Horoscope: ದಿನಭವಿಷ್ಯ: ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 03, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​03ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ 12:31ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ 03:45ರ ವರೆಗೆ.

ಸಿಂಹ ರಾಶಿ: ಇಂದು ಸಾಮಾಜಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ಸಿಗುವುದು. ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು. ಯಾವುದೇ ಅನ್ಯ ಆಲೋಚನೆಗೆ ಅವಕಾಶವಿಲ್ಲದೇ ಇರಬಹುದು. ಆರೋಗ್ಯದ ಬಗ್ಗೆ ಜಾಗರೂಕತೆ ಅಗತ್ಯ. ನಿಮ್ಮ ಆಸಕ್ತಿಯಿಲ್ಲದ ಏನಾದರೂ ಇರಬಹುದು. ವೈವಾಹಿಕ ಜೀವನವು ಆಹ್ಲಾದಕರ ಮತ್ತು ಉತ್ತೇಜಕವಾಗಿರುತ್ತದೆ. ಮಿತವಾಗಿ ಕಡಿಮೆ ತೆಗೆದುಕೊಳ್ಳಿ. ಲೋಕವ್ಯವಹಾರದಲ್ಲಿ ಆಸಕ್ತಿ ತೋರಿಸಲಾರಿರಿ. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಷ್ಠೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಶ್ರದ್ಧೆಯಿಂದ ಮಾಡುವ ಕಾರ್ಯಕ್ಕೆ ವಿಘ್ನಗಳು ಬರಬಹುದು.

ಕನ್ಯಾ ರಾಶಿ: ನಿಮ್ಮ ದೌರ್ಬಲ್ಯಗಳನ್ನು ಹತೋಟಿ ತರುವುದು ಕಷ್ಟವಾಗುವುದು. ಇದೇ ಕಾರಣಕ್ಕೆ ಅಪಮಾನವನ್ನು ಎದುರಿಸಬೇಕಾಗುವುದು. ಭೂಮಿ ಮಾರಾಟದ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮವಾಗಿರುವುದು. ನಿಮ್ಮ ಪ್ರೀತಿಪಾತ್ರರ ಭಾವನೆ ಜೊತೆ ಸಹಾನುಭೂತಿ ಹೊಂದುವಿರಿ. ಆರ್ಥಿಕ ಪರಿಸ್ಥಿತಿಯು ಭಾಗಶಃ ಸುಧಾರಿಸುತ್ತದೆ. ಭವಿಷ್ಯದ ಬಗ್ಗೆ ಮನಸ್ಸು ಚಿಂತಿಸಲಿದೆ. ಮಕ್ಕಳ ಜವಾಬ್ದಾರಿಗಳನ್ನು ಪೂರೈಸುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸೃಜನಾತ್ಮಕ ಕೆಲಸಗಳಲ್ಲಿ ಪ್ರಗತಿ ಇರುತ್ತದೆ. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಸಾಮರಸ್ಯದ ಕೊರತೆ ಎದ್ದು ಕಾಣಿಸುವುದು. ಅತಿಯಾದ ಕೋಪದಿಂದ ನಿಮ್ಮ ವ್ಯವಹಾರವು ಬುಡಮೇಲಾದೀತು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು.

ತುಲಾ ರಾಶಿ: ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಅತಿಯಾದಂತೆ ಯಾರಿಗಾದರೂ ಅನ್ನಿಸಬಹುದು. ನಿಮ್ಮ ನಿರ್ಧಾರಗಳು ಇಂದು ಹೆಚ್ಚುವರಿ ಹಣಕಾಸಿನ ಲಾಭವನ್ನು ತರಬಹುದು. ನಿಮ್ಮ ಸಂಗಾತಿಯ ಜೊತೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ದೊರೆಯಲಿದೆ. ಇತರರ ಸಹಕಾರವನ್ನು ತೆಗೆದುಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಸಂಪತ್ತು, ಕೀರ್ತಿ ಮತ್ತು ವೈಭವದಲ್ಲಿ ಹೆಚ್ಚಳವಾಗುತ್ತದೆ. ಸರಕಾರದಿಂದ ಸಹಕಾರ ದೊರೆಯಲಿದೆ. ಶಿಕ್ಷಣವನ್ನು ನೀಡುವ ವ್ಯವಸ್ಥೆಯಲ್ಲಿ ಇದ್ದರೆ ಹೆಚ್ಚು ಉಪಯುಕ್ತವಾಗುವುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸಹೋಗುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ಅತ್ಯಾಕರ್ಷಕ ಅವಕಾಶಗಳು ಅನಿರೀಕ್ಷಿತವಾಗಿ ಸಿಗಲಿದೆ. ನಿಮ್ಮ ಸಂಗಾತಿಯಿಂದ ನಿಮಗೆ ಸಂತೋಷವು ಬೇಕೆನಿಸುವುದು. ಇಂದು ಎದುರಾಗುವ ಸವಾಲುಗಳು ನಿಮಗೆ  ಉದ್ಯೋಗದಲ್ಲಿ ಸ್ಥಿರತೆಯನ್ನು ತೋರಿಸುತ್ತದೆ. ನೀವು ಸರ್ಕಾರದಿಂದ ಬೆಂಬಲವನ್ನು ಪಡೆಯಬಹುದು. ಕುಟುಂಬದ ಜವಾಬ್ದಾರಿಗಳನ್ನು ಪೂರೈಸಲಾಗುವುದು. ಆರ್ಥಿಕ ಅಂಶವು ಬಲವಾಗಿರುತ್ತದೆ. ಉಡುಗೊರೆಗಳು ಅಥವಾ ಗೌರವ ಹೆಚ್ಚಾಗುತ್ತದೆ. ಪರಸ್ಪರ ಸಂಬಂಧಗಳು ಮಧುರವಾಗಿರುತ್ತದೆ. ಭೂಮಿಯ ವ್ಯವಹಾರವು ನಿಮಗೆ ಶಕ್ತಿಯನ್ನು ತಂದೀತು. ಅವಶ್ಯಕವಿರುವದನ್ನು ಇಟ್ಟುಕೊಂಡು ಇನ್ನೊಬ್ಬರಿಗೂ ಕೊಡಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಪರಿಹಾರ ಪಡೆಯಿರಿ.