Astrology: ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ
ರಾಶಿ ಭವಿಷ್ಯ ಮಂಗಳವಾರ(ಸೆ. 17): ಪ್ರಶಂಸೆಯೂ ಸಿಗುವ ಸಾಧ್ಯತೆ ಇದೆ. ತಾಯಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎನ್ನುವ ಸದ್ಭಾವ ಬರುವುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇರಲಿ. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಹಾಗಾದರೆ ಸೆಪ್ಟೆಂಬರ್ 17ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:31 ಗಂಟೆ, ರಾಹು ಕಾಲ ಮಧ್ಯಾಹ್ನ 03:29 ರಿಂದ 05:00, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ ಮಧ್ಯಾಹ್ನ 01:58ರ ವರೆಗೆ.
ಧನು ರಾಶಿ: ಅನಿರ್ದಿಷ್ಟ ಅವಧಿಯವರೆಗೆ ಉದ್ಯೋಗದ ಕಾರಣಕ್ಕೆ ಓಡಾಟ ಮಾಡುವಿರಿ. ಇಂದು ನಿಮಗೆ ಹಳೆಯ ಘಟನೆಗಳಿಂದ ಪಾಪಪ್ರಜ್ಞೆ ಕಾಡಬಹುದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯುವುದು ಉತ್ತಮ. ಶತ್ರುಗಳಿಂದ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನದಿಂದ ಸ್ವಲ್ಪ ಫಲವನ್ನು ಪಡೆಯುವಿರಿ. ಅವಕಾಶದ ಕೊರತೆಯಿಂದ ದುಃಖಿಸುವಿರಿ. ನಿಮ್ಮ ಧೈರ್ಯವು ಕ್ಷಣಿಕದ್ದು ಮಾತ್ರ. ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ. ಉದ್ವೇಗದಿಂದ ಏನನ್ನಾದರೂ ಹೇಳುವಿರಿ. ಒತ್ತಡಕ್ಕೆ ಅವಕಾಶವನ್ನು ಕೊಡದೇ ನೀವು ನೆಮ್ಮದಿಯಿಂದ ಇರುವಿರಿ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ನೀವೇ ನಿಮ್ಮವರನ್ನು ಮೂದಲಿಸುವಿರಿ. ವರ್ಗಾವಣೆಯ ಕಿರಿಕಿರಿ ನಿಮ್ಮ ತಲೆಯಲ್ಲಿ ಇರಲಿದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಅನಿವಾರ್ಯವಾಗಿ ಸಿಕ್ಕ ಜವಾಬ್ದಾರಿಯನ್ನು ನಿಭಾಯಿಸುವುದು ಕಷ್ಟ.
ಮಕರ ರಾಶಿ; ಮನೆ ಹಾಗೂ ಉದ್ಯೋಗದ ನಡುವೆ ಸರಿಯಾದ ಹೊಂದಾಣಿಕೆ ಕಷ್ಟ. ಇಂದು ನಿಮ್ಮ ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮ ಕಾರ್ಯವನ್ನು ಪರಿಶೀಲಿಸಲು ಉನ್ನತ ಅಧಿಕಾರಿಗಳು ಬರಲಿದ್ದಾರೆ. ಪ್ರಶಂಸೆಯೂ ಸಿಗುವ ಸಾಧ್ಯತೆ ಇದೆ. ತಾಯಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎನ್ನುವ ಸದ್ಭಾವ ಬರುವುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇರಲಿ. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಗೊಂದಲವನ್ನು ಮಾಡಿಕೊಂಡು ಹಣವನ್ನು ಕಳೆದುಕೊಳ್ಳುವಿರಿ. ನೀವು ಉನ್ನತ ಸ್ಥಾನದ ಆಕಾಂಕ್ಷಿಗಳೂ ಆಗಿರುವಿರಿ. ಗುಪ್ತವಾದ ಧನವನ್ನು ಮತ್ತಷ್ಟು ಜೋಪಾನ ಮಾಡುವಿರಿ. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಆಗುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ.
ಕುಂಭ ರಾಶಿ; ಚರಾಸ್ತಿಯನ್ನು ನೀವು ಬಿಡಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಅನೇಕರ ಸಲಹೆಗಳ ಕಾರಣದಿಂದ ಬಹಳ ಚಂಚಲವಾಗಿರಲಿದೆ. ನಿಮ್ಮ ಉದ್ಯೋಗದ ಕನಸು ನನಸಾಗಲಿದೆ. ಅಶಿಸ್ತಿನ ವ್ಯವಸ್ಥೆಯು ನಿಮಗೆ ಬೇಸರ ತರಿಸಬಹುದು. ವಿದೇಶದ ಕನಸು ಅಂಕುರಿಸಬಹುದು. ಸಹೋದರಿಯರಿಗೆ ಏನನ್ನಾದರೂ ನೀಡುವಿರಿ. ನಿಮ್ಮ ಸಲಾರಾತ್ಮಕ ನಿಲುವು ಇಷ್ಟವಾಗುವುದು. ಕೆಲಸದಲ್ಲಿ ಪಾರದರ್ಶಕತೆಯನ್ನು ಇಷ್ಟಪಡುವಿರಿ. ಇಂದು ಎಂದಿಗಿಂತ ಹೆಚ್ಚು ಕಾರ್ಯವಾಗಲಿದೆ. ವ್ಯಾಪಾರವನ್ನು ವಿನಮ್ರತೆಯಿಂದ ಮಾಡಿ. ಆದಾಯವು ಹೆಚ್ಚಾಗಬಹುದು. ನಿಮಗೆ ಇಷ್ಟವಾದ ಕೊಡುಗೆಯು ಲಭ್ಯವಾಗಲಿದೆ. ಪ್ರಭಾವೀ ಪದವಿಯಲ್ಲಿ ಇರುವವರನ್ನು ನೀವು ಭೇಟಿಯಾಗುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದಲೂ ದೂರವಿರಬೇಕು. ಹೆಸರು ಮಾಡುವ ಭ್ರಮೆಯು ತಲೆಗೆ ಬರುವುದು.
ಮೀನ ರಾಶಿ: ರಾಜಕೀಯ ಬಲದಿಂದ ಇಂದು ಕಾರ್ಯಗಳು ಸಿದ್ಧಿಸುವುದು. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ಸಿಗಲಿದೆ. ನಿಮ್ಮ ಪ್ರಯತ್ನಕ್ಕೆ ಅದೃಷ್ಟವೂ ಜೊತೆಯಾಗುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ನಿಮ್ಮ ಶತ್ರುಗಳಿಂದ ಕೆಲವು ಅವಕಾಶಗಳು ತಪ್ಪುವುದು. ವಿವಾಹಕ್ಕೆ ಬೇಕಾದ ತಯಾರಿಯನ್ನು ನೀವು ಮಾಡಿಕೊಳ್ಳುವಿರಿ. ವಿರೋಧಿಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳಬಹುದು. ಮಕ್ಕಳ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಒಲವು ಹೆಚ್ಚಾಗಲಿದೆ. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸಬಹುದು. ನ್ಯಾಯಪರತೆಯಿಂದ ಇರುವುದನ್ನು ಇಷ್ಟಪಡುವರು. ನಿಮ್ಮ ಆಲೋಚನೆಗಳು ಸರಿಯಾದ ದಿಕ್ಕಿನಲ್ಲಿ ಇರಲಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಮಾಡುವುದಿದ್ದರೆ ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ.