Nitya Bhavishya: ನಿತ್ಯಭವಿಷ್ಯ, ಉತ್ತಮ ಹವ್ಯಾಸಗಳು ಈ ರಾಶಿಯವರ ಬದುಕಿನ ದಿಕ್ಕನ್ನು ಬದಲಿಸೀತು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 10 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ನಿತ್ಯಭವಿಷ್ಯ, ಉತ್ತಮ ಹವ್ಯಾಸಗಳು ಈ ರಾಶಿಯವರ ಬದುಕಿನ ದಿಕ್ಕನ್ನು ಬದಲಿಸೀತು
ದಿನಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 10, 2024 | 12:45 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿಯಿರಿ. ನಿಮ್ಮ ಇಂದಿನ (ಜನವರಿ 10) ದಿನ ಭವಿಷ್ಯ (Horoscope) ಹೀಗಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧ್ರುವ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:26 ರಿಂದ 09:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:15 ರಿಂದ 12:40ರ ವರೆಗೆ.

ಧನು ರಾಶಿ: ಉತ್ತಮ ಹವ್ಯಾಸಗಳು ನಿಮ್ಮ ಬದುಕಿನ ದಿಕ್ಕನ್ನು ಬದಲಿಸೀತು. ಮಕ್ಕಳಿಂದ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ನಿರುದ್ಯೋಗಿಗಳು ಬಯಸಿದ ಉದ್ಯೋಗವನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶವನ್ನು ಪಡೆಯುವಿರಿ. ಇಂದು ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲದ ಸಾಧ್ಯತೆಯಿದೆ. ಇದು ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಆದಾಯದಲ್ಲಿ ಪೂರ್ಣತೃಪ್ತಿಯು ನಿಮಗೆ ಇರದು. ಬಂಧುಗಳ ವಿಯೋಗವೂ ಆಗಬಹುದು. ಸ್ನೇಹಿತರು ಕೇಳಿದರೂ ಸಹಾಯ ಮಾಡದೇ ಇರುವುದು, ನಿಮಗೆ ಅನುಮಾನವು ಬರುವಂತೆ ಮಾಡುವುದು. ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾದುದ್ದು, ನಿಮಗೆ ಖುಷಿ ಕೊಡುವುದು.

ಮಕರ ರಾಶಿ: ಅಪರೂಪದ ಜನರನ್ನು ಭೇಟಿಯಾದ ಕಾರಣ ನಿಮ್ಮ ಜೀವನಕ್ಕೆ ಹೊಸ ದಿಕ್ಕು ಸಿಗಬಹುದು. ರಾಜಕೀಯವು ನಿಮ್ಮನ್ನು ಪ್ರಭಾವಿಸುವ ಸಾಧ್ಯತೆಯೂ ಇದೆ. ನಿಮ್ಮ ವ್ಯವಹಾರವನ್ನು ಮುನ್ನಡೆಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತೀರಿ. ಕಠಿಣ ಪರಿಶ್ರಮವು ನಿಷ್ಫಲವೆಂದು ಬೇಸರಿಸುವುದು ಬೇಡ.‌ ಯಾವುದೂ ನಿಷ್ಪ್ರಯೋನವಾಗದು. ಸಮಯ ಬೇಕಷ್ಟೇ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ. ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ.

ಕುಂಭ ರಾಶಿ: ನಿಮ್ಮ ಪ್ರತಿಭೆಯಿಂದ ಎಲ್ಲರಿಗೂ ಮೆಚ್ಚಿಗೆಯಾಗುವುದು. ನಿಮ್ಮೊಳಗೆ ಅಡಗಿರುವ ಶಕ್ತಿಯನ್ನು ಹೊರತಂದು ಪೂರ್ಣವಾಗಿ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಒಂದು ಯೋಜನೆಯನ್ನು ಬೇರೆ ಬೇರೆ ದೃಷ್ಟಿಯಿಂದ ನೋಡುವ ಅವಶ್ಯಕತೆ ಇದೆ. ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ಇಂದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇಂದು ಮಾಡಿದ ಕಾರ್ಯವು ನೀರಿನಲ್ಲಿ ಹೋಮ ಮಾಡಿದಂತೆ. ಎಂದೋ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ. ಇಂದು ನಿಮ್ಮ ಕೆಲಸವನ್ನು ಬದಲು ಮಾಡಿಕೊಳ್ಳಲಿದ್ದೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ.

ಮೀನ ರಾಶಿ: ಇಂದು ನಿಮಗೆ ಸುವರ್ಣ ಕ್ಷಣಗಳಂತಹ ಕೆಲವು ಉತ್ತಮ‌ ಅವಕಾಶಗಳು ಬರಲಿದ್ದು, ಅದನ್ನು ನಿಮ್ಮದಾಗಿಸಿಕೊಳ್ಳಿ. ನಿಮಗೆ ಅರಿವಿಲ್ಲದೇ ಪರರಿಗೆ ಹಿತವನ್ನು ಬಯಸುತ್ತಿರುತ್ತೀರಿ. ಇಂದು ನೀವು ಸರ್ಕಾರದಿಂದ ಬರುವ ಹಣವನ್ನು ಪಡೆದುಕೊಳ್ಳಬಹುದು. ನಿಮ್ಮ ಸಂಗಾತಿಯಿಂದ ಕೆಲವು ಕಾರ್ಯಗಳಿಗೆ ಬೆಂಬಲವನ್ನು ಪಡೆಯಬಹುದು. ಅನಪೇಕ್ಷಿತ ಮಾತುಗಳನ್ನು ನೀವು ಯಾರ ಜೊತೆಯೂ ಆಡುವುದು ಬೇಡ. ಇಂದಿನ ಕಾರ್ಯವನ್ನು ಸಾಧನೆ ಮಾಡಲು ಹೆಚ್ಚಿನ ಓಡಾಟವು ಬರಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಆರೋಗ್ಯವೂ ಕೆಡಬಹುದು. ನಿಮಗೆ ಬರುವ ಆಸ್ತಿಯಲ್ಲಿ ಹೆಚ್ಚಿನ ಲಾಭವನ್ನು ಅಪೇಕ್ಷಿಸುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ