AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಕಠಿಣ ಪರಿಶ್ರಮವು ಈ ರಾಶಿಯವರಿಗೆ ಫಲ ನೀಡುತ್ತದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 1 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಕಠಿಣ ಪರಿಶ್ರಮವು ಈ ರಾಶಿಯವರಿಗೆ ಫಲ ನೀಡುತ್ತದೆ
ದಿನಭವಿಷ್ಯImage Credit source: freepik
Follow us
Rakesh Nayak Manchi
|

Updated on: Apr 01, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಏಪ್ರಿಲ್ 1) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:01 ರಿಂದ 09:33ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:05 ರಿಂದ ಮಧ್ಯಾಹ್ನ 12:36ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ 03:40ರ ವರೆಗೆ.

ಧನು ರಾಶಿ: ನಿಮ್ಮ ಪರಿಶ್ರಮವನ್ನು ಕಂಡು ಯಾರಾದರೂ ಸಹಕಾರ ನೀಡಬಹುದು. ಆಸ್ತಿಗೆ ಸಂಬಂಧಿಸಿದಂತೆ ನ್ಯಾಯದ ಮಾರ್ಗವು ಮುಖ್ಯವಾಗಿರಲಿ. ವ್ಯಾಪಾರದಲ್ಲಿ ಮೋಸದಿಂದ ನಿಮ್ಮ ವಸ್ತುವು ಬದಲಾಗಬಹುದು. ಹೊಸ ವ್ಯಕ್ತಿಗಳ ಜೊತೆ ವ್ಯವಹರಿಸುವಾಗ ಧೈರ್ಯವನ್ನು ಕಳೆದುಕೊಳ್ಳದೇ ನಿರ್ಬಿಡೆಯಿಂದ ಇರಿ. ನೀವು ಯಾರಿಗಾದರೂ ಕೊಟ್ಟ ಭರವಸೆಯನ್ನು ಪೂರೈಸುವಿರಿ. ನಿಮ್ಮ ಸಂಗಾತಿಯ ವೃತ್ತಿಜೀವನದ ಬಗ್ಗೆ ನೀವು ದೊಡ್ಡ ಮುಖ್ಯ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನೀವು ಬಹಳ ಸಮಯದ ಅನಂತರ ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಂಗಾತಿಯ ನಡುವಣ ಭಿನ್ನಾಭಿಪ್ರಾಯವನ್ನು ಮಾತನಾಡಿ ಪರಿಹರಿಸಬಹುದು. ನಿಮ್ಮ ಹಳೆಯ ತಪ್ಪುಗಳಿಂದ ನೀವು ಕಲಿಯಬೇಕು. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ದೇಹದಂಡನೆಯಿಂದ ಹೊಸ ಖಾಯಿಲೆಯು ಬರಬಹುದು.

ಮಕರ ರಾಶಿ: ಇಂದು ಅನುಕೂಲಕರವಾದ ಪರಿಸ್ಥಿತಿಗಳನ್ನು ನೀವೇ ಸೃಷ್ಟಿಸಿಕೊಳ್ಳಬೇಕಾಗುವುದು.‌ ಕಷ್ಟಪಟ್ಟು ಕೆಲಸ ಮಾಡಿಯೇ ಯಶಸ್ಸು ಗಳಿಸುವಿರಿ. ನಿಮ್ಮ ಸಾಮರ್ಥ್ಯದ ಆಧಾರದ ಮೇಲೆ ಸಾಮಾಜಿಕ ಗೌರವ ಸಿಗುವುದು. ವಿದ್ಯಾರ್ಥಿಗಳ ಬಹು ನಿರೀಕ್ಷೆ ತಪ್ಪಾಗುವ ಸಾಧ್ಯತೆ ಇದೆ.‌ ಅವರಿಗೆ ಸಮಾಧಾನವನ್ನು ಹೇಳಬೇಕಾಗಬಹುದು. ಆಲೋಚನೆಗಳಿಗೆ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸಬಹುದು. ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ತಪ್ಪು ವಿಷಯಗಳಿಗೆ ಗಮನ ಕೊಡುವುದನ್ನು ತಪ್ಪಿಸಿ. ಇಂದು ಕೆಲವು ಸಂದರ್ಭದಲ್ಲಿ ಸುಳ್ಳು ಹೇಳಬೇಕಾಗಬಹುದು. ನಿಮ್ಮ ಸಂಪೂರ್ಣ ಗಮನವು ವೈಯಕ್ತಿಕ ವಿಷಯಗಳ ಮೇಲೆ ಇರುತ್ತದೆ. ನಿಮ್ಮ ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ನಿಮ್ಮ ಜೀವನ ಸಂಗಾತಿಯಿಂದ ನೀವು ಸಾಕಷ್ಟು ಬೆಂಬಲ ಪಡೆಯುವಿರಿ. ಆಪ್ತರಿಂದ ನಿಮಗೆ ಇಷ್ಟವಾದ ವಸ್ತುವು ಪ್ರಾಪ್ತವಾಗುವುದು. ಸಾಲ‌ ಕೊಟ್ಟವರು ನಿಮ್ಮನ್ನು ಪೀಡಿಸಬಹುದು.

ಕುಂಭ ರಾಶಿ: ನಿಮ್ಮ ದಿನದ ಆರಂಭವೇ ಇಂದಿನ ಕಾರ್ಯವನ್ನು ಹೇಳುವುದು. ಕೌಟುಂಬಿಕ ಒತ್ತಡದ ಕಾರಣ ಕಾರ್ಯದ ಮೇಲೆ ಗಮನ ಕಡಿಮೆಯಾಗಿ ಬೇರೆ ಏನನ್ನಾದರೂ ಮಾಡುವಿರಿ. ಸಮಯವು ನಿಮಗೆ ಕೆಲವು ಅವಕಾಶವನ್ನು ನೀಡುವುದು. ವ್ಯಾಪಾರ ಚಟುವಟಿಕೆಗಳು ಸುಧಾರಿಸುತ್ತವೆ, ಆರ್ಥಿಕ ಪರಿಸ್ಥಿತಿ ಮೊದಲಿನಂತೆಯೇ ಇರುತ್ತದೆ. ವ್ಯಾಪಾರ ಯೋಜನೆಗಳಲ್ಲಿ ಗಂಭೀರವಾಗಿ ಕೆಲಸ ಮಾಡಬೇಕಾಗುತ್ತದೆ. ಪತಿ-ಪತ್ನಿಯರ ನಡುವಿನ ಸಂಬಂಧಗಳು ಸುಧಾರಿಸುತ್ತವೆ. ಎದುರಾಳಿಯು ನಿಮ್ಮ‌ ವಿರುದ್ಧ ಸಂಚು ಮಾಡಬಹುದು. ಮನೆಯನ್ನು ನವೀಕರಿಸಲು ಸಹ ನೀವು ಹೆಚ್ಚು ಗಮನಹರಿಸುತ್ತೀರಿ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ನಿಮ್ಮ ಪ್ರೀತಿಗೆ ಬೆಲೆ ಸಿಗದೇಹೋದೀತು.

ಮೀನ ರಾಶಿ: ಇಂದು ಆರ್ಥಿಕತೆಯ ಮೂಲಕ ನಿಮ್ಮ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಒಪ್ಪಿಗೆಯಾದರಷ್ಟೇ ಇಂದಿನ‌ ಜವಾಬ್ದಾರಿಯನ್ನು ನಿರ್ವಹಿಸಿ. ಮುಖ್ಯ ಕಾರ್ಯದ‌ ಮೊದಲು ಮೊದಲು ಆಪ್ತವಲಯದಲ್ಲಿ ಚರ್ಚಿಸಿ. ವ್ಯವಹಾರದಲ್ಲಿ ನೀವು ಮೇಲುಗೈ ಆಗಲಿದೆ. ಆರೋಗ್ಯ ಸಮಸ್ಯೆಯಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಯಾವುದೇ ಕೆಲಸದಲ್ಲಿ ನಿರ್ಲಕ್ಷ್ಯವನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ. ಸಂತಾನ ಸುದ್ದಿಯು ನಿಮಗೆ ಖುಷಿ ಕೊಟ್ಟೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ‌ ಸ್ಥಿತಿಗೆ ಮರಳುವಿರಿ. ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟ‌ಮಾಡುವ ಆಲೋಚನೆ ಇರಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್