AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು

ರಾಶಿ ಭವಿಷ್ಯ ರವಿವಾರ(ಸೆ.29): ಸಜ್ಜನರ ಸಹವಾಸವನ್ನು ಇಷ್ಟಪಡುವಿರಿ. ಮಾತುಗಳನ್ನು ನೋವಾಗುವಂತೆ ಆಡುವಿರಿ. ಭೋಗವಸ್ತುಗಳ ಖರೀದಿಯನ್ನು ಮಾಡುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕೆಲಸವನ್ನು ಮಾಡುವುದು ಬೇಡ. ಹಾಗಾದರೆ ಸೆಪ್ಟೆಂಬರ್​ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು
ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು
TV9 Web
| Edited By: |

Updated on: Sep 29, 2024 | 12:12 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:52 ರಿಂದ 06:22, ಯಮಘಂಡ ಕಾಲ ಮಧ್ಯಾಹ್ನ 12:23ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:23 ರಿಂದ 04:52 ರ ವರೆಗೆ.

ಧನು ರಾಶಿ: ಯಾವುದರಲ್ಲಿಯೂ ಸುಖ ಕಾಣುವ ಮನಸ್ಸು ಆಗದು. ಶುಭಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ದಿನವು ಉಲ್ಲಾಸದ ಸ್ಫೂರ್ತಿಗಳಿಂದ ಕೂಡಿರುತ್ತದೆ. ನೀವು ಸಂಪೂರ್ಣ ಜೀವಂತಿಕೆಯ ಭಾವನೆ ಹೊಂದಿದ್ದು, ಅತ್ಯಂತ ಉತ್ಸಾಹದಲ್ಲಿರುವುದರಿಂದ ಅದು ಅರ್ಥವಿಲ್ಲದ ಚಟುವಟಿಕೆಗಳು ಅಥವಾ ಕೆಲಸಗಳಾದರೂ ನೀವು ತಲೆ ಕೆಡಿಸಿಕೊಳ್ಳುವುದಿಲ್ಲ. ಸಜ್ಜನರ ಸಹವಾಸವನ್ನು ಇಷ್ಟಪಡುವಿರಿ. ಮಾತುಗಳನ್ನು ನೋವಾಗುವಂತೆ ಆಡುವಿರಿ. ಭೋಗವಸ್ತುಗಳ ಖರೀದಿಯನ್ನು ಮಾಡುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕೆಲಸವನ್ನು ಮಾಡುವುದು ಬೇಡ. ಹಿರಿಯ ಹಿತವಚನವು ನಿಮಗೆ ಅಸಹ್ಯವಾಗುವುದು. ಆಹಾರದಿಂದ ನಿಮಗೆ ಅನಾರೋಗ್ಯವು ಆಗುವುದು. ಸಂಗಾತಿಯ ಮಾತುಗಳನ್ನು ವಿರೋಧಿಸುವಿರಿ. ಇನ್ನೊಬ್ಬರಿಗೆ ಚುಚ್ಚಿ ಮಾತನಾಡಲಿದ್ದೀರಿ. ಸುಲಭವಾಗಿ ಸಿಗುವುದನ್ನು ಬಿಟ್ಟುಕೊಡುವಿರಿ. ನಿಮ್ಮ ಪ್ರಯಾಣದಿಂದ ಇಂದು ತುಂಬಾ ಪ್ರಯೋಜನ ಆಗದು.

ಮಕರ ರಾಶಿ: ಇಂದು ಕೆಲವು ಘಟನೆಗಳನ್ನು ಹೇಗೆ ಸ್ವಕರಿಸಬೇಕು ಎಂಬ ಇರುಸುಮುರುಸಾಗಬಹುದು. ನೀವು ಹಳೆಯ ನೆನಪುಗಳ ಮನಸ್ಥಿತಿಯಲ್ಲಿರುತ್ತೀರಿ. ಬೌದ್ಧಿಕ ಅನ್ವೇಷಣೆಗಳು ನಿಮ್ಮನ್ನು ಆಕರ್ಷಿಸುತ್ತವೆ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸ ಬೇಕಾಗಬಹುದು. ಇಂದು ನೀವು ಮಾಡಿದ ಖರ್ಚು ಸದುಪಯೋಗವಾಗಿದೆ ಎಂದುಕೊಳ್ಳುವುದು ಬೇಡ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು. ಸಂಗಾತಿಯ ಗುಣವನ್ನು ಅತಿಯಾಗಿ ಇಷ್ಟಪಡುವಿರಿ. ಅತಿಯಾದ ಕೆಲಸದ ಕಾರಣ ನಿಮಗಾದ ಮಾನಸಿಕ‌ ಒತ್ತಡಕ್ಕೆ ವಿಶ್ರಾಂತಿ ಅವಶ್ಯಕವಾದೀತು. ಎಲ್ಲ ಜವಾಬ್ದಾರಿಗಳೂ ನಿಮಗೆ ಬೇಕು ಎಂಬ ದುರಾಸೆ ಬೇಡ. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು.

ಕುಂಭ ರಾಶಿ: ನಿಮಗೆ ಸಿಗಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗದು. ವಿಷಯ ಎಷ್ಟೇ ದೊಡ್ಡದಾಗಿದ್ದರೂ, ನಿಮ್ಮ ಸಾಮರ್ಥ್ಯ, ನಿಮ್ಮ ವ್ಯವಹಾರ ಕುಶಲತೆ ನಿಮ್ಮನ್ನು ಮುನ್ನಡೆಸುತ್ತದೆ. ಗಮನ ಕೇಂದ್ರೀಕರಿಸಿ ಹಾಗೂ ಎಚ್ಚರದಿಂದಿರಿ. ಜಾಗರೂಕತೆ ಮತ್ತು ಹುಷಾರಿನಲ್ಲಿರಿ. ಶಾಂತವಾಗಿ ಹಾಗೂ ಸೂಕ್ಷ್ಮವಾಗಿ ವ್ಯವಹರಿಸಿ. ಆಲಂಕಾರಿಕ ವಸ್ತುಗಳ ಬಗ್ಗೆ ಹೆಚ್ಚು ಮೋಹವಿರುವುದು. ನಿಮ್ಮ ವರ್ತನೆಯು ಹಲವರಿಗೆ ಇಷ್ಟವಾಗಲಿದೆ. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಮನಃಸ್ಥಿತಿಯನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಿಕೊಳ್ಳುವಿರಿ. ಕೃಷಿಕರು ಅಧಿಕ ಲಾಭವನ್ನು ಪಡೆಯುವರು. ಅಪರಿಚಿತರ ಸಹವಾಸವನ್ನು ಕಡಿಮೆ ಮಾಡಿಕೊಳ್ಳಿ. ಹೂಡಿಕೆಯಲ್ಲಿ ಜಾಗರೂಕತೆ ಇರಲಿ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು. ಇಂದಿನ ಒತ್ತಡದಲ್ಲಿ ಗಂಭೀರವಾದ ತೀರ್ಮಾನಗಳು ಕಷ್ಟ.

ಮೀನ ರಾಶಿ: ನಿಮ್ಮ ಬಾಂಧವ್ಯಗಳನ್ನು ಸದೃಢಗೊಳಿಸಲು ನೀವು ವಿಶೇಷ ಪ್ರಯತ್ನಗಳನ್ನು ಮಾಡುತ್ತೀರಿ. ಬದ್ಧತೆಗಳನ್ನು ಭವಿಷ್ಯಕ್ಕೆ ಭದ್ರತೆಯಾಗಿ ಕಾಣುತ್ತೀರಿ. ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲಿದ್ದೀರಿ. ಗೌರವಗಳು ನಿಮಗೆ ಸಿಗಬಹುದು. ಕೆಲವು ವಿಚಾರವು ನಿಮಗೆ ಗೊತ್ತಾಗದೇ ಇರುವುದು ಬೇಸರ ತರಿಸಬಹುದು. ಮನೆಯರ ಮೇಲೆ ನೀವು ಸಿಟ್ಟಾಗುವಿರಿ. ಯಾರ ಮಾತನ್ನೂ ಕೇಳುವ ಮಾನಸಿಕತೆ ಇರುವುದಿಲ್ಲ. ತಾಳ್ಮೆಯಿಂದ ಇಂದಿನ ವ್ಯವಹಾರವನ್ನು ಮಾಡಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ನಿಮ್ಮ ನೇರ ನುಡಿಗಳೇ ಇಂದು ನಿಮಗೆ ತೊಂದರೆ ತರುವುದು. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು.

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ