗದಷ್ಟು ಆಪ್ತವಾದ ಸಂಬಂಧವು ದೂರವಾಗಬಹುದು. ಇಂದು ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ಪಾಲುದಾರಿಕೆಯಲ್ಲಿ ನಿಮ್ಮ ಪಾಲೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಸಂಶೋದನೆಯ ಬಗ್ಗೆ ಆಸಕ್ತಿ ಅಧಿಕವಾಗಿ ಇರುವುದು. ‌ಅವಕಾಶಗಳನ್ನು ಹುಡುಕುವಿರಿ.

ಕುಂಭ ರಾಶಿ: ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಸರ್ಕಾರದ ಉದ್ಯೋಗಸ್ಥರು ಕೆಲವರ ಒತ್ತಡಕ್ಕೆ ಸಿಕ್ಕಿಕೊಳ್ಳಬೇಕಾಗುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಕಳೆದುಕೊಂಡ ಹಣವನ್ನು ಪಡೆಯಲು ಹಠವು ಬರಬಹುದು.‌ ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಮಕ್ಕಳ ವಿಚಾರದಲ್ಲಿ ಅಧಿಕ ಖರ್ಚನ್ನು ಇಂದು ಮಾಡಬೇಕಾಗಬಹುದು.

ಮೀನ ರಾಶಿ: ನಿಮ್ಮ ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳು ಆದ ಕಾರಣ ವೃತ್ತಿಯನ್ನು ಬದಲಿಸುವ ಯೋಚನೆ ಬರಲಿದೆ. ವ್ಯಾಪಾರಸ್ಥರು ಅಧಿಕ ಖರ್ಚಿನ‌ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌