Nitya Bhavishya: ಈ ರಾಶಿಯವರಿಗೆ ಇಂದು ಶತ್ರುಗಳು ಹೆಚ್ಚು ತೊಂದರೆಯನ್ನು ಕೊಡಬಹುದು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 11ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರಿಗೆ ಇಂದು ಶತ್ರುಗಳು ಹೆಚ್ಚು ತೊಂದರೆಯನ್ನು ಕೊಡಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 11, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ಪರಿಘ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 05:08 ರಿಂದ 06:34ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:14 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ 05:08ರ ವರೆಗೆ.

ಧನು ರಾಶಿ : ಇಂದು ನಿಮಗೆ ಅನಗತ್ಯ ಎನಿಸದರೂ ಕೆಲವು ಖರ್ಚನ್ನು ನಿಮ್ಮ ಸಂತೋಷ, ಪ್ರತಿಷ್ಠೆಗಾಗಿ ಮಾಡುವಿರಿ. ಸುಲಭ ಸಾಧ್ಯವಾಗುವ ಕಾರ್ಯಗಳನ್ನು ಹೆಚ್ಚು ಮಾಡಿ. ಯಾವುದೋ ಆಲೋಚನೆಯಲ್ಲಿ ನೀವು ಮಗ್ನರಾದಂತೆ ತೋರುತ್ತದೆ. ಯಾರಾದರೂ ನಿಮ್ಮನ್ನು ಚೇಡಿಸಬಹುದು. ವಾಹನ ಖರೀದಿಗೆ ಗೊಂದಲದ ಮನಸ್ಸು ಬೇಡ. ವೃತ್ತಿಯನ್ನೇ ಬದಲಾಯಿಸುವ ಆಸೆ ಬರಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.‌ ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿ ಇರಲಿದೆ. ಅದು ದಾಂಪತ್ಯದಲ್ಲಿ ಮೇಲೂ ಪರಿಣಾಮವನ್ನು ಬೀರುವುದು. ಹೂಡಿಕೆಯ ವಿಚಾರವನ್ನು ಸ್ನೇಹಿತರ ಮೂಲಕ ಗೊತ್ತುಮಾಡಿಕೊಳ್ಳುವಿರಿ. ಇನ್ನೊಬ್ಬರ ಸಣ್ಣ ತಪ್ಪುಗಳೂ ನಿಮಗೆ ದೊಡ್ಡದಾಗಿ ಕಾಣಿಸುವುದು.

ಮಕರ ರಾಶಿ : ಇಂದು ನಿಮ್ಮ ಉದ್ಯೋಗದ ಬದಲಾವಣೆಗೆ ಸಂಗಾತಿಯಿಂದ ಒತ್ತಡ ಬರಬಹುದು. ವೈದ್ಯಕೀಯ ಕ್ಷೇತ್ರದಲ್ಲಿ ಒತ್ತಡವು ಅಧಿಕಾಗಿರುವುದು. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳುವಿರಿ. ಹೊಸ ಉದ್ಯೋಗಕ್ಕೆ ನಿಮ್ಮ ಮನಸ್ಸು ತೆರದುಕೊಳ್ಳುವುದು. ಹಿತಶತ್ರುಗಳು ಲಾಭವನ್ನು ತಪ್ಪಿಸುವರು. ಸತ್ಯದ ಮಾತಿನಿಂದ ನಿಮಗೇ ಸಂಕಷ್ಟವು ಬರಬಹುದು. ಯಾರದ್ದಾದರೂ ಜೊತೆ ನೀವು ನಿಮ್ಮನ್ನು ಹೋಲಿಸಿಕೊಳ್ಳುವಿರಿ. ಸಮಾಜದಿಂದ ಸಿಗುವ ಗೌರವವು ನಿಮಗೆ ಬಂಧನದಂತೆ ಅನ್ನಿಸಬಹುದು. ಬಂಧುಗಳು ನಿಮ್ಮ ಸಹಾಯವನ್ನು ಕೇಳಬಹುದು. ಇಂದು ನಿಮ್ಮಿಂದ ಕುಟುಂಬವು ಸಂತೋಷಗೊಳ್ಳುವುದು. ನಿದ್ರೆಯಲ್ಲಿ ಕೆಟ್ಟ ಕನಸುಗಳನ್ನು ಕಂಡು ಚಿಂತೆಗೊಳ್ಳುವಿರಿ. ಉತ್ತಮ ಕಾಲದ ನಿರೀಕ್ಷೆಯಲ್ಲಿ ನೀವು ಇರುವಿರಿ. ಇಂದು ನೀವು ವಿಚಿತ್ರವಾದ ಮಾನಸಿಕ ಸ್ಥಿತಿಯನ್ನು ಹೊಂದಿರುವಿರಿ.

ಕುಂಭ ರಾಶಿ : ಈ ದಿನ‌ ನೀವು ಅಂದುಕೊಂಡಂತೆ ಆಗುತ್ತಿಲ್ಲ ಎಂಬ ಮನವರಿಕೆ ಆಗಲಿದೆ. ನಿಮ್ಮ ಮಾತಿನಿಂದ ಹಲವರು ಸಂಭ್ರಮಿಸುವರು.‌ ದೌರ್ಬಲ್ಯಗಳನ್ನು ಗೊತ್ತು ಮಾಡುವಂತೆ ಇಂದಿನ ವರ್ತನೆ ಇರಬಹುದು. ಸ್ತ್ರೀಯರಿಗೆ ಹೊಸತನ್ನು ಏನಾದರೂ ಮಾಡುವ ಬಗ್ಗೆ ಆಸಕ್ತಿ ಬರಬಹುದು. ಸಂಗಾತಿಯ ಮನೋಭಾವವನ್ನು ಅರಿತುಕೊಳ್ಳಲು ಕಷ್ಟವಾದೀತು. ದೂರದ ಸ್ಥಳಕ್ಕೆ ಪ್ರವಾಸ ಹೋಗುವ ಸಂದರ್ಭವು ಬರಬಹುದು. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು. ಇಂದಿನ ಆದಾಯದಿಂದ ನಿಮ್ಮ ಆಸೆಗಳನ್ನು ತೀರಿಸಿಕೊಳ್ಳುವಿರಿ. ನೀವು ಪರಿಚಿತರಿಂದ ಸಹಾಯವನ್ನು ಅಪೇಕ್ಷಿಸುವಿರಿ. ಸಮಾನಮನಸ್ಕರ ಜೊತೆ ಇಂದು ಕುಳಿತು ಕಾಲ ಕಳೆಯುವಿರಿ.

ಮೀನ ರಾಶಿ : ಇಂದು ನಿಮಗೆ ಯಾವುದೋ ಘಟನೆಯ ಕಾರಣಕ್ಕೆ ಬಂಧುಗಳ ಮೇಲೆ ಸಿಟ್ಟಾಗುವಿರಿ. ಎಲ್ಲಿಗಾದರೂ ದೂರ ಪ್ರಯಾಣವನ್ನು ಮಾಡಬೇಕು ಎಂದು ಅನ್ನಿಸುವುದು. ಏಕಾಂತವನ್ನು ಹೆಚ್ಚು ಇಷ್ಟಪಡುವಿರಿ. ನಿಮ್ಮದಾದ ಸ್ವತಂತ್ರ ಆದಾಯವನ್ನು ಬೆಳೆಸಿಕೊಳ್ಳುವ ಬಗ್ಗೆ ಸೂಕ್ತ ನಿರ್ಧಾರವನ್ನು ಮಾಡುವಿರಿ. ಯಾರದೋ ಕೆಲಸವು ನಿಮಗೆ ಸುತ್ತಿಕೊಳ್ಳಬಹುದು. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ಸಮಾರಂಭಗಳು ನಿಮಗೆ ಬೇಸರವನ್ನು ತರಿಸಬಹುದು. ನಿಮಗೆ ತಾಳ್ಮೆಯೂ ಬಹಳ ಮುಖ್ಯವಾಗುವುದು. ಅಧ್ಯಾತ್ಮದಲ್ಲಿ ಹೆಚ್ಚು ಮನಸ್ಸು ಇರುವುದು. ವ್ಯಾಪಾರದಲ್ಲಿ ನಿಮ್ಮ ಮೇಲುಗೈ ಇರಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ