Horoscope: ಈ ರಾಶಿಯವರ ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 22 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರ ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 22, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶನಿವಾರ(ಜೂನ್. 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಹುಣ್ಣಿಮೆ, ನಿತ್ಯನಕ್ಷತ್ರ: ಮೂಲಾ, ಯೋಗ: ಶುಕ್ಲ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:21 ರಿಂದ 10:58ರ ವರೆಗೆ, ಯಮಘಂಡ ಕಾಲ 02:12ರಿಂದ 03:49ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:06ರಿಂದ ಬೆಳಗ್ಗೆ 07:44ರ ವರೆಗೆ.

ಧನು ರಾಶಿ : ಹತ್ತರ ಜೊತೆ ಹನ್ನೊಂದು ಎನ್ನುವ ಭಾವ ಬೇಡ. ಉತ್ತಮ ಯೋಜನೆ ನಿಮ್ಮ ಉನ್ನತಾಧಿಕಾರಕ್ಕೆ ಪೂರಕವಾಗಬಹುದು. ಇಂದು ನೀವು ಹೊಸ‌ ಕೆಲಸವನ್ನು ಆರಂಭಿಸಿದರೆ ಕಾರಣಾಂತರಗಳಿಂದ ಸ್ಥಗಿತಗೊಳ್ಳುವುದು ಅಥವಾ ನಿಧಾನವಾಗಿ ಅಭಿವೃದ್ಧಿಯನ್ನು ಹೊಂದುವುದು. ಎಲ್ಲರ ಸಹಬಾಳ್ವೆಯಿಂದ ಇರುವುದು ಸಾಧ್ಯವಾಗದು. ಯಾವುದೇ ವಿಚಾರಚವನ್ನು ತಲೆಗೆ ಏರಿಸಿದಷ್ಟೂ ತೊಂದರೆಯೇ. ಇಂದು ಮನೆಯಲ್ಲಿ ಮತ್ತು ಕಛೇರಿಯಲ್ಲಿ ನಿಮ್ಮ ಮಾತಿಗೆ ಸಹಮತವಿರಲಿದೆ. ನಿರೀಕ್ಷಿತ ಸಂಪತ್ತು ಕೈ ಸೇರಬಹುದು. ಅಪರೂಪಕ್ಕೆ ಅತಿಥಿಗಳು ಬಂದಕಾರಣ ಮನೆಯಲ್ಲಿ ಸ್ವಲ್ಪ ಒತ್ತಡದ ಸನ್ನಿವೇಶವು ಇರಲಿದೆ. ಸುಲಭವೆಂದು ಕೆಲಸವು ಕಷ್ಟವೆನಿಸಬಹುದು. ಕಾಮಗಾರಿಯ ಬಗ್ಗೆ ಸದ್ಭಾವವಿರದು. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ : ಇಂದು ನಿಮ್ಮ ವ್ಯಾಪಾರದಲ್ಲಿ ಚೇತರಿಕೆ ಕಾಣಿಕೊಂಡರೂ ನೀವು ಯಾವುದೋ ಗಹನವಾದ ಆಲೋಚನೆಯಲ್ಲಿಯೇ ಇರುವಿರಿ. ಜನರೊಡನೆ ಬಾಂಧವ್ಯವನ್ನು ಚೆನ್ನಾಗಿಸಿಕೊಳ್ಳಿ. ಆತುರಪಟ್ಟು ಅವಗಢಕ್ಕೆ ಸಿಲುಕಬೇಡಿ. ಮಕ್ಕಳಿಂದ ಸಂತೋಷವು ಸಿಗಲಿದೆ. ನಿಮಗೆ ಎಲ್ಲವೂ ತಿಳಿದಿದ್ದರೂ ಬೇಕಾದ ಸಂದರ್ಭದಲ್ಲಿ ಅದು ನೆನಪಾಗದು. ಸ್ವಾಭಿಮಾನದಿಂದ ಬದುಕಲು ಪ್ರಯತ್ನಿಸಿದರೂ ಅದನ್ನು ತಪ್ಪಿಸುವರು. ನೀವು ನಂಬಿದ ವ್ಯಕ್ತಿಗಳಿಂದ ವಿಶ್ವಾಸಘಕ್ಕೆ ಘಾಸಿಯಾಗಬಹುದು. ಉದ್ಯೋಗವು ಸಿಗದೇ ಮಾನಸಿಕವೇದನೆಯನ್ನು ಅನುಭವಿಸುತ್ತಿದ್ದರೆ ಇಂದು ಕೆಲಸ ಸಿಗುವ ಸೂಚನೆ ಬರಲಿದೆ. ವಿವಾದವಾಗುವ ಮಾತುಗಳನ್ನು ಆಡಬೇಡಿ. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು.

ಕುಂಭ ರಾಶಿ : ಒಂದೇ ಉದ್ದೇಶ ಹೊಂದಿದ ಹಲವರನ್ನು ಭೇಟಿ ಮಾಡುವಿರಿ. ಭರವಸೆಯೇ ನಿಮಗೆ ಭವಿಷ್ಯದ ಬೆಳಕಾಗಲಿದೆ. ಉತ್ತಮರ ಸಹವಾಸ ನಿಮಗೆ ಹೊಸದಾದ ದಿಕ್ಕನ್ನು ತೋರಿಸಬಹುದು. ನಂಬಿಕೆಯನ್ನು ಇಡುವಾಗ ಮುನ್ನೆಚ್ಚರವಿರಲಿ. ಪ್ರಣಯಪ್ರಸಂಗದಲ್ಲಿ ಆಕಸ್ಮಿಕ ತಿರುವುಗಳು ಇರಬಹುದು. ಅಪರಿಚಿತರು ನಿಮ್ಮನ್ನು ವಶಪಡಿಸಿಕೊಳ್ಳಲು ಅನೇಕ ವಿಧವಾದ ಪ್ರಯತ್ನವನ್ನು ಮಾಡುವರು. ಕುಟುಂಬದವರೇ ಆದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವಿರಿ. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುದು. ಯಾವುದನ್ನಾದರೂ ತಪ್ಪಿಸಬೇಕು ಎಂದು ಹೊರಟರೆ ಅದು ಆಗದು. ನಿಷ್ಠೆಯಿಂದ ಇದ್ದರೂ ನಿಮಗೆ ಅಪವಾದಬರಬಹುದು. ಇಂದು ನೀವು ಸಿಡಿದೇಳುವ ಸಂದರ್ಭವು ಬರಬಹುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು. ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ಮೀನ ರಾಶಿ : ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ಪೂರ್ಣ ವಿವರಗಳನ್ನು ಪಡೆದು ಕಾರ್ಯಪ್ರವೃತ್ತರಾಗಿ. ಆತುರದಲ್ಲಿ ಮಾಡಿದ ಕಾರ್ಯವನ್ನೇ ಮತ್ತೆ ಮಾಡಬೇಕಾದೀತು. ಉದ್ವೇಗಕ್ಕೆ ಒಳಗಾಗಬಹುದು‌. ಎಲ್ಲವೂ ಖಾಲಿ ಖಾಲಿ ಅನ್ನಿಸಬಹುದು. ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು. ಪ್ರೇಮಾಂಕುರವು ಆಗಬಹುದು. ಇಂದು ಹಿರಿಯ ಹಾಗೂ ಭವಿಷ್ಯಕ್ಕೆ ಬೇಕಾದ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿ ಮಾಡುವಿರಿ. ಸ್ವಂತ ಉದ್ಯೋಗವಾಗಿದ್ದರೆ ಹೆಚ್ಚಿನ ಲಾಭವು ಸಿಗುವುದು ಕೈತಪ್ಪಬಹುದು. ಧಾರ್ಮಿಕ ನಂಬಿಕೆಗಳು ನಿಮ್ಮನ್ನು ದಾರಿ ತಪ್ಪದಂತೆ ನೋಡಿಕೊಳ್ಳುವುದು. ನಿಮ್ಮ ಕೆಲಸದ ಮೇಲೆ ಸ್ವಲ್ಪ ಗಮನವಿರಲಿ‌. ಮನೆಯಲ್ಲಿ ನಡೆಯುವ ಘಟನೆಗಳು ಕುತೂಹಲ ತರಿಸಬಹುದು. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ