Horoscope: ದಿನಭವಿಷ್ಯ: ಇಂದು ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 08:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:29 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ.
ಧನು ರಾಶಿ: ಮನೆಯ ದುರಸ್ತಿಯನ್ನು ಮಾಡುವ ಅನಿವಾರ್ಯತೆ ಬರುವುದು. ಮತ್ತೊಂದೆಡೆ, ವ್ಯಾಪಾರ ಸಂಬಂಧಗಳು ಬಲಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ಕೆಲವು ಉತ್ತಮ ಅವಕಾಶಗಳು ಲಭಿಸುತ್ತವೆ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಕೌಟುಂಬಕವಾಗಿ ಕೆಲವು ತೊಡಕುಗಳು ಬರುವುದು. ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಪೂರ್ಣ ನಂಬಿಕೆ ಇರದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ. ಬಂಗಾರದ ಹೂಡಿಕೆಯಲ್ಲಿ ಆಸಕ್ತಿ ಇರುವುದು.
ಮಕರ ರಾಶಿ: ನಿಮ್ಮ ಪ್ರಮುಖ ದಾಖಲೆಗಳನ್ನು ಮೂರನೇ ವ್ಯಕ್ತಿಗೆ ಹಸ್ತಾಂತರಿಸುವುದು ಬೇಡ. ಉದ್ಯಮಿಗಳು ಕಾನೂನು ತೊಡಕಿಗೆ ನೇರವಾಗಿ ಪ್ರವೇಶಿಸುವುದು ಬೇಡ. ಕೆಲಸದ ಸ್ಥಳದಲ್ಲಿ ವಿರೋಧಿಗಳು ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುವ ಮೊದಲು ಕಾರ್ಯವನ್ನು ಪೂರೈಸಿ. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಮಾತಿಗೆ ಮಾತು ಬೆಳೆಸಿಕೊಳ್ಳುವುದು ಬೇಡ. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಪ್ರತಿ ಹಣವೂ ನಿಮಗೆ ಬಹಳ ಮುಖ್ಯವಾಗಿರುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ನಿಮ್ಮ ವೈವಾಹಿಕ ಸಂಬಂಧವು ಹೊಂದಾಣಿಕೆಯನ್ನು ಆಶ್ರಯಿಸಿರುವುದು.
ಕುಂಭ ರಾಶಿ: ಅನಿವಾರ್ಯವಾಗಿ ಇಂದು ಉದ್ಯೋಗವನ್ನು ಮಾಡಬೇಕಾಗಿ ಬರಬಹುದು. ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ಕುಟುಂಬದ ಜೊತೆ ಸಂಬಂಧಗಳನ್ನು ಇಂದು ಸುಧಾರಿಸಿಕೊಳ್ಳುವುದು ಉತ್ತಮ. ನಿಮ್ಮ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಸ್ನೇಹಿತರ ಸಹಾಯಕ್ಕೆ ಹಿಂದೇಟು ಹಾಕುವುದು ಸರಿಯಾಗದು. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.
ಮೀನ ರಾಶಿ: ಇಂದು ಉದ್ಯಮಿಗಳು ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ದೈಹಿಕ ವಿಶ್ರಾಂತಿಯ ಅನಗತ್ಯ ಹೆಚ್ಚಿರುವುದು. ಹೊಸ ಕೆಲಸವನ್ನು ಮಾಡಲು ಬಯಸಿದರೆ ಸಮಯವು ನಿಮಗೆ ಉತ್ತಮವಾಗಿರುತ್ತದೆ. ದೀರ್ಘ ಸಮಯದಿಂದ ಕಾಡುತ್ತಿರುವ ಕಾಯಿಲೆಯಿಂದ ಪರಿಹಾರ ದೊರೆಯಲಿದೆ. ವ್ಯಾಪಾರಸ್ಥರು ಅಧಿಕ ಖರ್ಚಿನ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಇಂದು ನಿಮಗೆ ಗೊತ್ತಿಲ್ಲದೇ ದುಷ್ಟರ ಸಹವಾಸ ಸಿಗಬಹುದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವಿರಿ.
ಲೋಹಿತ ಹೆಬ್ಬಾರ್ – 8762924271 (what’s app only)




