Horoscope: ದಿನ ಭವಿಷ್ಯ; ಇಂದು ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 12, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜೂನ್. 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ 2:33 ರಿಂದ 14:10ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:42 ರಿಂದ 09:19ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:33ರ ವರೆಗೆ.

ಧನು ರಾಶಿ :ಇಂದು ನಿಮ್ಮ ಬಗ್ಗೆ ಸಕಾರಾತ್ಮವಾಗಿ ಹೇಳಿದರೂ ಯಾರೂ ನಂಬಲಾರರು. ಕುಟುಂಬದ ಕಾಳಜಿಯೇ ನಿಮ್ಮೆದುರು ಮತ್ತೆ ಮತ್ತೆ ಬರಬಹುದು. ಸಜ್ಜನರ ಸಹವಾಸ ಸಿಗಲಿದೆ. ಅನ್ಯಚಿಂತೆಯಿಂದ ಕೆಲಸಗಳು ಹಾಗೆಯೇ ಉಳಿದಿರಬಹುದು. ಸಮಾಜಕ್ಕೆಂದು ನಿಮ್ಮನ್ನು ನೀವು ಸಮರ್ಪಣೆ ಮಾಡಿಕೊಳ್ಳುವ ಮನಸ್ಸು ಮಾಡುವಿರಿ. ಅದು ನಿಮಗೆ ಮುಳುವಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಗೊತ್ತಿಲ್ಲದ ವಿಚಾರವನ್ನು ತಿಳಿಯಲು ಪ್ರಯತ್ನಿಸಿ. ಪ್ರಪಂಚದ ಬೇರೆ ಬೇರೆ ಸ್ಥಳಗಳಿಗೆ ಹೋಗುವ ಆಸೆಯುಳ್ಳವರಾಗಿರುವಿರಿ. ಧಾರ್ಮಿಕ ಕಾರ್ಯಗಳನ್ನು ಮಾಡಲು ಒಲವು ಬರಲಿದೆ. ಕುಟುಂಬದವರು ನಿಮ್ಮನ್ನು ಬಹಳ ಪ್ರೀತಿಸುವರು. ಅವರಿಗೆ ಸ್ವಲ್ಪ ಸಮಯ ಕೊಡಿ. ಹಣವನ್ನು ಉಳಿಸಲು ಪ್ರಯತ್ನಶೀಲರಾಗುವಿರಿ. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿನವೂ ಇದಾಗಬಹುದು. ನೀವು ಕೆಲವು ಅಪೂರ್ಣ ಕಾರ್ಯಗಳನ್ನು ಮಾಡಿ ಮುಗಿಸುವಿರಿ.

ಮಕರ ರಾಶಿ :ಇಂದು ನಿಮ್ಮ ಹೂಡಿಕೆ ವಿಚಾರವನ್ನು ರಹಸ್ಯವಾಗಿ ಇಡುವಿರಿ. ಇದನ್ನು ಯಾರಿಗೂ ತಿಳಿಸಲು ಇಷ್ಟಪಡುವುದಿಲ್ಲ. ನಿಮ್ಮನ್ನು ಇಷ್ಟಪಟ್ಟವರಿಗೆ ಇಂದು ನಿಮ್ಮಿಂದ‌ ಅಸಮಾಧಾನವಾಗುವ ಸಾಧ್ಯತೆ ಇದೆ. ಅಧಿಕಾರದ ಆಸೆಯಿಂದ ಮತ್ಯಾರನ್ನೋ ಕೆಟ್ಟವರನ್ನಾಗಿ ಮಾಡುವುದು ಸರಿಯಲ್ಲ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ, ಬೇಕಾದ ಶ್ರಮವಹಿಸಿ. ಅನಾರೋಗ್ಯವು ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಬಹುದು. ಅನಾಯಸದಿಂದ ಬಂದ ಹಣವು ನಿಮಗೆ ದಕ್ಕದು. ಬೇಡದ ಕಾರ್ಯಕ್ಕೆ ವಿನಿಯೋಗವಾಗಲಿದೆ. ಮಾತನ್ನು ಯೋಗ್ಯವಾಗಿ, ಯೋಗ್ಯಸ್ಥಾನದಲ್ಲಿ ಆಡಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೋರಾಡುವಿರಿ. ಯಾರನ್ನೂ ಒತ್ತಾಯಿಸದೇ ಕೆಲಸವನ್ನು ಮಾಡಿಸಿಕೊಳ್ಳಿ. ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ವೃತ್ತಿಯ ಕುರಿತು ಯಾರಾದರೂ ಕೇಳಿಯಾರು. ಆದಾಯವನ್ನೂ ಕೇಳಬಹುದು.

ಕುಂಭ ರಾಶಿ :ಇಂದು ನಿಮ್ಮನ್ನು ನಂಬಿದವರಿಗೆ ದ್ರೋಹವಾಗದಂತೆ ಕೆಲಸವನ್ನು ಮಾಡಿ. ಹಣದ ತೊಂದರೆ ಎದ್ದು ಕಾಣಿಸುತ್ತದೆ. ಇದರಿಂದ ಚಿಂತೆಯೂ ಆಗಬಹುದು. ಮನೆಯವರ ಸಹಾಯವು ಅನಿವಾರ್ಯವಾದರೆ ಸಿಗಲಿದೆ. ಮನೆಯವರ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ಒತ್ತಡವನ್ನು ತಂದುಕೊಳ್ಳದೇ ಕೆಲಸವನ್ನು ಮಾಡಿ. ಇಲ್ಲವಾದರೆ ಆರೋಗ್ಯದ ಮೇಲೆ ಹೆಚ್ಚು ಪ್ರಭಾವವನ್ನು ಬೀರಬಹುದು. ಗೊತ್ತಿದ್ದರೂ ಕೇಳದೇ ಯಾರಿಗೂ ಏನನ್ನೂ ಹೇಳಬೇಡಿ. ವಸ್ತುಗಳ ಖರೀದಿಯಿಂದ ಉಂಟಾದ ಧನದ ವ್ಯಯವು ನಿಮ್ಮಲ್ಲಿ ಆತಂಕವನ್ನು ಉಂಟುಮಾಡಲಿದೆ. ಕಥೆಯನ್ನು ಹೇಳವ ಆಸಕ್ತಿ ಹೆಚ್ಚಾಗಬಹುದು. ಬರವಣಿಗೆಯ ವಿಚಾರದಲ್ಲಿ ಹೆಚ್ಚು ಮನಸ್ಸನ್ನು ಕೊಡಿ. ಬೇಸರಿಸದೇ ಬಂದುದನ್ನು ಬಂದಂತೆ ಎದುರಿಸವುದು ನಿಮಗೆ ಸ್ವಭಾವಸಿದ್ಧ. ವಾಚಾಳಿತನವು ನಿಮ್ಮ ಸ್ನೇಹಕ್ಕೆ ತೊಂದರೆಯಾಗಬಹುದು. ಕಾರ್ಯಕ್ಷೇತ್ರದಲ್ಲಿ, ನೀವು ಬಯಸಿದ ಕೆಲಸವನ್ನು ಮಾಡುವಿರಿ. ನೀವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಕಾರ್ಯನಿರ್ವಹಣೆಗೆ ಪ್ರಶಂಸೆಯು ಸಿಗಲಿದೆ. ಗ್ರಾಹಕರಿಂದ ಮೋಸ ಹೋಗಬೇಕಾದೀತು.

ಮೀನ ರಾಶಿ :ಇಂದು ನಿಮ್ಮ ನಿರೀಕ್ಷಿತ ಸುದ್ದಿಯಿಂದ ಸಂತೋಷವಗಲಿದೆ. ಮನಸ್ಸು ಮತ್ತು ದೇಹಕ್ಕೂ ಶ್ರಮವಾಗಬಹುದು. ಯೋಗ ಹಾಗೂ ಧ್ಯಾನದಿಂದ ಶ್ರಮದ ಪರಿಹಾರವಾಗಲಿದೆ. ಯಾವುದೂ ಸರಿಯಿಲ್ಲ ಎಂದು ಹೇಳುವ ಬದಲು ಏನು ಸರಿಯಿದೆ? ಹೇಗೆ ಸರಿ ಮಾಡಬಹುದು ಎನ್ನುವ ಬಗ್ಗೆ ಗಮನ ಕೊಡಿ. ಸಂಸ್ಥೆಯು ನಿಮ್ಮ ನೇತೃತ್ವದಲ್ಲಿ ಚೆನ್ನಾಗಿ ನಡೆಯಬಹದು. ಅವುಗಳ ಕುರಿತು ಅತಿಯಾಗಿ ಆಲೋಚಿಸಿದಷ್ಟೂ ಸಮಸ್ಯೆಗಳು ಹಾಗೇ ಇರುತ್ತವೆ. ಹೊಸ ಉದ್ಯೋಗದ ಸೃಷ್ಟಿಗೆ ಹೆಚ್ಚು ಮನಸ್ಸು ಮಾಡುವಿರಿ. ವಾಹನದಿಂದ ಅಪಘಾತವಾಗುವ ಸಾಧ್ಯತೆ. ವೃತ್ತಿಯ ಸ್ಥಳದಲ್ಲಿ ನೀವು ಸಂತೋಷವಾಗಿ ಕೆಲಸಮಾಡುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು