Horoscope: ರಾಶಿಭವಿಷ್ಯ: ನಿಮ್ಮನ್ನು ಯಾರಾದರೂ ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 18ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ: ನಿಮ್ಮನ್ನು ಯಾರಾದರೂ ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಹುದು-ಎಚ್ಚರ
ರಾಶಿ ಭವಿಷ್ಯ
Edited By:

Updated on: Mar 18, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 18) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:10 ರಿಂದ ಮಧ್ಯಾಹ್ನ 09:40ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:10 ರಿಂದ 12:41ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:41 ರ ವರೆಗೆ.

ಸಿಂಹ ರಾಶಿ : ಸಂಗಾತಿಯ ಜೊತೆಗಿನ ಮನಸ್ತಾಪವನ್ನು ದೂರ ಮಾಡಿಕೊಳ್ಳಬೇಕಿದೆ. ರಾಜಕಾರಣದಲ್ಲಿ ನಿಮಗೆ ಮೋಸವಾಗಬಹುದು. ಸೌಂದರ್ಯದ ಬಗ್ಗೆ ಹೆಚ್ಚು ಆಲೋಚನೆಗಳು ಬರಬಹುದು. ನೆರೆ ಹೊರೆಯರಲ್ಲಿ ಸೌಹಾರ್ದತೆ ಇರಲಿ. ಇಂದು ಯಾರಿಗೋ ಸಹಾಯ ಮಾಡಲು ಹೋಗಿ ವಂಚಿತರಾಗುವಿರಿ. ಮೂರ್ಖರಂತೆ ವರ್ತಿಸುವುದು ಬೇಡ. ಸ್ತ್ರೀಯರಿಗೆ ಮೇಲಧಿಕಾರಿಗಳ ಮಾತು ಬೇಸರ ತರಿಸಬಹುದು. ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು. ಇಂದು ನಿಮ್ಮ‌ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ನಿಮ್ಮ ದೌರ್ಬಲ್ಯವನ್ನು ಯಾರಾದರೂ ಬಳಸಿಕೊಳ್ಳಬಹುದು.

ಕನ್ಯಾ ರಾಶಿ : ನಿಮ್ಮ ಕಾರ್ಯದ ವಿಧಾನವು ಸರಳವಾಗಿದ್ದು ಇತರರ ಮೆಚ್ಚುಗೆ ಪಡೆಯಬಹುದು. ಅನಾರೋಗ್ಯದ ಮೂಲವನ್ನು ಕಂಡುಕೊಂಡು ಅದರ ನಿವಾರಣೆಗೆ ಯೋಗ್ಯವಾದ ಶೈಲಿಯನ್ನು ರೂಪಿಸಿಕೊಳ್ಳಿ. ಯಾವುದಾದರೂ ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ. ಇಂದು ಯಾವುದೇ ವಿವಾದಿತ ಮಾತುಗಳನ್ನು ಆಡದಂತೆ ಎಚ್ಚರ ವಹಿಸಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಕುಟುಂಬದ ಜೊತೆ ಸೌಹಾರ್ದತೆ ಉಂಟಾಗುವುದು. ಇತರರ ಜೊತೆ ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಮಕ್ಕಳ ಬಗ್ಗೆ ಅತಿಯಾದ ಮೋಹವಿರಲಿದೆ.

ತುಲಾ ರಾಶಿ : ಸಂಬಂಧಗಳಲ್ಲಿ ಉಂಟಾದ ಬಿರುಕನ್ನು ಸರಿ ಮಾಡಿಕೊಳ್ಳವ ಕಡೆ ನಿಮ್ಮ ಪ್ರಯತ್ನವು ಇರುವುದು. ಸಹೋದರರ ನಡುವೆ ಕಲಹವು ಉಂಟಾಗಬಹುದು. ಎಲ್ಲವನ್ನೂ ತಿಳಿದಿದ್ದೇನೆ ಎಂಬ ಅಹಂಕಾರವು ಬರಬಹುದು. ವೃತ್ತಿಯಲ್ಲಿ ಆದಾಯವು ಕುಸಿತವು ಕಾಣಿಸಬಹುದು. ಒಪ್ಪಿಕೊಂಡ‌ ಕಾರ್ಯಕ್ಕೆ ಹಣದ ಕೊರತೆಯಿಂದ ನಿಧಾನವಾಗಲಿದೆ. ಪರಿಚಿತರು ಆಪ್ತರಾಗಬಹುದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ತಯಾರಿ ನಡೆಸುವಿರಿ. ನಿಮ್ಮ ಹೆಸರಿನಿಂದ ಬೇರೆಯವರು ಕೆಲಸ ಮಾಡಿಕೊಳ್ಳಬಹುದು. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು. ತಪ್ಪನ್ನು ಒಪ್ಪಿಕೊಳ್ಳದೇ ಉದ್ಧಟತನವನ್ನು ತೋರಿಸುವಿರಿ.

ವೃಶ್ಚಿಕ ರಾಶಿ : ನೀವು ಇಂದು ಕೆಲವು ವಿಚಾರಕ್ಕೆ ಹಠವನ್ನು ಮಾಡುವುದು ಬೇಡ. ಈಗಾಗಲೇ ಮಾಡಿಕೊಂಡ ಸಾಲವನ್ನು ಸರಿಯಾದ ಸಮಯಕ್ಕೆ ತೀರಿಸಲು ಪ್ರಯತ್ನವನ್ನು ಮಾಡಿ. ತಾಯಿಯ ಆರೋಗ್ಯಕ್ಕೆ ತುರ್ತು ಚಿಕಿತ್ಸೆಯನ್ನು ಮಾಡಬೇಕಾದೀತು. ಯಾರಾದರೂ ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಹುದು. ನಿಮ್ಮ ಔದಾರ್ಯವು ನಿಮ್ಮವರಿಗೆ ಸರಿ ಕಾಣದು. ಇಂದಿನ ಸೋಲಿನಿಂದ ಪಾಠ ಕಲಿಯುವಿರಿ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ಸಿಟ್ಟನ್ನು ತಾಳ್ಮೆಯ ಅಸ್ತ್ರದಿಂದ ಎದುರಿಸಿ, ಕಾರ್ಯವನ್ನು ಸಫಲಗೊಳಿಸಿಕೊಳ್ಳಿ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ‌ ಮೇಲೆ ಬರಲಿದೆ.