Horoscope: ನಿತ್ಯ ಭವಿಷ್ಯ; ಈ ರಾಶಿಯವರು ಇಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ಇಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
ರಾಶಿ ಭವಿಷ್ಯ
Edited By:

Updated on: May 09, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 14:05 ರಿಂದ 15:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:08 ರಿಂದ 07:43ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ.

ಮೇಷ ರಾಶಿ :ನೀವು ಇಂದು ನೀರಿಗೆ ಸಂಬಂಧಿಸಿದ ಉದ್ಯಮದಲ್ಲಿ ಆದಾಯ ಹೆಚ್ಚಾಗುವುದು. ಇದರಿಂದ ಆರ್ಥಿಕ ಸಮಸ್ಯೆ ದೂರವಾಗಿ ನೆಮ್ಮದಿಯನ್ನು ಕಾಣುವಿರಿ. ಆರೋಗ್ಯದಲ್ಲಿ ಸುಧಾರಣೆ ನಿಮ್ಮ ಜೀವನಕ್ಕೆ ಹೊಸ ಉತ್ಸಾಹವನ್ನೂ ತರುತ್ತದೆ. ಕುಟುಂಬದ ಸದಸ್ಯರ ಮಾತನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ಮಕ್ಕಳನ್ನು ಸತ್ಕಾರ್ಯಕ್ಕೆ ತೊಡಗಿಸುವಿರಿ. ನಿಮ್ಮ ಅನನುಕೂಲತೆಯನ್ನು ಯಾರ ಬಳಿಯೂ ಹೇಳಲಾರಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಶಾರೀರಿಕ ತೊಂದರೆಗಳನ್ನು ತೆಗೆದುಕೊಳ್ಳದೇ ಬಹಳ ನಾಜೂಕಿನಿಂದ ಕಾರ್ಯವನ್ನು ಮಾಡುವಿರಿ.

ವೃಷಭ ರಾಶಿ :ಇಂದು ವಿದ್ಯುತ್ ಉಪಕರಣಗಳ ಬಳಕೆಯು ಹೆಚ್ಚಾಗಿರುವುದು. ಇದರಿಂದ ಆರೋಗ್ಯವು ಕಡಿಮೆ ಆಗುವುದು. ಹೊಸ ವಸ್ತುಗಳಾದರೂ ಅವಶ್ಯಕತೆ ಇದ್ದರೆ ಮಾತ್ರ ಖರೀದಿಸಿ. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಅಪರಿಚಿತರಿಂದ ನಿಮಗೆ ಉಪದೇಶ ಸಿಗಲಿದೆ‌ ಅದು ನಿಮಗೆ ಕಿರಿಕಿರಿ ಎನಿಸುವುದು. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಅಪರಿಚಿತರ ಜೊತೆಗಿನ ಮಾತುಗಳು ನಿಮಗೆ ಹಿತವೆನಿಸುವುದು. ನಿಮ್ಮ ಮಿತಿಯಲ್ಲಿ ಉಳಿತಾಯ ಮಾಡುವಿರಿ. ನಿಮ್ಮ ಅಸ್ತಿತ್ವವನ್ನು ಗುರುತಿಸಿಲ್ಲ ಎಂಬ ಬೇಸರ ಇರುವುದು. ಯಾರಿಗಾದರೂ ಇಂದು ಸಾಲವಾಗಿ ಹಣವನ್ನು ಕೊಡುವಿರಿ.

ಮಿಥುನ ರಾಶಿ :ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಸಂಗಾತಿಯಿಂದ ಒತ್ತಡ ಬರುವುದು. ಅದನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಾಗುವುದು ಅಥವಾ ಮೆಲ್ಲಗೆ ತಳ್ಳಿಹಾಕಬೇಕಾಗುವುದು. ಕಷ್ಟದಿಂದ ಪಡೆದ ಸಂಪತ್ತನ್ನು ಖರ್ಚುಮಾಡಲು ಮನಸ್ಸಾಗದು. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಯಂತ್ರಗಳ ಬಳಕೆಯನ್ನು ನೀವು ಕಡಿಮೆ‌ ಮಾಡುವಿರಿ. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಅನಗತ್ಯ ಮಾತುಗಳಿಗಿಂತ ಮೌನವೇ ಲೇಸೆನಿಸಬಹುದು. ಸತ್ಯವನ್ನೇ ಆದರೂ ಹೇಳುವ ಕ್ರಮದಲ್ಲಿ ಹೇಳಿ.

ಕಟಕ ರಾಶಿ :ಇಂದು ನಿಮ್ಮ ಉದ್ಯಮದಲ್ಲು ಉತ್ತಮ ಗಳಿಕೆಗೆ ಅವಕಾಶಗಳು ತೆರದುಕೊಳ್ಳುವುವು. ಹಳೆಯ ಹೂಡಿಕೆಯಿಂದ ಉಪಯೋಗವಾಗಲಿದೆ. ವಾಹನದ ದುರಸ್ತಿಯನ್ನು ಮಾಡಬೇಕಾಗಿಬರಬಹುದು. ಇನ್ನೊಬ್ಬರ ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗ ಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಸಲಿಗೆ ಬೇಡ. ನಿಮ್ಮನ್ನು ನಿರ್ಲಕ್ಷಿಸಿ ಏನನ್ನಾದರೂ ಮಾಡಬಹುದು. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ಯಾರನ್ನೂ ನೀವು ಕೇವಲವಾಗಿ ನೋಡುವುದು ಬೇಡ. ಅವರದ್ದೇ ಆದ ಸ್ಥಾನವು ಅವರಿಗೆ ಕೊಡಿ. ನಿಮ್ಮನ್ನು ಅವಲಂಬಿಸಿದವರಿಗೆ ಕಷ್ಟ ಕೊಡುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು.