AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ, ಗುರುವಾರ ಪ್ರತ್ಯುಪಕಾರ, ದೈಹಿಕ ಶ್ರಮ, ಅನನುಭವದ ಕಾರ್ಯ, ಪ್ರಾಣಿಗಳ ಸಹವಾಸ ಇವೆಲ್ಲ ಈ‌ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 15, 2025 | 1:06 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರುವಾರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧ, ಕರಣ: ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 06 : 51 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:05 – 15:41, ಯಮಘಂಡ ಕಾಲ 06:06 – 07:42, ಗುಳಿಕ ಕಾಲ 09:18 – 10:53

ತುಲಾ ರಾಶಿ: ಸಂಗಾತಿಯ ಆಯ್ಕೆ ಗೊಂದಲವಾಗಿಯೇ ಇರುವುದು. ನಿಮ್ಮ ಬೆಳವಣಿಗೆಗೆ ಪೂರಕವಾದ ಸನ್ನಿವೇಶವು ಬರಬಹುದು. ಕುಟುಂಬ ಜವಾಬ್ದಾರಿಯ ನಿರಗವಹಣೆ ಕಷ್ಟವಾಗುವುದು. ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಹಣಕಾಸು ಪ್ರಗತಿಗೆ ಯೋಗ್ಯ ಸಮಯ. ಸರ್ವತೋಮುಖ ವಿಕಾಸಕ್ಕೆ ಸಮಯ ಸಾಕಾಗದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಬಹುದು. ಆರೋಗ್ಯದಲ್ಲಿ ಒತ್ತಡದ ಕಾರಣ ತಲೆನೋವು ಉಂಟಾಗಲಿದೆ. ಭವಿಷ್ಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸಲು ಸೂಕ್ತ ಸಮಯ. ಮನಸ್ಸಿನಲ್ಲಿರುವ ಸಂಕಟವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ವಾಹನ ಚಾಲನೆಯಲ್ಲಿ ಅವಸರ ಬೇಡ. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ. ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು.

ವೃಶ್ಚಿಕ ರಾಶಿ: ನಿಮ್ಮ ಸಂಧಾನದ‌ ಮಾತುಕತೆ ಸಫಲವಾಗುವುದು. ನಿಮಗೆ ತಂದೆಯಿಂದ ಬರಬೇಕಾದ ಆಸ್ತಿಯ ಬಗ್ಗೆ ಸಮಾಲೋಚನೆ ಮಾಡುವಿರಿ. ಉದ್ಯೋಗದಲ್ಲಿ ನೀವು ಬಹಳ ಪ್ರಾಮಾಣಿಕವಾಗಿ ಇರುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ಒತ್ತಡ ಹೆಚ್ಚಾದರೂ ಅದು ನಿಮ್ಮ ಉತ್ಸಾಹದ ಮೇಲೆ ಪರಿಣಾಮ ಬೀರದು. ಆರ್ಥಿಕ ವ್ಯವಹಾರದಲ್ಲಿ ಲಾಭದ ಸೂಚನೆ ಇದೆ. ಸ್ನೇಹಿತರಿಂದ ಸಹಾಯ ಸಿಗುವ ಸಾಧ್ಯತೆ ಇದೆ. ಜೀವನ ಸಾರಥಿಯೊಂದಿಗೆ ಮರೆಯಲಾಗದ ಕ್ಷಣಗಳು ಕಳೆಯಬಹುದು. ಆರೋಗ್ಯಕ್ಕಾಗಿ ವ್ಯಾಯಾಮ ಒಳ್ಳೆಯದು. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಪಾಲುದಾರಿಕೆಯು ನಿಮಗೆ ಸಮಾಧಾನ ಕೊಡದು. ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಧಾಗಳನ್ನು ನೀವು ತಪ್ಪಾಗಿ ತೆಗೆದುಕೊಳ್ಳುವಿರಿ. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ.

ಧನು ರಾಶಿ: ವಿಳಂಬವಾಗಿದ್ದಕ್ಕೆ ಒಳ್ಳೆಯ ಸ್ಥಳದಲ್ಲಿ ಉದ್ಯೋಗದ ನಿರೀಕ್ಷೆ ಮಾಡುವಿರಿ. ಇಂದು ವ್ಯಾಪಾರದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಏನೋ ಮಾಡಲು ಹೋದ ಶತ್ರುಗಳಿಂದ ನಿಮಗೆ ಅನುಕೂಲವೇ ಆಗುವುದು. ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗ ಲಾಭವಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರತಿಭೆ ಗುರುತಿಸಲ್ಪಡುತ್ತದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ಇಂದು ಕೈ ಹಾಕಿದ ಹೊಸ ಕೆಲಸ ಶುಭದಾಯಕವಾಗಬಹುದು. ಆರೋಗ್ಯದಲ್ಲಿ ಜೀರ್ಣತಂತ್ರ ಸಮಸ್ಯೆ ತೊಂದರೆ ನೀಡಬಹುದು. ಆರ್ಥಿಕವಾಗಿ ನಿಮ್ಮ ಬೆಳವಣಿಗೆಯಿಂದ ಕುಟುಂಬದವರಿಗೆ ಖುಷಿಯಾಗುವುದು. ರಾಜಕೀಯದಲ್ಲಿ ಕೈಜೋಡಿಸುವ ಬಗ್ಗೆ ಕುತೂಹಲವಿರುವುದು. ಸಾಮಾಜಿಕ ಕಾರ್ಯವು ನಿಮ್ಮನ್ನು ಸೆಳೆಯುವುದು. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ನೀವೇ ಆರಿಸಿಕೊಂಡ ವೃತ್ತಿಯಲ್ಲಿ ತೃಪ್ತಿಯು ಸಿಗಲಿದೆ. ದೂರದೃಷ್ಟಿಯಿಂದ‌ ಕೆಲಸವನ್ನು ಮಾಡಿ. ನಿಮ್ಮ ಮಾತುಗಳೇ ನಿಮಗೆ ಮುಳ್ಳಾಗಬಹುದು.

ಮಕರ ರಾಶಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವುದು ಕಷ್ಟವಾಗಲಿದೆ. ಇಂದು ನಿಮ್ಮ ಹದಗೆಟ್ಟ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೇ ತುರ್ತು ಚಿಕಿತ್ಸೆಯನ್ನು ಪಡೆದು ಮುಂದುವರಿಯಿರಿ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮಗೆ ಅನಾನುಕೂಲ ಉಂಟಾಗುವುದು. ಇಂದು ಸೃಜನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ದಿನ. ವಿದ್ಯಾರ್ಥಿಗಳಿಗೆ ಉತ್ತಮ ಅಭ್ಯಾಸದಿಂದ ಲಾಭ. ಹಣಕಾಸಿನಲ್ಲಿ ಖರ್ಚು ಹೆಚ್ಚಾಗಬಹುದು. ಇಂದು ನಿಮ್ಮ ನಿರ್ಧಾರಗಳು ಉತ್ತಮ ಫಲ ನೀಡಲಿವೆ. ಸಮಯವನ್ನು ಸದ್ಬಳಕೆ ಮಾಡಿಕೊಂಡರೆ ಲಾಭ. ಆರ್ಥಿಕತೆಯಲ್ಲಿ ನೀವು ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಕೃಷಿಯ ಉತ್ಪನ್ನದಿಂದ ಅಲ್ಪ ಲಾಭ. ಮೇಲಧಿಕಾರಿಗಳ ಜೊತೆಗಿನ ಸಲುಗೆಯು ದುರುಪಯೋಗ ಆಗಬಹುದು. ವ್ಯವಹಾರದಲ್ಲಿ ಚುರುಕು ಸಾಲದು. ನಿಮ್ಮ ಸರಳತೆಯು ಜೊತೆಗಾರರಿಗೆ ಇಷ್ಟವಾಗುವುದು. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋವಿಸುವಿರಿ.

ಕುಂಭ ರಾಶಿ: ವಾಸ್ತವದ ಬಗ್ಗೆ ನಿಮಗೆ ಸರಿಯಾದ ಚಿತ್ರಣವಿರದು. ಇಂದು ನಿಮ್ಮ ಪ್ರಯಾಣದಿಂದ ಆಗಬೇಕಾದ ಕೆಲಸವಾಗಿ ಸಂತೋಷವಾಗುವುದು. ನೆರೆ ಹೊರೆಯವರು ನಿಮಗೆ ಸಹಕಾರ ನೀಡದೇ ಕಷ್ಟವಾಗುವುದು. ಸಂಗಾತಿಯ ಜೊತೆ ಭಾವನೆಗಳನ್ನು ವ್ಯಕ್ತಪಡಿಸಲು ಉತ್ತಮ ದಿನ. ಕೆಲಸದಲ್ಲಿ ನೀವು ನಿರೀಕ್ಷಿಸುವ ಪ್ರಗತಿ ಕಾಣಬಹುದು. ಹಣಕಾಸಿನಲ್ಲಿ ಬುದ್ಧಿವಂತಿಕೆ ಅಗತ್ಯವಿದೆ. ಕುಟುಂಬದಲ್ಲಿ ವಿರೋಧ ಹುಟ್ಟುವ ಸಾಧ್ಯತೆ ಇದ್ದರೂ ಸಂವಾದದಿಂದ ಬಗೆಹರಿಸಬಹುದು. ಆರೋಗ್ಯ ಸಮಸ್ಯೆಗೆ ಎಚ್ಚರಿಕೆ ಬೇಕು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮಗೆ ಕಾರ್ಯಗಳು ನಿಮಗೆ ತೃಪ್ತಿಯನ್ನು ಕೊಡುವಂತಿರಲಿ. ಆತುರದಲ್ಲಿ ಯಾವ ನಿರ್ಧಾರಕ್ಕೂ ಬರದೇ, ತಾಳ್ಮೆಯಿಂದ ಎಲ್ಲವೂ ತಿಳಿಯಾದಮೇಲೆ ನಿರ್ಧರಿಸಿ. ಎಲ್ಲವೂ ಸರಿಯಾಗುವುದು. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ಸಂಗಾತಿಯ ಜೊತೆ ಮನಸ್ತಾಪ ಬರುವ ಕಾರಣ, ನಿಮ್ಮ ಕೆಲಸ ಕಾರ್ಯಗಳಲ್ಲಿ ಒಂದಿಲ್ಲೊಂದು ಕಿರಿಕಿರಿ ಇರುವುದು. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ.

ಮೀನ ರಾಶಿ: ಕೆಟ್ಟ ಸ್ನೇಹಿತರ ಸಹವಾಸದಿಂದ ಅಪಕೀರ್ತಿ ನಿಮಗೆ ಸಿಗುವುದು. ಇಂದು ನಿಮ್ಮ ವ್ಯಾಪಾರದ ಬೆಳವಣಿಗೆಯು ಚೆನ್ನಾಗಿ ಇರಲಿದ್ದು, ಆದಾಯವನ್ನು ಹೂಡಿಕೆ ಮಾಡವಿರಿ. ವಾಹನ ಚಾಲನೆಯಿಂದ ಅಪಘಾತ ಸಂಭವಿಸಬಹುದು. ನ್ಯಾಯಾಲಯದ ಬಗ್ಗೆ ನಿಮಗೆ ಬಹಳ ಚಿಂತೆ‌ ಕಾಡುವುದು. ನಿಮ್ಮ ಹಣಕಾಸಿನ ಸ್ಥಿತಿಯನ್ನು ಹೇಳಿಕೊಳ್ಳಲು ಇಷ್ಟವಾಗದು. ಹೊಸ ಯೋಚನೆಗಳು ಬೆಳಕಿಗೆ ಬರುತ್ತವೆ. ಉದ್ಯೋಗದಲ್ಲಿ ಹೊಸ ಯೋಜನೆ ಆರಂಭವಾಗುವ ಯೋಗವಿದೆ. ಹಣಕಾಸಿನಲ್ಲಿ ನೂತನ ಆದಾಯದ ಮಾರ್ಗಗಳು ರೂಪುಗೊಳ್ಳಬಹುದು. ಸಂಗಾತಿಯೊಂದಿಗೆ ನಿರ್ಣಾಯಕ ಮಾತುಕತೆ ನಡೆಯಲಿದೆ. ಆತ್ಮವಿಶ್ವಾಸದಿಂದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಅಭಾವವು ಹೆಚ್ಚು ತೋರುವುದು. ಸನ್ನಿವೇಶಕ್ಕೆ ಯೋಗ್ಯವಾದ ಮಾತುಗಳನ್ನಾಡಿ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಒತ್ತಾಯ ಪೂರ್ವಕವಾಗಿ ಯಾವುದನ್ನೂ ಮಾಡಿಸುವುದು ಬೇಡ. ಅದು ಆಗುವುದಿಲ್ಲ.

ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು