Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 31 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ
ದಿನಭವಿಷ್ಯImage Credit source: freepik
Follow us
Rakesh Nayak Manchi
|

Updated on: Mar 31, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 31) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:37 ರಿಂದ 02:08ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ.

ಧನು ರಾಶಿ: ನಿಮಗೆ ಇಂದು ಆರ್ಥಿಕತೆಯ ಬಗ್ಗೆ ಹೆಚ್ಚು ಉತ್ತವಾಗುವ ಅವಕಾಶಗಳು ಇದ್ದರೂ ಅದನ್ನು ಬಿಡುವಿರಿ. ಸಂಗಾತಿಯ ಮಾತಿನಿಂದ ನಿಮಗೆ ಪ್ರೇರಣೆ ಸಿಗಬಹುದು. ಇಂದು ಅವಿವಾಹಿತರು ವಿವಾಹದ ಬಗ್ಗೆ ಅಧಿಕ ಚಿಂತಿತರಾಗುವರು. ನಿಮ್ಮ ವೇತನದ ಬಗ್ಗೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡುವಿರಿ. ನಿಮ್ಮ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಿ ಸಂತೋಷಪಡುವಿರಿ. ಉದ್ಯಮದ ವಿಚಾರವು ಕುಟುಂಬದವರೆಗೂ ಬರಬಹುದು. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ.

ಮಕರ ರಾಶಿ: ಇಂದು ನೀವು ದೈನಂದಿನ ಚಟುವಟಿಕೆಯಿಂದ ಮುಕ್ತರಾಗಿ ಬಹಳ ಸಂತೋಷದಿಂದ ಇರುವಿರಿ. ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಿರುವುದು. ನಿಮ್ಮ ಕಾರ್ಯವನ್ನು ಅಸಹಜವಾಗಿ ಪೂರ್ಣ ಮಾಡುವಿರಿ. ನಿಮ್ಮ ವೈಯಕ್ತಿಕ ಸಂಬಂಧಗಳಲ್ಲಿ ಆಪ್ತತೆಯು ದೂರವಾಗಬಹುದು. ನಿಮ್ಮ ಬಗ್ಗೆ ನೀವು ಹೆಚ್ಚು ಗಮನ ಕೊಡುವಿರಿ. ಅಪರಿಚಿತರ ಮಾತು ನಿಮಗೆ ಸಮಾಧಾನವನ್ನು ಕೊಡಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ರಾಜಕೀಯ ವ್ಯಕ್ತಿಗಳ ಸಂಪರ್ಕ ಆಗಬಹುದು.

ಕುಂಭ ರಾಶಿ: ನೀವು ಇಂದು ಸ್ನೇಹಿತರ ಸಹಾಯಕ್ಕೆ ಹೋಗುವುದು ನಿಮ್ಮ ಬಗ್ಗೆ ಇರುವ ಭಾವವು ಬದಲಾಗುವುದು. ಇಂದಿನ ದೂರ ಪ್ರಯಾಣವು ನಿಮಗೆ ಆಯಾಸವನ್ನು ಕೊಡದೇಹೋಗಬಹುದು. ಆರ್ಥಿಕತೆಯಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳಬೇಕಾಗುವುದು. ಭೂವ್ಯವಹಾರವು ನೀವಂದುಕೊಂಡಷ್ಟು ವೇಗವಾಗಿ ಮುನ್ನಡೆಯದು. ನಿಮ್ಮ ಪ್ರಮುಖ ವ್ಯಾಪಾರ ಸಂಪರ್ಕಗಳನ್ನು ಅಭಿವೃದ್ಧಿ ಮಾಡಿಕೊಳ್ಳುವಿರಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವರ್ತನೆಯು ಇತರರಿಗೆ ಅಸಮಾಧಾನಗೊಳಿಸಬಹುದು. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು.

ಮೀನ ರಾಶಿ: ಇಂದು ನಿಮ್ಮ ನಿರೀಕ್ಷಿತ ಲಾಭವು ವ್ಯಾಪಾರದಲ್ಲಿ ಕಾಣಿಸದೇ ಇರುವುದು ಬೇಸರವಾಗುವುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗುವುದು. ಧಾರ್ಮಿಕ‌ ಕಾರ್ಯಕ್ಕೆ ಖರ್ಚು ಮಾಡುವುದು ನಿಮಗೆ ಇಷ್ಟದ ಸಂಗತಿಯಾಗಲಿದೆ. ನೀವು ಇಂದು ನಿಮ್ಮ ಪ್ರತಿಸ್ಪರ್ಧಿಗಳ ಎದುರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಇಂದಿನ ನಿಮ್ಮ ಆಲಸ್ಯದಿಂದ ಪ್ರಮುಖ ಕಾರ್ಯಗಳು ಪೂರ್ಣವಾಗದೇ ಹಾಗೆಯೇ ಉಳಿದುಕೊಳ್ಳಬಹುದು. ನಿಮ್ಮ ತಾಯಿಯ ಕಡೆ ಯಾರಿಗಾದರೂ ಅನಾರೋಗ್ಯವು ಅಧಿಕವಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು. ಪ್ರೇಮಜೀವನವು ನಿಮಗೆ ಬಂಧನದಂತೆ ಅನ್ನಿಸಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು