AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಇಂದು ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 09 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 09, 2024 | 12:45 AM

Share

ಆರ್ಥಿಕಸ್ಥಿತಿ ಸುಧಾರಣೆ, ನೆಚ್ಚಿನ ವ್ಯಕ್ತಿಯ ಭೇಟಿ ಮಾರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 14:05 ರಿಂದ 15:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:08 ರಿಂದ 07:43ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ.

ಧನು ರಾಶಿ :ಇಂದು ಉದ್ಯಮಿಗಳು ಬಹಳ ಓಡಾಟದಿಂದ ಲಾಭವನ್ನು ಪಡೆಯುವಿರಿ. ಸರ್ಕಾರಿ ಉದ್ಯೋಗವು ಕಿರಿಕಿರಿ ಎನಿಸುವಂತೆ ಮಾಡಿದರೂ ನೀವು ಅದನ್ನು ಬಿಡಲಾರಿರಿ. ಕುಟುಂಬದವರು ನಿಮ್ಮಿಂದ ಹೆಚ್ಚಿನ ನಿರೀಕ್ಷೆಯನ್ನು ಮಾಡುತ್ತಾರೆ. ಆಕಸ್ಮಿಕವಾಗಿ ವಿಶೇಷ ವ್ಯಕ್ತಿಗಳ ಭೇಟಿಯಾಗಲಿದೆ. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಸ್ಥಿರಾಸ್ತಿಯನ್ನು ವ್ಯವಹಾರ‌ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಯುಕ್ತಿಯಿಂದ ಕೆಲಸ ಮಾಡುವುದು ಒಳಿತು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಭೂಮಿಯ ಖರೀದಿಸಲು ಸಂಗಾತಿಯ ಜೊತೆ ಆರಂಭಿಕ ಚರ್ಚೆ ನಡೆಸುವಿರಿ. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ‌ ಇರುಬುದು. ಉದ್ಯಮದಲ್ಲಿ ಸ್ವಲ್ಪಮಟ್ಟಿನ ಒತ್ತಡ ಕಾಣಿಸುವುದು.

ಮಕರ ರಾಶಿ :ಇಂದು ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ತೊಂದರೆಗಳು ಎದುರಾಗದೇ ಕಾರ್ಯಗಳು ಮುಗಿಯುವುದು. ಯಾರಿಂದಲಾದರೂ ಪ್ರಶ‌ಂಸೆಯನ್ನು ನಿರೀಕ್ಷಿಸುವಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆಗೆ ಗಮನವು ಅಧಿಕವಾಗಲಿದೆ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ನಿಮ್ಮ ಸರಿಯಾದ ಕೆಲಸವನ್ನು ಮಾಡಿ. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ‌ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದಾಂಪತ್ಯಕ್ಕೆ ಹೆಚ್ಚು ಒತ್ತು ಕೊಡುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಿ ಹುಡುಕಾಟ ಮಾಡುವಿರಿ. ಎಲ್ಲರಿಂದ ಪ್ರೀತಿ ಕಡಿಮೆಯಾದಂತೆ ತೋರುವುದು.

ಕುಂಭ ರಾಶಿ :ಇಂದು ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸಬೇಕಾಗುವುದು. ಸುತ್ತಲಿನ ಪರಿಸ್ಥಿತಿಯನ್ನು ಗಮನಿಸಿಕೊಂಡು ವ್ಯವಹರಿಸಿ. ನಿಮ್ಮ ಪೂರ್ವಯೋಜನೆಗಳು ತಲೆಕೆಳಗಾಗಬಹುದು. ಅನಾರೋಗ್ಯದಿಂದ ನಿಮ್ಮ ಉತ್ಸಾಹವು ಕುಗ್ಗಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಯಾರಾದರೂ ವ್ಯಕ್ತಿತ್ವನ್ನು ಅನುಸರಿಸುವ ಮೊದಲು ನಿಮ್ಮ ಬಗ್ಗೆ ಅರಿವು ಇರಲಿ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗುವಿರಿ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು.

ಮೀನ ರಾಶಿ :ಇಂದು ನಿಮ್ಮ ವ್ಯಾಪಾರದಲ್ಲಿ ವೆಚ್ಚಗಳು ಕಡಿಮೆ ಹಾಗೂ ಆದಾಯವು ಅಧಿಕವೂ ಆಗಲಿದೆ. ಸ್ವಂತ ಉದ್ಯಮಿಗಳು ಹೆಚ್ಚಿನ ಲಾಭವನ್ನೂ ಪಡೆಯುವರು. ಅವಿವಾಹಿತರಿಗೆ ವಿವಾಹಕ್ಕೆ ಸಂಬಂಧಿಸಿದ ಏರ್ಪಾಡುಗಳು ಆಗಲಿವೆ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಕಳೆದುಕೊಂಡ ವಸ್ತುವನ್ನು ಬೇರೆ ರೀತಿಯಲ್ಲಿ ಪಡೆದುಕೊಳ್ಳುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಇಷ್ಟವಾಗದು. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ