AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಇಂದು ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 22 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 22, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವರಿಯಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ 12:29 ರಿಂದ 14:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41ರಿಂದ ಬೆಳಗ್ಗೆ 9:17ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ 12:29ರ ವರೆಗೆ.

ಧನು ರಾಶಿ :ಇಂದು ನೀವು ಹೊಸ ಉತ್ಸಾಹದಿಂದ ಏನನ್ನಾದರೂ ಅಸಂಬದ್ಧ ಮಾಡಬಹುದು. ಆದಷ್ಟು ನಿಮ್ಮ ನಿಯಂತ್ರಣವನ್ನು ಬಿಟ್ಟು ಕದಲುವುದು ಬೇಡ. ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಇಂದು ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮ್ಮ ಸಾವಧಾನತೆಯು ಕಿರಿಕಿರಿಯನ್ನು ಇತರರಿಗೆ ಕೊಟ್ಟೀತು. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಟವಾದೀತು.

ಮಕರ ರಾಶಿ :ಯಾರನ್ನೋ ಅಪಹಾಸ್ಯ ಮಾಡಲು ಹೋಗಿ ನೋವನ್ನು ಕೊಡುವಿರಿ. ಬಹಳ ಒತ್ತಡದಲ್ಲಿ ಕೆಲಸವನ್ನು ಮಾಡಿ ಮುಗಿಸಲಿದ್ದೀರಿ. ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು. ಪ್ರವಾಸವನ್ನು ಮಾಡಿ ಆನಂದಿಸುವಿರಿ. ವಿದ್ಯಾರ್ಥಿಗಳು ಅಧ್ಯಯನ ಪರರಾಗಿ ಇರುವವರು. ಪರೀಕ್ಷೆಯ ಭಯವೂ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸದಂತೆ ಸಂದರ್ಶನವಾಗಿ ಕೈತಪ್ಪುವ ಸಾಧ್ಯತೆ ಇದೆ. ವಾಹನ ಖರೀದಿಯಿಂದ ಮೋಸ ಹೋಗುವಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಯಾರದೋ ಅನುಭವವು ನಿಮ್ಮದಾಗದು. ಎಲ್ಲ ಅವಕಾಶವನ್ನು ನೀವು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ದೂರದೃಷ್ಟಿಯು ನಿಮ್ಮ ಚಿಂತನೆಗೆ ಇರಲಿ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ನಿಮ್ಮ ಉತ್ಸಾಹವು ಇತರರಿಗೆ ಮಾರ್ಗದರ್ಶನವಾದೀತು.

ಕುಂಭ ರಾಶಿ :ನಿಮ್ಮ ಸಮಸ್ಯೆಗಳನ್ನು ತಾಳ್ಮೆಯಿಂದ ಗಮನಿಸುಕೊಂಡು. ಕೆಟ್ಟ ಸಮಯವು ಬರಬಾರದೆಂದು ಇಷ್ಟದೇವರನ್ನು ಪಾರ್ಥಿಸಿ. ನೂತನ ಗೃಹಾರಂಭದ ಕನಸು‌ ಕಾಣಲಿದ್ದೀರಿ. ನಿಮ್ಮ ಮನಃಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ಇಂದು ಉತ್ಸಾಹದಿಂದ ನೀವು ಕೆಲಸವನ್ನು ಮಾಡಲು ಬಯಸುವುದಿಲ್ಲ. ನೀವು ಹೊಸ ಸಂಬಂಧವನ್ನು ಪ್ರಾರಂಭಿಸಲು ಹೋದರೆ ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಬೇರೆಯವರ‌‌ ನಕಾರಾತ್ಮಕ ಮಾತುಗಳಿಗೆ ಕಿವಿಗೊಟ್ಟರೆ ನಿಮ್ಮ ಕೆಲಸ ಹಿಂದುಳಿಯುವುದು. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ಸುಳ್ಳು ಹೇಳಿ ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡಾರು. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ‌ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಮ್ಮ ಕಾರ್ಯವನ್ನು ಮಾಡಬೇಕಾಗುವುದು.

ಮೀನ ರಾಶಿ :ಇಂದು ನೀವು ಅಕಾರಣವಾಗಿ ಮನಸ್ಸಿನೊಳಗೇ ಸಂಕಟ ಪಡುವಿರಿ. ಸಣ್ಣದನ್ನು ದೊಡ್ಡದಾಗಿ ಮಾಡಿಕೊಳ್ಳಲು ಹೋಗದೇ ಅಲ್ಲಿಯೇ ಮುಕ್ತಾಯಗೊಳಿಸಿ. ಭವಿಷ್ಯದ ತುಂಬಾ ಆಲೋಚನೆಗಳನ್ನು ಮಾಡುವ ಅವಶ್ಯತೆ ಇಲ್ಲ. ಎಲ್ಲವನ್ನೂ ತಿಳಿದಿದ್ದರೂ ವಾದದಲ್ಲಿ ಸೋಲಬೇಕಾದ ಸ್ಥಿತಿ ಇದೆ. ವಿವಾದವನ್ನು ಕಡಿಮೆ ಮಾಡಿಕೊಳ್ಳಿ. ನಿಮ್ಮ ಗುರಿಯ ಸಾಧನೆಯವರೆಗೆ ಮೌನವಿದ್ದಷ್ಟೂ ಒಳ್ಳೆಯದೇ. ವಿವಾಹದ ಸಂಭ್ರಮ ಮನೆಯಲ್ಲಿ ಇರುವುದು. ಗೌರವವನ್ನು ನಿರೀಕ್ಷಿಸದಿದ್ದರೂ ನಿಮಗೆ ಇಂದು ಲಭ್ಯವಾಗಲಿದೆ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಎಲ್ಲದಕ್ಕೂ ಮಾರ್ಗದರ್ಶನ ಬೇಕು ಎನಿಸುವುದಕ್ಕಿಂತ ಸ್ವಂತವಾಗಿ ಆಲೋಚಿಸುವುದೂ ಮುಖ್ಯವಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)