Horoscope: ನಿತ್ಯ ಭವಿಷ್ಯ; ಯಾರಾದರೂ ಸುಮ್ಮನೆ ನಿಮ್ಮ ಜೊತೆ ಜಗಳಕ್ಕೆ ಬರಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 19 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಯಾರಾದರೂ ಸುಮ್ಮನೆ ನಿಮ್ಮ ಜೊತೆ ಜಗಳಕ್ಕೆ ಬರಬಹುದು
ರಾಶಿಭವಿಷ್ಯ
Edited By:

Updated on: Apr 19, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾ ಫಲ್ಗುಣೀ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:51 ರಿಂದ  09:25ರ ವರೆಗೆ.

ಮೇಷ ರಾಶಿ : ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಾರಿರಿ. ಇದಕ್ಕಾಗಿ ಯಾರಿಂದಲಾದರೂ ಅಪಮಾನ ಆಗಬಹುದು. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಸಿಕ್ಕಿದ್ದನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿ. ಮಾತನ್ನು ಉಳಿಸಿಕೊಂಡು ಗೆಲ್ಲುವಿರಿ. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ಮನದಲ್ಲಿ ಆತಂಕವಿದ್ದರೂ ಶಾಂತಿಯಿಂದ ವರ್ತಿಸುವಿರಿ. ಅವಶ್ಯಕವೆನಿಸಿದ ಹೂಡಕೆಗಳನ್ನು ಮಾಡಿ. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ಯಾರಾದರೂ ಸುಮ್ಮನೆ ನಿಮ್ಮ ಜೊತೆ ಜಗಳಕ್ಕೆ ಬರಬಹುದು.

ವೃಷಭ ರಾಶಿ : ಕರಕುಶಲಗಳಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು ಇಂದು. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಇಂದು ಮನಬಿಚ್ಚಿ ಮಾತನಾಡಿ ನಿಮ್ಮ ಬಯಕೆಯನ್ನು ಈಡೇರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆತು ವಿದೇಶಕ್ಕೆ ತೆರಳಬಹುದು. ಮಕ್ಕಳಿಗೆ ಪ್ರಸಿದ್ಧ ಸಂಸ್ಥೆಯ ಅಧಿಕಾರವು ಸಿಗಬಹುದು. ನಿಮ್ಮ ಮನಸ್ಸಿಗೆ ಒಪ್ಪುವಂತಹ ಕೆಲಸಗಳನ್ನು ಮಾತ್ರ ಮಾಡಿ. ನಿರ್ಧಾರವನ್ನು ಬದಲಿಸುವುದು ಸರಿಕಾಣದು. ಆಸ್ತಿಯ ವಿಚಾರದಲ್ಲಿ ನೀವು ಆಸಕ್ತಿಯನ್ನು ಕಳೆದುಕೊಳ್ಳುವಿರಿ. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ : ನಿಮಗೆ ಸಹೋದರ ಬಗೆಗೆ ವಿಶ್ವಾಸವು ಇರದು. ಏನೇ ಆದರೂ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೊಡಬೇಕಾದವರಿಗೆ ಗೌರವವನ್ನು ಕೊಡಿ. ನಿಧಾನಗತಿಯಲ್ಲಿ ಕೆಲಸವನ್ನು ಆರಂಭಿಸುವಿರಿ. ಪ್ರಯಾಣವೊಂದನ್ನು ಮುಂದೂಡಿ. ಗೃಹನಿರ್ಮಾಣದ ವಸ್ತುಗಳನ್ನು ಮಾರಾಟ ಮಾಡುವವರು ಅಧಿಕ ಲಾಭವನ್ನು ಪಡೆಯುವರು. ಹೊಸ ಉದ್ಯಮದ ಸಲುವಾಗಿ ಉದ್ಯಮಿಗಳನ್ನು ಭೇಟಿ ಮಾಡುವಿರಿ. ಸಾಲವನ್ನು ಮಾಡಬೇಕಾಗಿಬರಬಹುದು. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು. ಅಕಸ್ಮಾತ್ ಹಣವು ಸಿಗುವುದು.

ಕರ್ಕ ರಾಶಿ : ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯವಾಗುವುದು. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಇದರಿಂದ ತುರ್ತು ಕೆಲಸಗಳನ್ನು ಮರೆಯಬಹುದು. ನಿಮ್ಮ ಕಾರ್ಯಕ್ಷೇತ್ರದಲ್ಲಿ ಕೆಲ ದಿನಗಳಿಂದ ಇದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಂತಾನದ ಲಾಭವು ನಿಮ್ಮ ಸಂತೋಷವನ್ನು ದ್ವಿಗುಣ ಮಾಡುವುದು. ವಂಶದ ಹಿರಿಯರಿಗೆ ಸೇರಿದ ಆಸ್ತಿಯಲ್ಲಿನ ಪಾಲು ದೊರೆಯುತ್ತದೆ. ಅವಶ್ಯಕತೆ ಇದ್ದಲ್ಲಿ ಉದ್ಯೋಗ ಬದಲಿಸಬಹುದು. ಹಣಕಾಸಿನ ವಿಚಾರದಲ್ಲಿ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ನೀವು ಎಲ್ಲವನ್ನು ತಿಳಿದವರಂತೆ ನಿಮ್ಮ ನಡವಳಿಕೆ ಇರುವುದು. ಯಾರದೋ ತಪ್ಪಿನ ಕಾರಣ ವಾಹನದಿಂದ ಬೀಳುವ ಸಾಧ್ಯತೆ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು. ನೂತನ ವಸ್ತ್ರಗಳನ್ನು ಖರೀದಿಸುವಿರಿ. ಇನ್ನೊಬ್ಬರನ್ನು ಮುಚ್ಚಿಸಲು ಹೋಗಿ ಸಮಯ ಹಾಳು ಮಾಡುವಿರಿ.