AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಕಷ್ಟಪಟ್ಟು ಪ್ರಯತ್ನಿಸಿ, ನಿಮಗೆ ಅದೃಷ್ಟದ ಬೆಂಬಲವೂ ಸಿಗಲಿದೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಕಷ್ಟಪಟ್ಟು ಪ್ರಯತ್ನಿಸಿ, ನಿಮಗೆ ಅದೃಷ್ಟದ ಬೆಂಬಲವೂ ಸಿಗಲಿದೆ
ದಿನ ಭವಿಷ್ಯ
TV9 Web
| Edited By: |

Updated on: Mar 08, 2024 | 12:46 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪರಿಘ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:14 ರಿಂದ ಮಧ್ಯಾಹ್ನ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:15 ರಿಂದ 09:45ರ ವರೆಗೆ.

ಧನು ರಾಶಿ : ನಿಮ್ಮ‌ ಮುಕ್ತವಾದ ಮಾತುಕತೆ ನಿಮಗೆ ಇಷ್ಟವಾಗುವುದು. ಭೂಮಿಯ ವ್ಯವಹಾರದಲ್ಲಿ ನಿರೀಕ್ಷಿತ ಲಾಭವು ಆಗದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾರಿಂದಲಾದರೂ ಸಹಕಾರ ಸಿಗುವುದು. ಇಂದು ನಿಮ್ಮ ಬಲವಾದ ಇಚ್ಛಾಶಕ್ತಿಯಿಂದ ತೊಡಕುಗಳನ್ನು ನಿವಾರಿಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಯಾರದ್ದಾದರೂ ಮನವೊಲಿಸುವ ಕೆಲಸವು ನಿಮಗೆ ಬರಬಹುದು. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಕೆಲವರ ಬಗೆಗಿನ ಮನೋಭಾವವನ್ನು ತಿದ್ದಿಕೊಳ್ಳಬೇಕಾಗುವುದು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ.

ಮಕರ ರಾಶಿ : ಇಂದು ನಿಮಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಪೂರ್ಣತೆಯೇ ಹೆಚ್ಚು ಕಾಣಿಸಿಕೊಳ್ಳುವುದು. ಮಕ್ಕಳ ವಿದ್ಯಾಭ್ಯಾಸವು ಹಿಂದುಳಿದಂತೆ‌ ಕಾಣಿಸುವುದು. ಸರ್ಕಾರಿ‌ ಅಧಿಕಾರಿಗಳ ಒಡನಾಟವನ್ನು ಇಟ್ಟುಕೊಳ್ಳುವಿರಿ. ಕಷ್ಟಪಟ್ಟು ಪ್ರಯತ್ನಿಸಿ, ನಿಮಗೆ ಅದೃಷ್ಟದ ಬೆಂಬಲವೂ ಸಿಗಲಿದೆ. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸತ್ಯಸಂಗತಿಯನ್ನು ನಂಬುವ ಸ್ಥಿತಿಯಲ್ಲಿ ನೀವಿರಲಾರಿರಿ. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕೊಡುಕೊಳ್ಳುವ ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರಲಿ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ.

ಕುಂಭ ರಾಶಿ : ಇಂದು ಯಾರಾದರೂ ನಿಮ್ಮ ಆರ್ಥಿಕತೆಯ ಬಗ್ಗೆ ಮಾತನಾಡಿಕೊಳ್ಳಬಹುದು. ಬಾಂಧವ್ಯವನ್ನು ಇಂದು ಹೆಚ್ಚು ಇಷ್ಟಪಡುವಿರಿ. ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಅನವಶ್ಯಕವಾಗಿ ಹಣ ಖರ್ಚು ಮಾಡುವವರಿಗೆ ಇಂದು ಹಣದ ಬೆಲೆ ಅರ್ಥವಾಗಬಹುದು. ನೀವು ಪ್ರೀತಿಯ ಮನಃಸ್ಥಿತಿಯಲ್ಲಿರುವಿರಿ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಕೆಲವರಿಂದ ದೂರವಿರಲು ನೀವು ಇಚ್ಛಿಸುವಿರಿ. ಬೇಕಾದಷ್ಟು ಅವಕಾಶಗಳಿದ್ದರೂ ಯಾವುದನ್ನೂ ಬಳಸಿಕೊಳ್ಳದೇ ಸುಮ್ಮನಾಗುವಿರಿ.

ಮೀನ ರಾಶಿ : ಇಂದು ನೀವು ಆರ್ಥಿಕ ಸುಧಾರಣೆಯ ಕಡೆ ಗಮನ ಕೊಡುವಿರಿ. ನಿಮಗೆ ಮಕ್ಕಳಿಂದ ಬೇಕಾದ ಸಹಕಾರವು ಪ್ರಾಪ್ತವಾಗಲಿದೆ. ಇಂದು ಭೋಗ ಜೀವನವನ್ನು ಹೆಚ್ಚು ಇಷ್ಟಪಡುವಿರಿ‌. ನಿಮ್ಮ ಸಂತೋಷದ ಜೀವನಕ್ಕಾಗಿ ಮೊಂಡುತನವನ್ನು ಬಿಡಬೇಕಾಗುವುದು. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಂಗಾತಿಯ ಜೊತೆ ವಾದದ ಸಾಧ್ಯತೆಯು ಬರಲಿದೆ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಕಾಕತಳೀಯದಂತೆ ಕೆಲವು ಘಟನೆಗಳು ನಡೆಯಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಬೆರೆಯುವುದು ಕಷ್ಟವಾದೀತು. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)