AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರವಿರಲಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರವಿರಲಿ
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 25, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವ್ಯತಿಪಾತ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:14 ರಿಂದ 07:48 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ  10:57ರ ವರೆಗೆ.

ಸಿಂಹ ರಾಶಿ : ಸಿಕ್ಕಿದ್ದರಲ್ಲಿ ಸಂತೃಪ್ತಿಯಿಂದ ಅನುಭವಿಸುವ ವ್ಯಕ್ತಿತ್ವ ಅವಶ್ಯಕ. ಇನ್ನೊಬ್ಬರನ್ನು ಗೌರವಿಸುವ ಅಭ್ಯಾಸದಿಂದ ನಿಮಗೆ ಶ್ರೇಷ್ಠವಾದ ಮಾರ್ಗವು ತೆರೆದುಕೊಳ್ಳಬಹುದು. ಸ್ಥಾನವನ್ನೂ, ಬುದ್ಧಿಯನ್ನೂ ಸ್ಥಳವನ್ನೂ ಸಂದರ್ಭವನ್ನೂ ವ್ಯಕ್ತಿಯನ್ನೂ ನಗಣ್ಯಗೊಳಿಸಬೇಡಿ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ‌. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಕುಟುಂಬದ ಬೆಂಬಲವು ಕೇಳದೆಯೂ ಸಿಗುತ್ತದೆ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ವಿಶ್ರಾಂತಿ ದೊರೆಯುವುದು. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ.

ಕನ್ಯಾ ರಾಶಿ : ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕೆಂದು ಅನ್ನಿಸಬಹುದು. ಮನೆಯಲ್ಲಿ ಸಣ್ಣ ಸಣ್ಣ ಖರ್ಚುಗಳಿಗೆ ಧನವನ್ನು ಖರ್ಚು ಮಾಡಬೇಕಾಗಬಹುದು. ನಿಮ್ಮ ಜೀವನವನ್ನು ಲಘುವಾಗಿ ಕಾಣುವುದು ಬೇಡ. ಕಾಲವೇ ಅದಕ್ಕೆ ಉತ್ತರಿಸಬೇಕು. ಅಲ್ಲಿಯ ತನಕ ತಾಳ್ಮೆಯಿಂದ ಇರಬೇಕಾದ ಕರ್ತವ್ಯವಿದೆ. ಕಾರ್ಯ ನೆರವೇರಿದ ಖುಷಿಯು ಹೆಚ್ಚಾಗುವುದು. ಉನ್ನತ ವ್ಯಕ್ತಿಗಳ ಜೊತೆ ಸಂವಹನ ನಡೆಸುವಾಗ ಶಾಂತವಾಗಿರಿ ಮತ್ತು ನಿಮ್ಮ ವಿಶ್ವಾಸವನ್ನು ಕಾಪಾಡಿಕೊಳ್ಳಿ. ಹಿಂದಿನ ಹಣಕಾಸಿನ ನಿರ್ಧಾರಗಳು ಲಾಭದಾಯಕ ಆದಾಯವನ್ನು ನೀಡಬಹುದು. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು.

ತುಲಾ ರಾಶಿ : ನಿಮ್ಮ ನಡೆ ಹಾಗು ನುಡಿಗಳು ವಿರೋಧದಂತೆ ಭಾಸವಾಗಬಹುದು. ಮನಸ್ಸು ಶಕ್ತಿಯನ್ನು ಉಲ್ಬಣಗೊಳಿಸಿಕೊಳ್ಳುವುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ವಿಶ್ವಸಘಾತಕ ಕಾರ್ಯಗಳಿಗೆ ಮುನ್ನುಗ್ಗದಿರಿ. ಪೆಟ್ಟು ತಿಂದರೆ ಮತ್ತೇಳುವುದು ಕಷ್ಟ. ಸುಳ್ಳಾಡಿ ಸಿಕ್ಕಿಕೊಳ್ಳಬಹುದು. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಇಂದು ನಿಮಗೆ ಹೆಚ್ಚಿನ ಶಕ್ತಿ ತುಂಬಿದ ದಿನವಾಗಿರದಿರಬಹುದು. ಕೆಲಸದಲ್ಲಿ ಧನಾತ್ಮಕ ಬದಲಾವಣೆಗಳು ನಿಮಗೆ ಪ್ರಯೋಜನಕಾರಿ ಆಗುತ್ತವೆ. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ.

ವೃಶ್ಚಿಕ ರಾಶಿ : ಇಂದು ನಿಮಗೆ ಅಂದುಕೊಂಡಂತೆ ಏನೂ ನಡೆಯದು ಎನ್ನುವ ಸತ್ಯದರ್ಶನವಾಗಬಹುದು. ಕ್ರೀಡೆಯಲ್ಲಿ ಮನಸ್ಸುಳ್ಳವರಾಗುವಿರಿ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿರುವುದು. ಸಿಟ್ಟನ್ನು ಕಡಿಮೆ ಮಾಡಿಕೊಳ್ಳಿ. ನಿಮ್ಮ ಹಾದಿಯನ್ನು ನೋಡಿಕೊಳ್ಳುವ ಸಮಯವಿದಾಗಿರುತ್ತದೆ. ನಿಮ್ಮ ಆಲೋಚನೆಗಳನ್ನು ಇತರೊಂದಿಗೆ ಹಂಚಿಕೊಂಡರೆ ನಿಮ್ಮ ಸ್ಥಾನಕ್ಕೆ ಚ್ಯುತಿ ಬಂದೀತು. ಪ್ರಯಾಣದಲ್ಲಿ ಆತುರದಿಂದ ಅವಘಡವಾದೀತು. ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿ. ನಿಮ್ಮನ್ನು ನೋಡು ದೃಷ್ಟಿಯು ಇದರಿಂದ ಬದಲಾದೀತು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು.