AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ

ಜನ್ಮಸಂಖ್ಯೆ 1ರ (ಯಾವುದೇ ತಿಂಗಳಿನ 1, 10, 19, 28) ಇಂದಿನ ದಿನ ಭವಿಷ್ಯದ ಪ್ರಕಾರ, ಅನಿರೀಕ್ಷಿತ ಸವಾಲುಗಳಿಂದ ಹೆಚ್ಚಿನ ಲಾಭವಾಗಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳಿಗೆ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ. ಆರ್ಥಿಕವಾಗಿ ಸ್ಥಿರತೆಯಿದ್ದು, ಹಳೆಯ ಹೂಡಿಕೆಗಳಿಂದ ಸಣ್ಣ ಲಾಭ ನಿರೀಕ್ಷಿಸಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಬೆಲೆ ನೀಡಿ ಸಂಘರ್ಷಗಳನ್ನು ತಪ್ಪಿಸಿ. ನಿಮ್ಮ ಮೌನವೇ ಶಕ್ತಿಯಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 13ರ ದಿನಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 13, 2026 | 1:04 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನೀವು ಹಾಕಿದ ಯೋಜನೆಗಳಿಗಿಂತ ಅನಿರೀಕ್ಷಿತವಾಗಿ ಎದುರಾಗುವ ಸವಾಲುಗಳೇ ನಿಮಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಕಚೇರಿಯಲ್ಲಿ ಕೇವಲ ನಿಮ್ಮ ಕೆಲಸದ ಮೇಲೆ ಗಮನಹರಿಸದೆ, ಸಹೋದ್ಯೋಗಿಗಳ ಸಮಸ್ಯೆಗಳಿಗೂ ಸ್ಪಂದಿಸುವುದು ನಿಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯಲಿದೆ. ಆರ್ಥಿಕವಾಗಿ ಈ ದಿನ ಸ್ಥಿರತೆ ಇರಲಿದ್ದರೂ, ಸಂಜೆ ವೇಳೆಗೆ ಹಳೆಯ ಹೂಡಿಕೆಗಳಿಂದ ಸಣ್ಣ ಮಟ್ಟದ ಲಾಭಾಂಶ ಹರಿದು ಬರಲಿದೆ. ಕುಟುಂಬದಲ್ಲಿ ಹಿರಿಯರ ಮಾತಿಗೆ ಬೆಲೆ ನೀಡುವುದು ಸಂಘರ್ಷಗಳನ್ನು ತಪ್ಪಿಸಲಿದೆ. ನಿಮ್ಮ ಮೌನವೇ ದೊಡ್ಡ ಶಸ್ತ್ರವಾಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಮನಸ್ಸು ಹೊಸ ತಾಣಗಳತ್ತ ಅಥವಾ ಹೊಸ ಆಲೋಚನೆಗಳತ್ತ ಹರಿಯಲಿದೆ. ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ಅದರ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿ. ವ್ಯಾಪಾರಸ್ಥರಿಗೆ ಹೊಸ ಪಾಲುದಾರಿಕೆ ಒಪ್ಪಂದಗಳು ಸಿಗುವ ಸಾಧ್ಯತೆ ಇದೆ, ಆದರೆ ಸಹಿ ಹಾಕುವ ಮುನ್ನ ಪಾರದರ್ಶಕತೆಗೆ ಒತ್ತು ನೀಡಿ. ಮನೆಯಲ್ಲಿ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ಅದನ್ನು ದೊಡ್ಡದು ಮಾಡದೆ ಸಮಾಧಾನದಿಂದ ವರ್ತಿಸಿ. ವಿದ್ಯಾರ್ಥಿಗಳಿಗೆ ಸಂಶೋಧನಾತ್ಮಕ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ.

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುವ ದಿನವಿದು. ಸಾರ್ವಜನಿಕ ಕೆಲಸಗಳಲ್ಲಿ ತೊಡಗಿರುವವರಿಗೆ ದೊಡ್ಡ ಜವಾಬ್ದಾರಿಗಳು ಎದುರಾಗಲಿವೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅಂಧವಾಗಿ ನಂಬಬೇಡಿ; ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರುವಂತೆ ನೋಡಿಕೊಳ್ಳಿ. ಆರೋಗ್ಯದ ದೃಷ್ಟಿಯಿಂದ ಅತಿಯಾದ ಕೆಲಸದ ಒತ್ತಡವು ಆಯಾಸಕ್ಕೆ ಕಾರಣವಾಗಬಹುದು, ಹೀಗಾಗಿ ವಿಶ್ರಾಂತಿಗೆ ಸಮಯ ಮೀಸಲಿಡಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಶಾಂತಿ ಲಭಿಸಲಿದೆ. ಮಕ್ಕಳ ಪ್ರಗತಿಯಿಂದ ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ