Astrology: ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ

ರಾಶಿ ಭವಿಷ್ಯ ಗುರುವಾರ(ಸೆ. 12): ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಯಾರ ಯೋಗ್ಯತೆಯನ್ನೂ ಅಳೆಯಲು ಸಾಧ್ಯವಾಗದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಜಾಣತನ ಇಂದು ನಿಮ್ಮ ಉಪಯೋಗಕ್ಕೆ ಬಾರದು. ಹಾಗಾದರೆ ಸೆಪ್ಟೆಂಬರ್​ 12ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ
ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 12, 2024 | 12:15 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಮಧ್ಯಾನ್ನ 02:00 ರಿಂದ 03:32, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ.

ಧನು ರಾಶಿ: ನಿಮ್ಮನ್ನು ಅಗೌರವದಿಂದ ಕಾಣುವವರ ಮೇಲೆ‌ ಕೋಪ ಬರುವುದು. ಇಂದು ನಿಮ್ಮ ಮನೆಯ ದುರಸ್ತಿಯ ಕಡೆ ಯೋಚಿಸುಬಿರಿ. ಸಂಗಾತಿಯನ್ನು ನೀವು ಅವಮಾನಸಲಿದ್ದೀರಿ. ಇದರಿಂದ ನಿಮಗೆ ಮುಂದೆ ತೊಂದರೆಯಾಗಬಹುದು. ಅತಿಥಿ ಸತ್ಕಾರವು ನಿಮಗೆ ಸಂತೋಷ ಕೊಡುವುದು. ಆರ್ಥಿಕಸ್ಥಿತಿಯು ನಿಮಗೆ ಸಮಾಧಾನವನ್ನು ಕೊಡುವುದು. ಕುಟುಂಬದಲ್ಲಿ ಐಕಮತ್ಯವಿರಲಿ. ಆತ್ಮೀಯರ ಜೊತೆ ನಿಮ್ಮ ಸಂಬಂಧವು ಚೆನ್ನಾಗಿರಲಿದೆ. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವಿರಿ. ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮ್ಮ ಕುರಿತು ತಂದೆ ತಾಯಿಯರು ಚಿಂತಿಸುವರು. ಭೂಮಿಯನ್ನು ವಶ ಮಾಡಿಕೊಳ್ಳಲು ಪ್ರಭಾವಿಗಳ ಸಂಗವನ್ನು ಮಾಡಬೇಕಾದೀತು. ಭೂಮಿಯ ಪ್ರಕರಣವು ನಿಮ್ಮನ್ನು ಚಿಂತೆಗೀಡುಮಾಡೀತು. ನೌಕರರ ಮೇಲೆ ಕಿಡಿಕಾರುವಿರಿ. ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಯಾರ ಯೋಗ್ಯತೆಯನ್ನೂ ಅಳೆಯಲು ಸಾಧ್ಯವಾಗದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಜಾಣತನ ಇಂದು ನಿಮ್ಮ ಉಪಯೋಗಕ್ಕೆ ಬಾರದು.

ಮಕರ ರಾಶಿ: ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ನಿಮ್ಮ ಪ್ರಮುಖ ದಾಖಲೆಗಳನ್ನು ಯಾರಿಗೂ ಹಸ್ತಾಂತರಿಸುವುದು ಬೇಡ. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಲಿದೆ. ಸಮಾಜಮುಖೀ ಕೆಲಸದಿಂದ ನಿಮಗೆ ಗೌರವವು ಸಿಗಲಿದೆ. ಮಕ್ಕಳ ಯಶಸ್ಸಿನಿಂದ ಪೋಷಕರಿಗೆ ಸಂತಸವಾಗಲಿದೆ. ವಾಹನ ಚಲಿಸುವಾಗ ಜಾಗರೂಕತೆ ಮುಖ್ಯವಾಗಲಿದೆ. ಶತ್ರುಗಳು ವ್ಯವಹಾರದಲ್ಲಿ ಮಧ್ಯವರ್ತಿಗಳಾಗಿ ಇರುವರು. ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ನೀವು ನಿಮ್ಮ ಬಗ್ಗೆ ಜನರ ಅಭಿಪ್ರಾಯವನ್ನು ಪಡೆಯಲು ಇಚ್ಛಿಸುವಿರಿ. ವಿದೇಶದಲ್ಲಿ ಇದ್ದರೆ ನಿಮಗೆ ಸಂಕಷ್ಟವು ಬರಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡಿ. ಕೆಲವು ಉದ್ಯಮದ ರಿಸ್ಕ್ ನ್ನು ತೆಗೆದುಕೊಳ್ಳಬೇಕಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ.

ಕುಂಭ ರಾಶಿ: ಒಂದಾದ ಮೇಲೆ‌ ಒಂದರಂತೆ ಒತ್ತಡ ಕಾಣಿಸಿಕೊಳ್ಳುವುದು. ಇಂದು ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ವಿವಾಹದ ಮಾತುಕತೆಗಳು ಬಿರುಸಿನಿಂದ ನಡೆಯಲಿದೆ. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ನಿಮಗೆ ಗೌರವವು ಕಡಿಮೆ ಆಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸಲು ಹೋಗಿ ಸಿಕ್ಕಿಬೀಳಬೇಕಾದೀತು. ನಿಮ್ಮ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಕೋಪಕ್ಕೆ ಕಾರಣವನ್ನು ನೀವು ವ್ಯಕ್ತಿಪಡಿಸಲು ಇಚ್ಛಿಸುವುದಿಲ್ಲ. ಸಂಪತ್ತಾಗಿ ಅನ್ಯ ವೃತ್ತಿಯನ್ನು ಆಶ್ರಯಿಸಬೇಕಾದೀತು. ಹೂಡಿಕೆಯನ್ನು ಅಲ್ಪ ಮೊತ್ತದಲ್ಲಿ ಮಾಡಿ. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಬಾಂಧವ್ಯ ಗಟ್ಟಿಯಾಗುವ ತನಕ ಕಾಯಬೇಕು.

ಮೀನ ರಾಶಿ: ನಿಮ್ಮ‌ಸಾಮಾಜಿಕ‌ ಕಾರ್ಯಗಳಿಗೆ ಉತ್ತಮ‌ ಜನಸ್ಪಂದ ಸಿಗಬಹುದು. ನೀವು ಉದ್ಯಮಿಗಳ ಜೊತೆ ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ಸರ್ಕಾರದ ಕೆಲಸವಾಗದೇ ಅಧಿಕ ಓಡಾಟವಾದೀತು. ಆರ್ಥಿಕ ನೆರವನ್ನು ನೀವು ಬಯಸುವಿರಿ. ಸಮಾಧಾನ ಚಿತ್ತದಿಂದ ನಿಮ್ಮ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವಿರಿ. ವೈವಾಹಿಕ ಜೀವನವು ಹಿರಿಯರ ಮಾರ್ಗದರ್ಶನದಲ್ಲಿ ಆಗುವುದು. ಮಕ್ಕಳಿಗೆ ಸಂಪತ್ತನ್ನು ಹಂಚುವ ಯೋಚನೆ ಇರಲಿದೆ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದವಾಗುವಂತೆ ಮಾಡುವಿರಿ. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನೀವು ಯಾವುದನ್ನೂ ಪರೀಕ್ಷಿಸದೇ ಒಪ್ಪಿಕೊಳ್ಳುವುದು ಬೇಡ. ಶಿಸ್ತಿಗೆ ಹೆಚ್ಚು ಒತ್ತನ್ನು ಇಂದು ಕೊಡುವಿರಿ. ಇದು ಸಹೋದ್ಯೋಗಿಗಳಿಗೆ ಕಿರಿಕಿರಿಯಾದೀತು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಇಂದು ನಿಮಗೆ ಗೊತ್ತಿಲ್ಲದೇ ದುಷ್ಟರ ಸಹವಾಸ ಸಿಗಬಹುದು.

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್