AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ವಿಘ್ನಗಳು ಬರಲಿವೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 24 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ವಿಘ್ನಗಳು ಬರಲಿವೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 24, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:49 ರಿಂದ 09:23 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ  12:21ರ ವರೆಗೆ.

ಮೇಷ ರಾಶಿ: ಶೀಘ್ರದಲ್ಲೇ ಹಣವನ್ನು ಪಡೆಯುವ ವಿಧಾ‌ನಕ್ಕೆ ಕೈ ಹಾಕುವ ಮೊದಲು ಆಪ್ತರ ಸಲಹೆಯನ್ನು ಪಡೆಯಿರಿ. ನಿಮ್ಮಿಂದ ಕುಟುಂಬಕ್ಕೆ ಉತ್ತಮವಾದ ಹೆಸರು ಬರಲಿದೆ. ಇಂದು ನಿಮ್ಮನ್ನು ಹುಡುಕಿಕೊಂಡು ಬರುವರಿಂದ ನಿಮ್ಮ ವಿವಾಹವು ನಿಶ್ಚಯವಾಗಲಿದೆ. ನಿಮ್ಮ‌‌ ಸ್ನೇಹವನ್ನು ಬಯಸಲು ಇಂದು ಅನೇಕರು ಇರಲಿದ್ದಾರೆ. ಅಮುಖ್ಯವಾದ ಕಾರ್ಯಗಳಿಗೆ ಓಡಾಟವನ್ನು ಮಾಡಬೇಕಾದೀತು. ಪಾಲುದಾರಿಕೆಯು ನಿಮಗೆ ಮೋಸದಂತೆ ಕಾಣುವುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು. ನೀರಿನ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು. ಉದ್ಯಮಿಗಳ ಭೇಟಿ ಮಾಡುವಿರಿ. ಜವಾಬ್ದಾರಿಯನ್ನು ಪೂರೈಸಿ ಕೈಬಿಡಿ.

ವೃಷಭ ರಾಶಿ: ಇಂದು ಲೆಕ್ಕ ಪರಿಶೋಧಕರು ಉತ್ತಮ ಆದಾಯದ ನಿರೀಕ್ಷೆಯಲ್ಲಿ ಇರುವರು. ರಕ್ಷಣಾಕಾರ್ಯದಲ್ಲಿ ಇರುವವರಿಗೆ ಸ್ಥಾನ, ಮಾನ ಪ್ರಾಪ್ತಿಯಾಗಲಿದೆ‌. ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮುಂಗೋಪಿಯಾಗಿ ಕಾರ್ಯಗಳನ್ನು ಮಾಡಬೇಡಿ.‌ ಪ್ರೀತಿಗೆ ಬೆಲೆಯನ್ನು ಕೊಡುವ ನಿಮ್ಮ ಹವ್ಯಾಸವು ಮುಂದುವರಿಯಲಿ. ಯಾರದೋ ಸಂಕಟದಲ್ಲಿ ನೀವು ಭಾಗಿಗಳಾಗುವಿರಿ. ನಿಮ್ಮ ಸಂಗತಿ ಇಂದು ಸ್ವರ್ಗದ ಮೇಲೆ ಇದೆ, ಇಂದು ಅದು ನಿಮಗೆ ಅರ್ಥವಾಗುತ್ತದೆ. ನಿಮ್ಮ ಪ್ರಯತ್ನಕ್ಕೆ ಸರಿಯಾದ ಫಲವು ಸಿಗುವುದು. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಇಂದು ಖರ್ಚಿನ ಬಗ್ಗೆ ಊಹೆಗೂ ಸಿಗದು. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ.

ಮಿಥುನ ರಾಶಿ: ಉಪಯೋಗವಿಲ್ಲದ ವಸ್ತುಗಳನ್ನು ಬೇರೆ ಮಾಡುವಿರಿ. ಮೌನದಲ್ಲಿಯೂ ಅದು ಬಗೆಹರಿಯಬಹುದು ಎನ್ನುವ ಚಿಂತನೆಯನ್ನು ಮೊದಲು ಮಾಡಿಕೊಂಡು ಕಲಹಾದಿಗಳು ಬೇಕೇ ಎನ್ನುವ ತೀರ್ಮಾನಕ್ಕೆ ಬನ್ನಿ. ಪ್ರಯಾಣದ ಆಯಾಸವು ನಿಮ್ಮನ್ನು ದುರ್ಬಲಗೊಳಿಸುತ್ತದೆ‌. ನಿಮ್ಮ ಯೋಜನೆಗೆಳಿಗೆ ಪುರಸ್ಕಾರಗಳು ಸಿಗಬಹುದು. ಸರ್ಕಾರೀ ಕಾರ್ಯಗಳು ವಿಳಂಬವಾಗಲಿದೆ. ಚಿತ್ರಕಾರರಿಗೆ ಅವಕಾಶಗಳು ಬರಬಹುದು. ಜೀವನದಲ್ಲಿ ಅನೇಕರಿಂದ ನೀವು ಹಿಂದೆ ಬೀಳುತ್ತೀರಿ. ಇದು ನಿಮ್ಮ ಜೀವನಸಂಗಾತಿ ಯೊಂದಿಗಿನ ಅದ್ಭುತ ದಿನವಾಗಿದೆ. ನಿಮ್ಮ ಕಾಳಜಿಯು ಇತರರಿಗೆ ಮುಜುಗರವನ್ನು ತಂದೀತು. ಕಟ್ಟಡ ನಿರ್ಮಾಣದವರಿಗೆ ಹೆಚ್ಚು ಲಾಭವಾಗಲಿದೆ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ.

ಕಟಕ ರಾಶಿ: ಇಂದು ವಿವಾಹಕ್ಕೆ ಸಂಬಂಧಿಸಿದಂತೆ ನಿಮಗೆ ಕೆಲವು ವಿಘ್ನಗಳು ಬರಲಿವೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಸೈನ್ಯ ಮುಂತಾದ ರಕ್ಷಣಾವಲಯದಲ್ಲಿ ಕಾರ್ಯವನ್ನು ಮಾಡಲು ಆಸಕ್ತಿಯುಳ್ಳವರಿಗೆ ಉತ್ತಮ ಮಾರ್ಗಗಳು ಸಿಗಲಿವೆ. ಸಂಗಾತಿಗಳ ಕಲಹವು ಮಕ್ಕಳ ಕಾರಣದಿಂದ ತಣ್ಣಗಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಸಂಪತ್ತು ಬಳಕೆಯಾಗಲಿದೆ. ಅಪರೂಪದ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ. ಕೃಷಿಯ ಉತ್ಪನ್ನದಿಂದ ಅಧಿಕ‌ಲಾಭವಿರಲಿದೆ. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ನಿದ್ರೆ ಇಲ್ಲದೇ ಮಾನಸಿಕ‌ವಾಗಿ ಕುಗ್ಗುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ.