AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ಈ ರಾಶಿಯವರು ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 28 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ಈ ರಾಶಿಯವರು ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ
ಈ ರಾಶಿಯವರು ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ
ಗಂಗಾಧರ​ ಬ. ಸಾಬೋಜಿ
|

Updated on: Jun 28, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್. 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ ಮಧ್ಯಾಹ್ನ 12:36ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ ಸಂಜೆ 05:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:45 ರಿಂದ 09:22ರ ವರೆಗೆ.

ಮೇಷ ರಾಶಿ: ವಿವಾಹಕ್ಕೆ ಸಂಬಂಧಿಸಿದ ವ್ಯವಸ್ಥೆಯನ್ನು ನೀವೇ ಮಾಡಿಕೊಳ್ಳುವಿರಿ. ಬೇಡದ ವಿಚಾರಕ್ಕೆ ಮೂಗು ತೂರಿಸುವುದು ಬೇಡ. ನೀವು ಮಾಡುವ ಕೆಲಸದ ಬಗ್ಗೆ ನಿಮಗೆ ಸರಿಯಾದ ಚಿತ್ರಣವಿರಲಿ. ಇಲ್ಲವಾದರೆ ನೀವು ಮಾಡಲು ಹೊರಟ ಕೆಲಸವು ಅಪೂರ್ಣವಾಗುವುದು ಅಥವಾ ಆಗದೇಯೂ ಹೋಗಬಹುದು. ತಂತ್ರಜ್ಞಾನವು ನಿಮ್ಮ ಉಪಯೋಗಕ್ಕೆ ಬರಲಿದೆ. ನಿಮ್ಮ ಕರ್ತವ್ಯಗಳನ್ನು ಮಾಡಲು ಹಿಂಜರಿಯಬೇಡಿ. ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು. ಅವಾಕಶಗಳನ್ನು ಬಳಸಿಕೊಳ್ಳಲು ಹಿಂದೆಟುಹಾಕುವ ಅವಶ್ಯಕತೆ ಇಲ್ಲ. ಬೇಕಾದಷ್ಟು ಸಮಯವು ನಿಮ್ಮ ಪಾಲಿಗೆ ಇರಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಭಾವ ನಿಮ್ಮಲ್ಲಿರಲಿ. ಹೊಸ ವಸ್ತುಗಳನ್ನು ಖರೀದಸಲು ಹೋಗಿ ಸಮಯ ವ್ಯರ್ಥವಾಗುವುದು.‌ ಯಾರನ್ನೂ ಅಶಕ್ತರು ಎಂದು ಭಾವಿಸುವುದು ಬೇಡ.

ವೃಷಭ ರಾಶಿ: ಇಂದು ಎಲ್ಲದಕ್ಕೂ ವಿರೋಧ ಮಾಡುವುದು ನಿಮಗೇ ಇದು ಸರಿ ಕಾಣದು. ಹೊಂದಾಣಿಕೆಯಿಂದ ಹೋಗುವುದು ಉತ್ತಮ. ಮಾತನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾಗುವುದು. ನೀವು ಇಂದು ಶತ್ರುಗಳನ್ನು ಹೆಡೆಮುರಿ ಕಟ್ಟುತ್ತೇನೆ ಎಂಬ ಮನಃಸ್ಥಿತಿಯನ್ನು ಬಿಟ್ಟು ಶಾಂತರಾಗಿ. ನಿಮಗೆ ಕಾಲವು ಬರಲಿದೆ. ಆತುರದಿಂದ ಏನನ್ನಾದರೂ ಮಾಡಲು ಹೋದೀರಿ. ಕೈ ಹಾಕಿದ ಕೆಲಸವೆಲ್ಲ ಚಿನ್ನವಾಗದು. ಆದರೆ ಕಬ್ಬಿಣವಾದರೂ ಆಗುತ್ತದೆ. ಅದು ನಿಮಗೆ ಬಳಕೆ ಬರಲಿದೆ. ಬೇಸರಗೊಳ್ಳುವ ಅವಶ್ಯಕತೆ ಇಲ್ಲ. ವಿದ್ಯಾಭ್ಯಾಸವೂ ಕುಂಠಿತವಾಗುವುದು. ಸತತ ಪ್ರಯತ್ನವು ಬೇಕಾಗಿದೆ. ಯಾರದೋ ಕೆಲಸವನ್ನು ನೀವು ಮಾಡಬೇಕಾಗಿಬರಬಹುದು. ಅವರೂ ನಿಮ್ಮ ಯಶಸ್ಸಿನ ಪಾಲುದಾರರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನಿಮ್ಮ ರಹಸ್ಯವನ್ನು ಬಿಟ್ಟುಕೊಡಲಾರಿರಿ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಸೌಂದರ್ಯ ಪ್ರಜ್ಞೆಯ ಕಡೆಗೆ ಹೆಚ್ಚು ಆಸಕ್ತಿ ಬರುವುದು.

ಮಿಥುನ ರಾಶಿ: ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಆಪ್ತರ ಜೊತೆ ವಿವಾದ ಆಗಲಿದೆ. ನಾನು ಮಾಡಿದ್ದೇ ಸರಿ ಎಂಬ ಹುಂಬುತನ ಇರಲಿದೆ. ಮುಖವನ್ನೇ ನೋಡದ ವ್ಯಕ್ತಿಯೋರ್ವ ನಿಮಗೆ ಹೂಡಿಕೆಯನ್ನು ಮಾಡಲು ಹೇಳಿ ಅದರ ವಿಧಾನವನ್ನು ತಿಳಿಸಿ ಹಣವನ್ನು ಪಡೆಯಬಹುದು. ಕೆಲವು ವಿಚಾರದಲ್ಲಿ ನಿಮಗೆ ಸೋಲಾಗಬಹುದು. ದುಃಖಿಸುವ ಅವಶ್ಯಕತೆ ಇಲ್ಲ. ಉನ್ನತಸ್ಥಾನಕ್ಕೆ ಹೋಗಲು ಅವಕಾಶವನ್ನು ಹುಡುಕುತ್ತೀದ್ದೀರಿ. ತಾಳ್ಮೆ ಇರಲಿ. ಆತುರದಿಂದ‌‌ ಏನನ್ನಾದರೂ ಮಾಡಲು ಹೋಗಬೇಡಿ. ಭೂಮಿಯ ವಿಚಾರವನ್ನು ಸದ್ಯ ಕೈಬಿಡುವುದು ಒಳ್ಳೆಯದು. ನಿಮ್ಮ ಮಾತು ಕಿರಿಕಿರಿ ಆಗಬಹುದು. ಹಿರಿಯರ ಎದುರು ವಿನಯದಿಂದ ಮಾತನಾಡಿ. ಸಾಧ್ಯವಾದರೆ ಅವರ ಸೇವೆ ಮಾಡಿ. ಮಾತಿಗೆ ತಪ್ಪಿ ನಡೆಯುವಿರಿ ಎಂಬ ಮಾತು ಕೇಳಬಹುದು. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ.

ಕಟಕ ರಾಶಿ: ಇಂದು ನಿಮ್ಮ ಅಧ್ಯಾತ್ಮದ ಆಸಕ್ತಿಗೆ ಯೋಗ್ಯವಾದ ಜನ ಹಾಗೂ ವಿಷಯ ಸಿಗಲಿದೆ. ಒಂದೇ ರೀತಯ ಕೆಲಸದಿಂದ ನೀವು ಬೇಸರಗೊಂಡು ಬೇರೆ ರೀತಿಯಲ್ಲಿ ಬೇರೆ ಕೆಲಸವನ್ನು ಮಾಡಲು ಆಲೋಚಿಸುವಿರಿ. ಹೊಸತನ್ನು ಕಲಿಯುವ ಉತ್ಸುಕತೆಯೂ ನಿಮ್ಮಲ್ಲಿ ಇರಲಿದೆ. ದುರಭ್ಯಾಸದಿಂದ ಅಪಕೀರ್ತಿ ಬರಲಿದೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನೀವಿಂದು ಮನೆಯನ್ನು ಬಿಡಬೇಕಾಗಿಬರಬಹುದು. ಹಂಚಿಕೆಯ ವ್ಯವಹಾರ ನಿಮಗೆ ಹಿಡಿಸಿದ್ದಲ್ಲ. ಸುಮ್ಮನೇ ಕಲಹಕ್ಕೆ ಕಾರಣವಾಗುವುದು. ಜನರು ಹತ್ತಿರವಾದಷ್ಟು ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು. ಅಕಸ್ಮಾತ್ ದೂರ ಪ್ರಯಾಣವು ಅನಿವಾರ್ಯವಾದೀತು. ಸರಿಯಾದ ಸಿದ್ಧತೆಯ ಜೊತೆ ಹೋಗಿ. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ಏಕಾಂತದಲ್ಲಿ ಇರಲು ಇಷ್ಟವಾಗುವುದು. ಯಾರ ಅಪವಾದವನ್ನೂ ಗಂಭೀರವಾಗಿ ತೆಗೆದುಕೊಳ್ಳಲಾರಿರಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ