Horoscope: ನಿತ್ಯಭವಿಷ್ಯ, ಈ ರಾಶಿಯವರು ಇಂದು ಒಡಕುಗಳಿಗೆ ಅವಕಾಶ ಕೊಡುವುದು ಬೇಡ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 17) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Horoscope: ನಿತ್ಯಭವಿಷ್ಯ, ಈ ರಾಶಿಯವರು ಇಂದು ಒಡಕುಗಳಿಗೆ ಅವಕಾಶ ಕೊಡುವುದು ಬೇಡ
ರಾಶಿಭವಿಷ್ಯ Image Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 17, 2024 | 12:30 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 17) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶಿವ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:18 ರಿಂದ ಮಧ್ಯಾಹ್ನ 12:43ರ ವರೆಗೆ.

ಸಿಂಹ ರಾಶಿ: ವಿದೇಶೀಯ ವ್ಯವಹಾರಕ್ಕೆ ಅಧಿಕ ಬಂಡವಾಳದ ಅವಶ್ಯಕತೆ ಇರುವುದು. ಶತ್ರುಗಳು ನಿಮ್ಮನ್ನು ಗೆಲ್ಲಲು ಪ್ರಯತ್ನಿಸಬಹುದು.‌ ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವು ಆಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ಕೆಲವು ಮಾನಸಿಕ ಸ್ಥಿತಿಯನ್ನು ನೀವು ಬದಲಿಸಿಕೊಳ್ಳಬೇಕಾದೀತು.

ಕನ್ಯಾ ರಾಶಿ: ಜಾಣ್ಮೆಯಿಂದ ತಪ್ಪಿ ಹೋಗುವ ಕಾರ್ಯವನ್ನು ನಿಮ್ಮದಾಗಿಸಿಕೊಳ್ಳುವಿರಿ. ಒಡಕುಗಳಿಗೆ ಅವಕಾಶವನ್ನು ಕೊಡುವುದು ಬೇಡ. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ವಾಹನವನ್ನು ಖರೀದಿಸಲು ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ರಾಜಕೀಯ ಒತ್ತಡದಿಂದ ನಿಮ್ಮ ಕಾರ್ಯವು ಕೈಮೀರಬಹುದು.

ತುಲಾ ರಾಶಿ: ನೀವು ಮೊದಲೇ ಚಿಂತಿಸಿದಂತೆ ಏನೂ ಆಗದಿರುವುದು ನಿಮ್ಮನ್ನು ಕಾಡಬಹುದು. ಕುಟುಂಬದ ಹಿರಿಯರ ಆರೋಗ್ಯದ ಚಿಂತೆ ಇರಲಿದೆ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ನಿಮ್ಮ ಬಗ್ಗೆ ಇನ್ನೊಬ್ಬರ ಅಭಿಪ್ರಾಯವನ್ನು ಪಡೆಯುವಿರಿ. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ಯಾರಿಂದಲಾದರೂ ಪ್ರಭಾವಿತರಾಗುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ಸಿಗುವ ವ್ಯಕ್ತಿಗಳಿಂದ ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ಮಕ್ಕಳಿಗೆ ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಕೊಡುವ ಮನಸ್ಸಿರುವುದು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಂಗಲ ಕಾರ್ಯಕ್ಕೆ ಸಾಲವನ್ನು ಮಾಡಬೇಕಾಗುವುದು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಸಾಧು, ಸಜ್ಜನರ ಭೇಟಿಯಿಂದ‌ ಮನಸ್ಸು ಆಹ್ಲಾದಕರವಾಗಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ