ಆಹಾರದ ಉದ್ಯಮವನ್ನು ಲಾಭದತ್ತ ಕೊಂಡುಯ್ಯುವಿರಿ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ, ಬುಧವಾರ ಪ್ರತೀಕ್ಷೆಗಳಿಂದ ಅಸಫಲತೆ, ಹಿರಿಯರಿಂದ ನಿಂದನೆ, ಪರೋಪಕಾರ, ಸಾಮಾಜಿಕ ಕಾರ್ಯದಲ್ಲಿ ತೊಡಗುವಿಕೆ ಇವೆಲ್ಲ ಈ ದಿನದ ವಿಶೇಷ. ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ತೃತೀಯಾ ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೋಭನ ಕರಣ: ಕೌಲವ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:30 – 14:04, ಯಮಘಂಡ ಕಾಲ 07:46 – 09:21, ಗುಳಿಕ ಕಾಲ 10:55 – 12:30
ತುಲಾ ರಾಶಿ: ನಿಮ್ಮ ಗುಣಮಟ್ಟಕ್ಕಿಂತ ಕಡಿಮೆಯ ವಸ್ತುವನ್ನು ಆಯ್ದುಕೊಳ್ಳುವಿರಿ. ಗೃಹನಿರ್ಮಾಣಕ್ಕೆ ಪರಿಚಿತರಿಂದ ವಿಘ್ನ ಬರಲಿದೆ. ನೀವು ಪಾಲುದಾರಿಕೆಯನ್ನು ಬದಲಾಯಿಸುವಿರಿ. ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಸಾಲ ಕೊಡುವಾಗ ಸ್ವಪ್ರತಿಷ್ಠೆಯನ್ನು ತೋರಿಸುವಿರಿ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಹೆಚ್ಚು ಪಡೆದಷ್ಟು ಉತ್ತಮವೇ. ಶ್ರಮದ ಕೆಲಸವು ಆಯಾಸವನ್ನು ತರಲಿದೆ. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಒತ್ತಡದ ದಿನವಾಗಲಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಆಸೆಯಿಂದ ದುಃಖಿಸ ಏಕಾಗುವುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ದುಃಸ್ವಭಾವವು ಇತರರಿಗೂ ಗೊತ್ತಾದೀತು.
ವೃಶ್ಚಿಕ ರಾಶಿ: ವಾಗ್ವಾದದಿಂದ ಉದ್ವೇಗ ಬರಬಹುದು. ನಿಮ್ಮ ಪರಿಶ್ರಮದ ಬಗ್ಗೆ ವಿಶ್ವಾಸವಿರಲಿದೆ. ಸ್ವಾವಲಂಬಿಯಾಗಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನ್ಯಾಯಾಲಯದ ಬಗ್ಗೆ ಗೌರವ ಕಡಿಮೆಯಾಗಬಹುದು. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಯಾರನ್ನಾದರೂ ಹೇಳಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಅನಾರೋಗ್ಯವು ನಿಮ್ಮ ನಿಷ್ಕಾಳಜಿಯಿಂದ ಹೆಚ್ಚಾಗಲಿದೆ. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಹಿತಶತ್ರುಗಳ ಬಗ್ಗೆ ಜಾಗರೂಕತೆ ಇರಲಿ. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯ ಲಾಭವನ್ನು ನೀವು ಪಡೆಯುವಿರಿ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ವಹಿಸಿಕೊಂಡ ಕಾರ್ಯವನ್ನು ಪೂರ್ಣ ಮಾಡಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ.
ಧನು ರಾಶಿ: ನೀವು ಶಂಕೆ ಪಡುವ ವ್ಯಕ್ತಿ ಯಾರು ಎನ್ನುವುದು ಗೊತ್ತಿರಲಿ. ಇಂದು ನೀವು ಆಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಮುಖಂಡರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಸಂಗಾತಿಯ ಆರೋಗ್ಯದ ಸಮಸ್ಯೆಯನ್ನು ನೀವು ಬಗೆಹರಿಸುವುದು ಕಷ್ಟವಾದೀತು. ಕುಟುಂಬದ ಜೊತೆ ದೂರ ಪ್ರವಾಸ ಮಾಡುವಿರಿ. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸಲಾರಿರಿ.
ಮಕರ ರಾಶಿ: ಸಂಗಾತಿಯ ಮನಸ್ಸನ್ನು ತಿಳಿಸಿಕೊಳ್ಳಲು ಸಾಧ್ಯವಾಗದು. ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಬೇಕಾಗಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಮನೆಯ ಸದಸ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ನಿಮ್ಮ ಕಾರ್ಯದಲ್ಲಿ ಬರುವ ತೊಂದರೆಯನ್ನು ದೂರಮಾಡಲು ಶಕ್ತರಾಗಿದ್ದೀರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ದುಷ್ಟರ ಸಹವಾಸದಿಂದ ಅಪಮಾನ ಸಾಧ್ಯತೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ.
ಕುಂಭ ರಾಶಿ: ನಿಮ್ಮ ಒರಟು ಮಾತುಗಳಿಂದ ಆಪ್ತರು ದೂರಾಗಬಹುದು. ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವು ಒಳ್ಳೆಯದಲ್ಲ. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ವಾಹನ ಸಂಚಾರದಿಂದ ತೊಂದರೆ. ಆತುರದಿಂದ ಎಲ್ಲಿರಿಗೂ ಹೋಗುವುದು ಬೇಡ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಮಾತು ವಿವಾದವಾಗಿ ದ್ವೇಷದಲ್ಲಿ ಕೊನೆಗೊಳ್ಳಬಹುದು. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಹಣಕಾಸಿನಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೂಡಿಕೆಯಲ್ಲಿ ಮಿತಿ ಇರಲಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ.
ಮೀನ ರಾಶಿ: ಯೋಜನೆಯನ್ನು ಆರಂಭಿಸಿ ಅನಂತರ ಸರಿ ತಪ್ಪುಗಳ ಬಗ್ಗೆ ಯೋಚಿಸುವಿರಿ. ಇಂದು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಕೇಳಬೇಕಾಬಹುದು. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲತೆ ಇರಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಆಹಾರದ ಉದ್ಯಮವನ್ನು ಲಾಭದತ್ತ ಕೊಂಡುಯ್ಯುವಿರಿ. ಭವಿಷ್ಯದ ಬಗ್ಗೆ ಆಪ್ತಸಮಾಲೋಚನೆ ನಡೆಸುವಿರಿ. ನೌಕರರ ಬಗ್ಗೆಯೂ ಪ್ರೀತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.




