AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಹಣಕಾಸಿನ ಒಪ್ಪಂದವನ್ನು ಮಾಡುವಾಗ ಎಚ್ಚರಿಕೆ ಇರಲಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಹಣಕಾಸಿನ ಒಪ್ಪಂದವನ್ನು ಮಾಡುವಾಗ ಎಚ್ಚರಿಕೆ ಇರಲಿ
ದಿನಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 27, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:13 ರಿಂದ 15:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 6:08 ರಿಂದ ಬೆಳಿಗ್ಗೆ 7:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 9:22 ರಿಂದ 10:59ರ ವರೆಗೆ.

ಧನು ರಾಶಿ :ಯಾವುದಾದರೂ ಹಣಕಾಸಿನ ಒಪ್ಪಂದವನ್ನು ಮಾಡುವಾಗ ಎಚ್ಚರಿಕೆ ಇರಲಿ. ಭೂಮಿಯ ವ್ಯವಹಾರವು ನಿಮಗೆ ಲಾಭವನ್ನು ತರುವುದು. ಇಂದು ನಿಮ್ಮ ಕೆಲಸದಿಂದ ನಿಮಗೆ ಆಪಮಾನವಾಗಲಿದೆ. ಇದು ನಿಮಗೆ ಬಹಳ ಮುಜುಗರವನ್ನು ತಂದಿದ್ದು, ಸಹಿಸಿಕೊಳ್ಳುವುದು ಕಷ್ಟವಾಗುವುದು. ತಂದೆಯ ವಿಚಾರದಲ್ಲಿ ನಿಮಗೆ ಸಿಟ್ಟಬರಬಹುದು. ಸರಳವಾಗಿ ಸಿಕ್ಕ ಉದ್ಯೋಗವನ್ನು ಬಿಟ್ಟು ನಿಮ್ಮದೇ ಕಲ್ಪನೆಯ ಉದ್ಯೋಗಕ್ಕೆ ಹುಡುಕಾಟ ನಡೆಸುವಿರಿ. ಸರಳ ಜೀವನವು ನಿಮಗೆ ಸಾಕಾಗಿರಬಹುದು. ಇಂದು ಮಾಡುವ ಕೆಲಸವನ್ನು ಮುಂದೂಡಬೇಡಿ. ಅದು ಎಂದೂ ಆಗದೇ ಹೋಗಬಹುದು. ಶತ್ರುವನ್ನು ಸೃಷ್ಟಿಸಿಕೊಳ್ಳುವ ಪ್ರಯತ್ನ ಬೇಡ. ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡುವಿರಿ‌. ಬೇಕಾದಷ್ಟಕ್ಕೆ ಮಾತ್ರ ಹಣವನ್ನು ಖರ್ಚುಮಾಡಿ. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು.

ಮಕರ ರಾಶಿ :ನಿಮ್ಮ ಹಠದ ಸ್ವಭಾವಕ್ಕೆ ಎಲ್ಲರೂ ಒಗ್ಗುತ್ತಾರೆ ಎನ್ನಲಾಗದು. ನಿಮಗೆ ಬೇಕಾದುದನ್ನೇ ಮಾಡಿಕೊಳ್ಳುವ ಛಾತಿಯು ಇಂದು ಇರಲಿದೆ. ಹಣಕಾಸಿನ ಕುರಿತು ಅತಿಯಾದ ಆಲೋಚನೆಯು ನಿಮ್ಮನ್ನು ಅತಿಯಾಗಿ ಕಾಡಬಹುದು. ಎಲ್ಲವನ್ನೂ ರಾಜಕೀಯ ಬಳಸಿಕೊಳ್ಳುವುದು ಬೇಡ. ನಿಮ್ಮ ಮಾತು ಪ್ರಜೆಗಳ ಮನಸ್ಸಿಗೆ ಮುಟ್ಟಲಿದೆ. ಸಾಲವಾಗಿ ಯಾರಾದರೂ ಹಣವನ್ನು ಕೇಳಿದರೆ ಕೊಡಬೇಡಿ. ಅದು ದುರುಪಯೋಗವಾಗಿ ನಿಮಗೂ ಸಿಗದು. ಸಂಗಾತಿಯಿಂದ ನಿಮಗೆ ಸಂಪತ್ತು ಸಿಗಲಿದೆ. ನೂತನ ವಸ್ತ್ರಗಳನ್ನು ಖರೀದಿಸುವ ಮನಸ್ಸು ಮಾಡುವಿರಿ. ಹೊರಗಡೆ ಸುತ್ತಾಡಲು ಇಚ್ಛಿಸುವಿರಿ. ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚಿನ‌ ಸಮಯ ಕಳೆಯುವಿರಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ.

ಕುಂಭ ರಾಶಿ :ಇಂದು ನೀವು ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳಗಳುವಿರಿ. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುದು. ಸ್ತ್ರೀಯರು ಇಂದು ನಿಮ್ಮ ಸಹಾಯಕ್ಕೆ ಬರುವರು‌. ಆರೋಗ್ಯದ ಮೇಲೆ ಗಮನವಿಟ್ಟು ಇಂದಿನ ಪ್ರಯಾಣವನ್ನು ಮಾಡಲು ಹೋಗಿ. ಇಷ್ಟು ದಿನದ ರಹಸ್ಯವು ಮನೆಯಲ್ಲಿ ಬಹಿರಂಗವಾದೀತು. ಕೇಳಿದರಷ್ಟೇ ಹೇಳಿ, ಯಾರಿಗೂ ಸುಮ್ಮನೇ ಉಪದೇಶವನ್ನು ಮಾಡಬೇಡಿ.‌ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಿಯಾರು. ನಿಮಗೆ ಅಸ್ತಿತ್ವ ಎಷ್ಟು ಮುಖ್ಯ ಎನ್ನುವುದನ್ನು ನೀವು ತಿಳಿಸುವ ಅವಶ್ಯಕತೆ ಇಲ್ಲ. ನಿಧಾನವಾಗಿ ಮುಂದಿನ ಜೀವನದ ಜೀವನದ ಬಗ್ಗೆ ಗಮನಹರಿಸಬೇಕು. ತಾಯಿಯ ಮೇಲೆ ಇಂದು ನೀವು ಸಿಟ್ಟಾಗಬಹುದು. ಖುಷಿಯನ್ನು ನೀವು ಹಂಚಿಕೊಳ್ಳುವ ಮನಸ್ಸು ಮಾಡುವಿರಿ. ಎಲ್ಲದರಲ್ಲಿಯೂ ತಪ್ಪನ್ನು ಹುಡುಕುತ್ತ ಕಾಲಹರಣ ಮಾಡುವುದು ಬೇಡ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ.

ಮೀನ ರಾಶಿ :ಇಂದು ನೀವು ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತವಾಗಿ ಇರಬೇಕು ಎನ್ನುವುದನ್ನು ನಿರ್ಧರಿಸುವಿರಿ. ನಿಮ್ಮ ತಮಾಷೆಯಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ಇಂದು ನಿಮ್ಮ ಕೆಲಸವು ಬಹಳ ಶ್ರಮದಿಂದ ಕೂಡಿದ್ದು, ಅದಕ್ಕೆ ತಕ್ಕ ಫಲವು ಸಿಗದೇ ಇರಬಹುದು. ಉದ್ಯೋಗದಲ್ಲಿ ನಿಮಗೆ ಕೊಟ್ಟ ಜವಾಬ್ದಾರಿ ಸ್ಥಾನವವನ್ನು ನೀವಾಗಿಯೇ ಬಿಟ್ಟುಕೊಡಲಿದ್ದೀರಿ. ಎಲ್ಲರನ್ನೂ ಸಮಭಾವದಿಂದ ನೋಡಲು ಆಗದಿದ್ದರೂ ಅದು ಅನಿವಾರ್ಯ ಆಗುವುದು. ಅಕಸ್ಮಾತ್ ಆಗಿ ದೊರೆತ ಅಮೂಲ್ಯವಾದ ವಸ್ತುವನ್ನು ಜೋಪಾನವಾಗಿ ಇಟ್ಟುಕೊಳ್ಳಿ. ವಾತಾವರಣವು ಬದಲಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗು ಸಾಧ್ಯತೆ ಇದೆ. ನಿಮ್ಮ‌ ಸಾಲವು ತೀರಲು ಬಂಧುಗಳು ಸಹಾಯ ಮಾಡುವರು. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ