Horoscope: ರಾಶಿಭವಿಷ್ಯ, ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 12, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 12 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಆಯುಷ್ಮಾನ್, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ. ರಾಹು ಕಾಲ ಮಧ್ಯಾಹ್ನ 04:34 ರಿಂದ 06:00, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:08 ರಿಂದ 04:34ರ ವರೆಗೆ.

ಮೇಷ ರಾಶಿ: ಪಾಲುದಾರಿಕೆಯ ಮಾತುಕತೆಗಳನ್ನು ಮುಂದೂಡಿ. ಸಾಲಕ್ಕಾಗಿ ಯಾರಾದರೂ ಪ್ರೇರೇಪಿಸಬಹುದು. ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನ್ಯರಿಗೆ ಅಸಾಧ್ಯವಾದ ಕೆಲಸವು ನಿಮ್ಮಿಂದ ಸಾಧ್ಯವಾಗಬಹುದು. ನೇರ ಮಾತಿನಿಂದ ನಿಮ್ಮ ಅಭಿಪ್ರಾಯವನ್ನು ತಿಳಿಸಿ.

ವೃಷಭ ರಾಶಿ: ರಹಸ್ಯ ವಿಚಾರವನ್ನು ನೀವು ಅರಿವಿಲ್ಲದೇ ಹೇಳುವಿರಿ. ಕೆಲವು ಸಂದರ್ಭಗಳನ್ನು ನಿಭಾಯಿಸುವುದು ಕಷ್ಟಕರವೆನಿಸುವುದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ.

ಮಿಥುನ ರಾಶಿ: ನೂತನ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಪ್ರಾಪ್ತವಾಗುವುದು. ಬಂಧುಗಳ ವಿಚಾರದಲ್ಲಿ‌ ತೃಪ್ತಿ‌ ಇರದು. ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಅಪರಿಚಿತರ ಪರಿಚಯ ಮಾತ್ರದಿಂದ ಎಲ್ಲವನ್ನೂ ತಿಳಿಸುವವರೆಗೂ ಮುಂದುವರಿಯುವುದು ಬೇಡ.

ಕಟಕ ರಾಶಿ: ತಂದೆಯ ಆರೋಗ್ಯವು ಕ್ಷೀಣಿಸಬಹುದು. ದುಷ್ಕೃತ್ಯದಲ್ಲಿ ಮನಸ್ಸು ಇರಲಿದೆ. ಆಹಾರ ಉದ್ಯಮದಿಂದ ಉತ್ತಮ ಆದಾಯ ಸಿಗಬಹುದು.‌ ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಮಿತವಾದ ಮಾತು ಇರಲಿ.

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ