Horoscope: ರಾಶಿಭವಿಷ್ಯ; ಈ ರಾಶಿಯವರ ಮಾತಿನಲ್ಲಿ ಮಾರ್ದವ ಇರಲಿ; ವಿವಾಹ ಸಂಬಂಧಿತ ಚಿಂತೆಯೂ ಕಾಡಬಹುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 15) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರ ಮಾತಿನಲ್ಲಿ ಮಾರ್ದವ ಇರಲಿ; ವಿವಾಹ ಸಂಬಂಧಿತ ಚಿಂತೆಯೂ ಕಾಡಬಹುದು
ದಿನಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 15, 2024 | 12:30 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 15) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ವರೀಯಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 21 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:27 ರಿಂದ 09:52ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 11:17 ರಿಂದ 12:42ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ 03:32ರ ವರೆಗೆ.

ಸಿಂಹ ರಾಶಿ: ಇಂದು ಪವಿತ್ರ ಸ್ಥಳಕ್ಕೆ ಭೇಟಿ ಕೊಡಲಿದ್ದೀರಿ. ವಿವಾಹಕ್ಕೆ ಸಂಬಂಧಿಸಿದ ಚಿಂತೆಯು ನಿಮ್ಮನ್ನು ಕಾಡಬಹುದು. ಆಲಂಕಾರಿಕ ವಸ್ತುಗಳ ಬಗ್ಗೆ ಆಸಕ್ತಿಯು ಹೆಚ್ಚುವುದು. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಸ್ಮರಣಶಕ್ತಿಯ ದೋಷವು ಸ್ವಲ್ಪವೇ ಬರಲಿದೆ. ಅವಕಾಶಗಳು ತಪ್ಪಿಹೋಗಿ, ನಿಮ್ಮನ್ನೇ ನೀವು ಬೂದುಕೊಳ್ಳುವಿರಿ. ಎಲ್ಲರನ್ನೂ ದೂರುವುದು ನಿಮಗೆ ಇಷ್ಟವಾಗದು. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಗೊತ್ತಿಲ್ಲದ ಕಾರ್ಯವನ್ನು ಮಾಡಲು ನಿಮಗೆ ಉತ್ಸಾಹ ಇರಲಿದೆ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವುದು ಉತ್ತಮ.

ಕನ್ಯಾ ರಾಶಿ: ವೃತ್ತಿಯಲ್ಲಿ ನಿಮಗೆ ನೆಮ್ಮದಿಯನ್ನು ಪಡೆಯಲು ಕಷ್ಟವಾಗುವುದು.‌ ಒಂದಿಲ್ಲೊಂದು ಕಿರಿಕಿರಿಗಳು ನಿಮಗೆ ನೆಮ್ಮದಿಯಿಂದ ಇರಲು ಬಿಡದು. ಗೊಂದಲವೂ ನಿಮ್ಮನ್ನು ಜೋಕಾಲಿಯ‌ ಮೇಲೆ ಕುಳಿತಂತೆ ಅನ್ನಿಸಬಹುದು. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಧಿಕ ಸಾಲವು ನಿಮ್ಮ‌ ಮಾನಸಿಕ‌ಸ್ಥಿತಿಯನ್ನೇ ಬದಲಿಸೀತು. ಸಹೋದರರು ಮರೆತ ವಿಚಾರವನ್ನು ಮತ್ತೆ ನೆನಪಿಸಿಕೊಳ್ಳುವರು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಯಾರ ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಮೊದಲೇ ನಿಶ್ಚಯಪಡಿಸಿದ ಕಾರ್ಯವನ್ನು ಬಿಟ್ಟು ಬೇರೆ ಯೋಚನೆ ಮಾಡುವುದು ಬೇಡ.

ತುಲಾ ರಾಶಿ: ಸಂಗಾತಿಯ ಮಾತನ್ನು ಅಲ್ಪವಾದರೂ ಪಾಲಿಸಿ. ‌ಇಲ್ಲವಾದರೆ ಮುನಿಸಿಕೊಂಡಾರು. ಮನಸ್ಸಿನಲ್ಲಿರುವ ಸಂಕಟವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ವಾಹನ ಚಾಲನೆಯಲ್ಲಿ ಅವಸರ ಬೇಡ. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು. ಮಕ್ಕಳ ವಿಚಾರವಾಗಿ ನಿಮಗೆ ದೂರು ಬರಬಹುದು.

ವೃಶ್ಚಿಕ ರಾಶಿ: ಉದ್ಯೋದ ಸ್ಥಳದಲ್ಲಿ ನಿಮ್ಮನ್ನು ಸ್ಥಾನಭ್ರಷ್ಟರಾಗುವ ಭೀತಿಯು ಇರಲಿದೆ. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ. ವಿದೇಶಕ್ಕೆ ತೆರಳುವ ನಿರೀಕ್ಷೆಯಲ್ಲಿ ಇರುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ