AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಇಂದು ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.05 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 05, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​5ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ 12:31 ರಿಂದ 14:08 ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ 10:54 ರಿಂದ ಬೆಳಿಗ್ಗೆ 12:31ರ ವರೆಗೆ.

ಸಿಂಹ ರಾಶಿ :ಇಂದು ಯಾರದೋ ಜೊತೆ ವ್ಯಾಪಾರದ ಕಾರಣಕ್ಕೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ನೀವು ವಾಹನವನ್ನು ಚಾಲನೆ ಮಾಡುವುದು ಬೇಡ. ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಶುಭ ದಿನ. ನಿಮ್ಮ ಆತ್ಮಸಾಕ್ಷಿಯಾಗಿ ಕೆಲಸ ಮಾಡುವುದರಿಂದ ವೇತನ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಆತ್ಮಸಾಕ್ಷಿಯಾಗಿ ಕೆಲಸ ಮಾಡುವುದರಿಂದ ವೇತನ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ಧಾವಂತದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವುದು.

ಕನ್ಯಾ ರಾಶಿ :ನೀವು ಹೊಸ ವಸ್ತುಗಳನ್ನು ಖರೀದಿಸುವಿರಿ. ಇದರಿಂದ ಮನೆಯಲ್ಲಿ ಕಿರಿಕಿರಿಯ ವಾತಾವರಣವೂ ನಿರ್ಮಾಣವಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ನಿಮ್ಮ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳು ಕೆಲಸದ ಸ್ಥಳದಲ್ಲಿ ನಿಮ್ಮ ಪ್ರೀತಿಯ ನಡವಳಿಕೆಯಿಂದ ಸಂತೋಷಪಡುತ್ತಾರೆ. ಯಾವ ಕಾರ್ಯವನ್ನೂ ಪೂರ್ಣವಾದ ಮನಸ್ಸಿನಿಂದ ಮಾಡಲಾರಿರಿ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ.

ತುಲಾ ರಾಶಿ :ಇಂದು ಮಂದಗತಿಯಲ್ಲಿ ಸಾಗುತ್ತಿದ್ದ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳು ವೇಗವನ್ನು ಪಡೆಯುವುವು. ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಉದ್ಯೋಗಸ್ಥರು ತ್ವರಿತ ಯಶಸ್ಸನ್ನು ಸಾಧಿಸಲು ತಪ್ಪು ದಾರಿ ಹಿಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ ಅದು ನಿಮ್ಮ ವೃತ್ತಿಜೀವನ ಧಕ್ಕೆ ಉಂಟಾಗಬಹುದು. ವ್ಯವಹಾರದ ದೃಷ್ಟಿಯಿಂದ ಸಮಯವು ಅನುಕೂಲಕರವಾಗಿಲ್ಲ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ :ಇಂದು ನಿಮ್ಮವರ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವತ್ತ ನಿಮ್ಮ ಗಮನವಿರಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡ ಸ್ಥಳಗಳಿಗೆ ಹೋಗಿ ಬರುತ್ತೀರಿ. ಉದ್ಯೋಗಸ್ಥರಿಗೆ ಲಾಭದಾಯಕ ದಿನ. ನಿಮ್ಮ ಜ್ಞಾನ ಮತ್ತು ನಡವಳಿಕೆಯಿಂದಾಗಿ ಅನೇಕ ಹೊಸ ಜನರು ನಿಮ್ಮ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂದಿನ ನಿಮ್ಮ‌ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.