Horoscope: ದಿನಭವಿಷ್ಯ, ಈ ರಾಶಿಯವರು ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನ ಮಾಡುವುದು ಬೇಡ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 14) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 14) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಸಿದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಸಂಜೆ 04:56 ರಿಂದ 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:42 ರಿಂದ 02:06ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:31 ರಿಂದ ಸಂಜೆ 4:56ರ ವರೆಗೆ.
ಸಿಂಹ ರಾಶಿ: ನಿಮಗೆ ಇಂದು ಸಿಗುವ ಅನಿರೀಕ್ಷಿತವಾದ ಉತ್ತಮ ಅವಕಾಶದಿಂದ ಸಂತೋಷವಾಗುವುದು. ತಂದೆ ಮತ್ತು ತಾಯಿಯರ ವಿಚಾರದಲ್ಲಿ ನಿಮಗೆ ಕರುಣೆ ಅತಿಯಾಗಿರುವುದು. ಪ್ರಯತ್ನಿಸುವ ಕಾರ್ಯವು ಯಶಸ್ಸಿನ ಕಡೆಗೆ ಸಾಗುತ್ತಿದೆಯೇ ಎನ್ನುವುದು ಗಮನಿಸಿ. ಅಪಾತ್ರರಿಗೆ ನಿಮ್ಮ ವಸ್ತುವನ್ನು ಗೊತ್ತಿಲ್ಲದೇ ಕೊಡುವಿರಿ. ಇಂತಹ ದಾನದಿಂದ ಪ್ರಯೋಜನವಾಗದು. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಸುಳ್ಳು ಮಾತಿನಿಂದಾಗಿ ನಂಬಿಕೆಯನ್ನು ಕಳೆದುಕೊಳ್ಳಬಹುದು. ಅಪರಿಚಿತರಿಗೆ ಮಾಡಿದ ಸಹಾಯವು ದುರುಪಯೋಗವಾಗುವುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೇ ನಡೆಯಬೇಕು ಎನ್ನುವ ಹಠವು ಬರುವುದು.
ಕನ್ಯಾ ರಾಶಿ: ಇಂದು ರೋಗಬಾಧೆಯಿಂದ ಹೊರಬರುವುದು ಕಷ್ಟವಾದೀತು. ವಾಹನವನ್ನು ಖರೀದಿಸುವ ಯೋಚನೆಯು ದಟ್ಟವಾಗಿ ಇರಬಹುದು. ಆಹಾರ ವ್ಯವಸ್ಥೆಯನ್ನು ಮಾಡುವವರಿಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗಿಬರಬಹುದು. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಎನ್ನುವುದು ನಿಜವಾದರೂ, ಅದಕ್ಕೂ ವಿಧಾನವಿದೆ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ. ನಿಮ್ಮ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನವುದು ಬೇಡ. ಸಮಯ ಮಾತ್ರ ವ್ಯರ್ಥವಾಗಬಹುದು.
ತುಲಾ ರಾಶಿ: ಇಂದು ನಿಮ್ಮ ಆಸ್ತಿಗೆ ಸಂಬಂಧಿಸಿದ ವಿಚಾರದಲ್ಲಿ ನಿಮ್ಮಂತೆ ಮಾಡಿಕೊಳ್ಳುವ ಬಗ್ಗೆ ಅನುಭವಿಗಳ ಜೊತೆ ಚರ್ಚಿಸುವಿರಿ. ನ್ಯಾಯಾಲಯಕ್ಕೆ ಬೇಕಾದ ಮಾಹಿತಿಯನ್ನು ಸಂಗ್ರಹಿಸುವಿರಿ. ನಿಮ್ಮ ವಿದ್ಯೆಗೆ ಯೋಗ್ಯವಾದ ಅವಕಾಶಗಳು ಅನಿರ್ಬಂಧಿತ ಸಿಗಬಹುದು. ದಾಯದಿಕಲಹವು ನಿಮ್ಮನ್ನು ಹಿಮ್ಮೆಟ್ಟಿಸೀತು. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಕೆಲವರ ಮಾತು ನಿಮ್ಮನ್ನು ಕಾಡಬಹುದು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ಗತ್ತಿನಿಂದ ಮಾತನಾಡುವುದನ್ನು ನಿಲ್ಲಿಸಿ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ.
ವೃಶ್ಚಿಕ ರಾಶಿ: ಆಗಸ್ಮಿಕವಾಗಿ ದೂರ ಪ್ರಯಾಣವನ್ನು ಮಾಡಬೇಕಾಗಿದ್ದು, ಅಂದುಕೊಂಡಿದ್ದು ಸಾಧಿಸುವಿರಿ. ಉದ್ಯೋಗ ಭಡ್ತಿಯನ್ನು ನಿರೀಕ್ಷಿಸಬಹುದು. ಕೇಳಿ ಬಂದವರಿಗೆ ಆರ್ಥಿಕ ಸಹಕಾರವನ್ನು ನೀಡುವಿರಿ. ಗೃಹನಿರ್ಮಾಣದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ತೋರುವಿರಿ. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಕೆಲವರಿಂದ ಸಹಾಯವನ್ನು ನಿರೀಕ್ಷಿಸದೇ ಇದ್ದರೂ ಸಹಕಾರ ದೊರೆತೀತು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




