
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್ 30) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:34 ರಿಂದ 11:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:31 ರಿಂದ 08:02
ಧನು ರಾಶಿ : ಇಂದು ನಿಮ್ಮವರ ಮಾತುಗಳು ಗೊಂದಲವನ್ನು ತರಿಸಬಹುದು. ನಿಮ್ಮ ಹಳೆಯ ತಪ್ಪುಗಳೇ ನಿಮಗೆ ತೊಂದರೆ ಉಂಟುಮಾಡುವುದು. ಎಂತಹ ಹಣಕಾಸಿನ ವಹಿವಾಟು ಮಾಡುವಾಗ ಖಚಿತವಾಗಿ ಇಲ್ಲದೇ ಮಾಡುವುದು ಬೇಡ. ಸಂಬಂಧಗಳ ನಡುವಿನ ಸಮಸ್ಯೆಯನ್ನು ಮಾತುಕತೆಯಿಂದ ಪರಿಹಾರ ಸಿಗಲಿದೆ. ಆಸ್ತಿಯ ಸಮಸ್ಯೆಯನ್ನು ದೂರಮಾಡಿಕೊಳ್ಳಬಹುದು. ನೀವು ಯಾರಿಗಾದರೂ ಮಾತುಕೊಟ್ಟರೆ, ಅದನ್ನು ಪೂರೈಸಲು ಪ್ರಯತ್ನಿಸುವಿರಿ. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು.
ಮಕರ ರಾಶಿ : ನಿಮ್ಮ ಆದಾಯ ಮತ್ತು ಖರ್ಚಿನ ನಡುವೆ ಸಮತೋಲನದ ಅವಶ್ಯಕತೆ ಇರುವುದು. ಹಣಕಾಸಿನ ಪರಿಸ್ಥಿತಿಗೆ ಸಂಬಂಧಿಸಿದ ಕೆಲವು ತೊಂದರೆಗೆ ಪರಿಹಾರವನ್ನು ಬೇಗ ಕಂಡುಕೊಳ್ಳಬೇಕಾಗುವುದು. ನಕಾರಾತ್ಮಕ ಚಿಂತನೆಯನ್ನು ನಿಮಗೆ ಕೆಲವರು ತುಂಬಬಹುದು. ಅಂತಹ ಜನರ ಸಹವಾಸದಿಂದ ದೂರವಿರಬೇಕಾಗುವುದು. ನೀವು ಕೆಲವು ಹೊಸಬರನ್ನು ಭೇಟಿ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳಬಹುದು. ರಾಜಕೀಯವಾಗಿ ಒತ್ತಡಗಳು ಬರಬಹುದು. ಅದನ್ನು ತಾಳ್ಮೆಯಿಂದ ಎದುರಿಸಬೇಕು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು.
ಕುಂಭ ರಾಶಿ : ಇಂದು ನಿಮ್ಮ ಬಗ್ಗೆ ಕುಟುಂಬದ ಸದಸ್ಯರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು ಅದನ್ನು ಪೂರೈಸುವ ಬಗ್ಗೆ ಹೆಚ್ಚು ಸಮಯವನ್ನು ಕೊಡುವಿರಿ. ನೀವು ನಿಮ್ಮನ್ನು ಅಸಡ್ಡೆ ಮಾಡಿಕೊಳ್ಳುತ್ತಿದ್ದ ವಿಷಯಗಳ ಪರಿಣಾಮಗಳು ದೂರವಾಗುತ್ತವೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಏಕಾಗ್ರತೆಯನ್ನು ಹೆಚ್ಚಿಸುವುದು ಮುಖ್ಯ. ಸಂಶೋಧನಾತ್ಮಕ ವಿಚಾರಕ್ಕೆ ನಿಮ್ಮಿಂದ ಅಧಿಕ ಪ್ರಯತ್ನವಿರುವುದು. ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಸಡಿಲಬಿಡುವುದು ಬೇಡ. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ. ಬಂಧುಗಳಿಂದ ಕೆಲಸವು ಹಾಳಾಗಬಹುದು.
ಮೀನ ರಾಶಿ : ಇಂದು ನಿಮ್ಮ ಸಮಯವನ್ನು ಉಪಯೋಗಕ್ಕೆ ಬಾರದ ಚಟುವಟಿಕೆಗಳಲ್ಲಿ ವ್ಯರ್ಥ ಮಾಡುವಿರಿ. ನಿಮ್ಮ ಇಂದಿನ ಮಾತುಗಳು ನಿಮ್ಮ ಬಗ್ಗೆ ಹೇಳುವುದು. ಸಾಮರ್ಥ್ಯಕ್ಕಿಂತ ಹೆಚ್ಚಿನ ಸವಾಲನ್ನು ಎದುರಿಸುವ ಉತ್ಸಾಹವಿರುವುದು. ಅದಕ್ಕೆ ತಗುಲುವ ಖರ್ಚುಗಳನ್ನೂ ನಿಯಂತ್ರಣದಲ್ಲಿಡಿ. ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ಅದಕ್ಕೆ ಸಂಬಂಧಿಸಿದ ಯೋಜನೆಯ ಪೂಋಣ ಮಾಹಿತಿ ಇರಲಿ. ನೀವು ಇಂದು ಹೊರಗಿನವರಿಗೆ ಯಾವುದೇ ಆಂತರಿಕ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬಾರದು. ರಕ್ತ ಸಂಬಂಧಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ನಿಮ್ಮ ಯೋಜನೆಗಳನ್ನು ನೀವು ವೇಗಗೊಳಿಸುತ್ತೀರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ.
-ಲೋಹಿತ ಹೆಬ್ಬಾರ್-8762924271 (what’s app only)