Horoscope: ನಿತ್ಯಭವಿಷ್ಯ; ಇಂದು ಅದೃಷ್ಟ ಈ ರಾಶಿಯವರ ಕಡೆ ಇದೆ, ಆದರೆ ಅದನ್ನು ಅನುಭವಿಸುವ ಮನೋಭಾವ ಇರಲಿ

|

Updated on: Feb 25, 2024 | 6:41 AM

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಫೆಬ್ರವರಿ​​​​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ನಿತ್ಯಭವಿಷ್ಯ; ಇಂದು ಅದೃಷ್ಟ ಈ ರಾಶಿಯವರ ಕಡೆ ಇದೆ, ಆದರೆ ಅದನ್ನು ಅನುಭವಿಸುವ ಮನೋಭಾವ ಇರಲಿ
ಪ್ರಾತಿನಿಧಿಕ ಚಿತ್ರ
Image Credit source: Getty Images
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಸುಕರ್ಮ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಸಂಜೆ 05:10 ರಿಂದ 06:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:46 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:10ರ ವರೆಗೆ.

ಧನು ರಾಶಿ: ಇಂದು ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಪ್ರೇಮ ವ್ಯವಹಾರಗಳಲ್ಲಿ ಹೊಂದಾಣಿಕೆ ಬೇಕೆನಿಸುವುದು. ಅದೃಷ್ಟ ನಿಮ್ಮ ಕಡೆ ಇದ್ದರೂ ಅದನ್ನು ಅನುಭವಿಸುವ ಮನೋಭಾವ ಇರಲಿ. ನಿಮ್ಮ ಮನಸ್ಸನ್ನು ಕಾಡುವ ಸಮಸ್ಯೆಗಳನ್ನು ಪರಿಹರಿಸಲು ನಿಮ್ಮ ಬುದ್ಧಿವಂತಿಕೆ, ಚಾತುರ್ಯ ಬೇಕಾಗುವುದು. ನಿಮ್ಮ ಒಡಹುಟ್ಟಿದವರೊಂದಿಗಿನ ಸಹಯೋಗವು ಇಂದು ಆರ್ಥಿಕ ಲಾಭಕ್ಕೆ ಕಾರಣವಾಗುತ್ತದೆ. ಅತ್ಯಂತ ಸಂಭ್ರಮ ಪಡುವಿರಿ. ಕಾನೂನಿನ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ಮಕ್ಕಳ ಒತ್ತಾಯಕ್ಕೆ ಇಂದು ಪ್ರಯಾಣವನ್ನು ಮಾಡುವಿರಿ. ನಿಮ್ಮ ಇಷ್ಟವಾದ ವಸ್ತುವು ಕಣ್ಮರೆಯಾಗಿರುವುದು ಇಂದು ಗೊತ್ತಾಗುವುದು.

ಮಕರ ರಾಶಿ: ಇಂದು ಶುಭ ಕಾರ್ಯಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳು ಯಶಸ್ಸು ಸಾಧಿಸುವರು. ಹಿರಿಯ ಪ್ರಬುದ್ಧ ವ್ಯಕ್ತಿಯಿಂದ ನೀವು ಮಾರ್ಗದರ್ಶನ ಮತ್ತು ಬೆಂಬಲವನ್ನು ಸ್ವೀಕರಿಸುತ್ತೀರಿ. ಕುಟುಂಬದ ಕಡೆಯಿಂದ ಸಂತೋಷದ ಮಾತುಗಳು ಇರುವುದು. ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಹಳೆಯ ವಾಹನದ ಮಾರಾಟ ಮಾಡಿ ಹೊಸ ವಾಹನವನ್ನು ಖರೀದಿಸುವಿರಿ. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ತಲೆಕೊಡಬೇಕಾದೀತು. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ. ಎಷ್ಟು ಅವಶ್ಯಕವೋ ಅಷ್ಟನ್ನು ಮಾತ್ರ ಮಾಡಿ. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು.

ಕುಂಭ ರಾಶಿ: ದೊಡ್ಡ ಲಾಭಕ್ಕೆ ಸಣ್ಣದನ್ನು ಬಲಿಕೊಡಬೇಕಾದೀತು. ಪರೀಕ್ಷೆಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ಇಂದು ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಹಣವನ್ನು ಹೂಡಿಕೆ ಮಾಡುವುದನ್ನು ಪರಿಗಣಿಸಿ, ಇದು ಮಾನಸಿಕ ಶಾಂತಿ ಮತ್ತು ಸ್ಥಿರತೆಗೆ ಕಾರಣವಾಗಬಹುದು. ಪ್ರೀತಿಪಾತ್ರರ ಜೊತೆ ವಾದಗಳನ್ನು ಹುಟ್ಟುಹಾಕುವ ವಿಷಯಗಳಿಂದ ದೂರವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಸುಮ್ಮನೇ ಯಾರ ಬೆಂಬಲಕ್ಕೂ ನಿಲ್ಲಲು ಹೋಗುವುದು ಬೇಡ. ಬಂಧುಗಳನ್ನು ನೀವು ಆಡಿಕೊಳ್ಳುವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ. ಪ್ರಭಾವಿ ವ್ಯಕ್ತಿಗಳ ಸಲಹೆಯಿಂದ ನೀವು ಅಂದುಕೊಂಡ ದಾರಿಯು ಸುಗಮವಾಗುವುದು.

ಮೀನ ರಾಶಿ: ಇಂದು ಸಂತೋಷದ ಸಾಧನಗಳನ್ನು ಪಡೆಯಲು ಖರ್ಚು ಇರುತ್ತದೆ. ಆರ್ಥಿಕ ಲಾಭದ ಅವಕಾಶಗಳು ಬರಲಿವೆ. ಭೂಮಿ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ಅಡೆತಡೆಗಳು ನಿವಾರಣೆಯಾಗುತ್ತವೆ. ನಿಮ್ಮ ಹಾಸ್ಯ ಪ್ರಜ್ಞೆಯು ಇತರರಿಗೆ ಬೇಸರ ತರಿಸೀತು. ನಿಜವಾದ ಸಂತೋಷವು ಭೌತಿಕ ಆಸ್ತಿಯಲ್ಲಿ ಕಂಡುಬರುವುದಿಲ್ಲ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಕಛೇರಿಗೆ ವಿರಾಮವಿದ್ದರೂ ಅನಿರೀಕ್ಷಿತ ಮೀಟಿಂಗ್ ಗೆ ಹಾಜಾರಾಗಬೇಕಾದೀತು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ