AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರ ಆಸ್ತಿ ಸಮಸ್ಯೆಗಳು ಇಂದು ಬಗೆಹರಿಯುವ ಸಾಧ್ಯತೆ ಇದೆ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 05) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಈ ರಾಶಿಯವರ ಆಸ್ತಿ ಸಮಸ್ಯೆಗಳು ಇಂದು ಬಗೆಹರಿಯುವ ಸಾಧ್ಯತೆ ಇದೆ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 05, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಧ್ರುವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:20 ರಿಂದ 12:47 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:13 ರಿಂದ 03:39ರ ವರೆಗೆ.

ಸಿಂಹ ರಾಶಿ: ಇಂದು ನೀವು ಎಷ್ಟೇ ಪ್ರಯತ್ನಿಸಿದರೂ ಖರ್ಚನ್ನು ಕಡಿಮೆ‌ ಮಾಡಿಕೊಳ್ಳಲಾಗದು.‌ ನೀವು ಕೊಟ್ಟ ಹಣವು ಬರಬೇಕಾದ ಕಡೆಯಿಂದ ಬಾರದೇ ಇರಬಹುದು. ಮರೆವಿನ ಶಕ್ತಿ ಅತಿಯಾದಂತೆ ತೋರುವುದು. ಹೂಡಿಕೆಯಲ್ಲಿ ಆಸಕ್ತಿ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಚಟುವಟಿಕೆಯು ಅಧಿಕವಾಗಿ ಇರಬಹುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಉತ್ತಮ ಕಾರ್ಯಕ್ಕೆ ಎಲ್ಲ ಕಡೆಯಿಂದ ಅಭಿನಂದನೆಗಳು ಹರಿದುಬರಬಹುದು. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ.

ಕನ್ಯಾ ರಾಶಿ: ಇಂದು ನಿಮಗೆ ಭಯಗ್ರಸ್ತ ದಿನವಾಗಲಿದೆ. ಯಾವ ಕಾರ್ಯವನ್ನೂ ಪೂರ್ಣವಾದ ಮನಸ್ಸಿನಿಂದ ಮಾಡಲಾರಿರಿ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಸಣ್ಣ ವ್ಯಾಪಾರಿಗಳು ಅಲ್ಪ ಲಾಭವನ್ನು ಗಳಿಸುವರು. ನೀವು ಕೆಲವು ವ್ಯಾವಹಾರಿಕ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಇಂದು ಪೂರ್ಣವಾಗಿ ಕಾರ್ಯದಲ್ಲಿಯೇ ಮಗ್ನರಾಗಿರುವಿರಿ. ನಿಮ್ಮ ವ್ಯಕ್ತಿತ್ವ ನಕಾರಾತ್ಮಕವಾಗಿ ಅಳೆಯುವರು.

ತುಲಾ ರಾಶಿ: ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ನಿಮ್ಮ ಶ್ರಮಕ್ಕೆ ಗೌರವ ಸಿಗಲಿದೆ, ಸಂತೃಪ್ತಿಯು ನಿಮ್ಮ ಮನಸ್ಸಿನಲ್ಲಿ ಇರುವುದು. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ಎಂದೋ ಬರುವ ಸಮಸ್ಯೆಗಳಿಗೆ ಇಂದು ಚಿಂತೆಪಡುವಿರಿ. ಹಣದ ಹರಿವಿನಿಂದ ನಿಮ್ಮ ಬಯಕೆಗಳನ್ನು ಈಡೇರಿಸಿಕೊಳ್ಳುವಿರಿ. ಸಾಮಾಜಿಕ ಮನ್ನಣೆಯು ನಿಮಗೆ ಸಿಗಲಿದೆ.

ವೃಶ್ಚಿಕ ರಾಶಿ: ಇಂದಿನ ನಿಮ್ಮ‌ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಇಂದು ನಿಮ್ಮ ಧಾರ್ಮಿಕ ನಂಬಿಕೆಗಳಿಗೆ ಘಾಸಿಯಾಗುವ ಘಟನೆ ನಡೆಯಬಹುದು. ನೌಕರರ ವಿಚಾರದಲ್ಲಿ ಅಸಮಾಧಾನವು ಉಂಟಾಗಬಹುದು. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ಸಜ್ಜನರ ಕೂಟದಲ್ಲಿ ಭಾಗವಹಿಸುವಿರಿ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಬೇಕಾದಷ್ಟೇ ಮಾತನಾಡಿ ಸುಮ್ಮನಾಗುವುದು ಉತ್ತಮ.

-ಲೋಹಿತ ಹೆಬ್ಬಾರ್-8762924271 (what’s app only)

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ