Rashi Bhavishya: ಈ ರಾಶಿಯವರು ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ 15ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Rashi Bhavishya: ಈ ರಾಶಿಯವರು ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು
ದಿನಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 15, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಭರಣೀ, ಯೋಗ: ಶುಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:41ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:58 ರಿಂದ 08:25ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:52 ರಿಂದ 11:20ರ ವರೆಗೆ.

ಧನು ರಾಶಿ : ನೀವು ಇಂದು ಮುಖ್ಯವಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥರಿರುವಿರಿ. ನಿಮ್ಮ‌ ಮಾತನ್ನು ನಿಮ್ಮವರು ಕೇಳುಬರು. ಬಹು ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ, ಉತ್ಪಾದದನಾ ಕ್ಷೇತ್ರದಲ್ಲಿ ಕೊಂಚ ಹಿನ್ನಡೆ ಆಗಬಹುದು. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಘಟನೆಯು ಇಂದು ನಡೆಯುವುದು. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು. ಸಾಲ ಕೊಟ್ಟವರು ಬೆನ್ನು ಬಿಡದೇ ನಿಮ್ಮನ್ನು ಪೀಡಿಸಬಹುದು.

ಮಕರ ರಾಶಿ : ಬಂಧುಗಳ ಆಗಮನದಿಂದ ಖರ್ಚೂ ಹೆಚ್ಚಳವಾಗುವುದು ಮತ್ತು ನಿಮ್ಮ ಕೆಲಸಗಳೂ ಹಿಂದೆ ಉಳಿಯುತ್ತವೆ. ಅತಿಯಾದ ದುರಾಸೆಯನ್ನು ನಿಮಗೆ ಸುಖ ಕೊಡದು. ಸಂಬಂಧವನ್ನು ಚೆನ್ನಾಗಿ ನಿಭಾಯಿಸುವ ಕಲೆಯು ಗೊತ್ತಿದೆ. ಯಾರಾದರೂ ಹೊಸ ಯೋಜನೆಗಳ ಬಗ್ಗೆ ಸಲಹೆಯನ್ನು ಕೊಡುವರು, ಉದ್ಯೋಗದ ಕಾರಣದಿಂದ ನೀವು ಓಡಾಟವನ್ನು ಮಾಡಬೇಕಾಗುವುದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು. ಕುಟುಂಬದ ಸದಸ್ಯರ ಬಗ್ಗೆ ನಿಮಗೆ ಸಮಾಧಾನವಿರದು.

ಕುಂಭ ರಾಶಿ : ನಿಮಗೆ ಉತ್ಪಾದನೆಗೆ ಸಂಬಂಧಿಸಿದ ಆದಾಯವು ಇಂದು ಇರುವುದು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ಸಂಬಂಧವನ್ನು ಸೌಹಾರ್ದಯುತವಾಗಿ ಇಟ್ಟುಕೊಳ್ಳಿ. ನಿಮಗೆ ಅನೇಕರು ಪ್ರಭಾವಿತರಾಗಬಹುದು.‌ ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಂಭೀರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ಆತ್ಮತೃಪ್ತಿಗಿಂತ ಬೇರೆ ಸಂತೋಷವು ನಿಮಗೆ ಇರದು.

ಮೀನ ರಾಶಿ : ಇಂದು ನಿಮಗೆ ವ್ಯಾಪಾರದಲ್ಲಿ ಅನಿರೀಕ್ಷಿತವಾಗಿ ಆರ್ಥಿಕ ಲಾಭವು ಆಗಬಹುದು.‌ ಇಂದಿನ ನಿಮ್ಮ ಎಲ್ಲ ಕೆಲಸಗಳೂ ಶಿಸ್ತಿನಿಂದ ಉತ್ಸಾಹವನ್ನು ತುಂಬಿಕೊಂಡು ಮಾಡುವಿರಿ. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಹಂಕಾರವು ಬಂದೀತು, ನಿಮಗೆ ಸಾಮಾನ್ಯರ ಜೊತೆ ಸಾಮಾನ್ಯರಂತೆ ವರ್ತಿಸುವುದು ಇಷ್ಟವಾಗುವುದು. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ನೀವು ಸಂತೋಷಕ್ಕಾಗಿ ಹಣವನ್ನು ಖರ್ಚು ಮಾಡುವಿರಿ. ಅನಿವಾರ್ಯವಾಗಿ ಕಾರ್ಯಗಳನ್ನು ಮಾಡಬೇಕಾಗಬಹುದು. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ.

-ಲೋಹಿತ ಹೆಬ್ಬಾರ್ -8762924271 (what’s app only)