ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಮೇ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಐಂದ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 12:30ರಿಂದ 14:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:41 ರಿಂದ ಬೆಳಿಗ್ಗೆ 09:17ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ12:30ರ ವರೆಗೆ.
ಮೇಷ ರಾಶಿ :ಇಂದಿನ ನಿಮ್ಮ ಮಾತು ಅಲ್ಪವಿದ್ದರೂ ಖಾರವಾಗಿರುವುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಎಲ್ಲ ಕಾರ್ಯಕ್ಕೂ ನಿಮ್ಮದೇ ಆದ ದಾರಿ ಇರುವುದು. ಯಾರ ಕೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ.
ವೃಷಭ ರಾಶಿ :ನಿಮ್ಮ ಮಾರ್ಗವು ಯೋಗ್ಯವಲ್ಲದೇ ಇರಬಹುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ನಿಮ್ಮ ಕೆಲವು ಅಭ್ಯಾಸವನ್ನು ನೀವು ಬಿಡಬೇಕಾಗಿಬರಬಹುದು. ಸರಳತೆಯನ್ನು ಪ್ರಯತ್ನಪೂರ್ವಕವಾಗಿ ರೂಢಿಸಿಕೊಳ್ಳುವಿರಿ. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ಹೊಸತನ ಅನ್ವೇಷಣೆಯಲ್ಲಿ ನೀವು ಇರುವಿರಿ. ದೈವವನ್ನು ದೂರುತ್ತ ಕೂರುವುದು ಬೇಡ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದನ್ನೂ ಉಳಿಸಿಕೊಂಡು ಹೋಗುವುದನ್ನು ಕಲಿಯಬೇಕು.
ಮಿಥುನ ರಾಶಿ :ಇಂದು ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಮನಸ್ಸಾಗುವುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸಮಸ್ಯೆಗೆ ಬೇಕಾದ ಪರಿಹಾರವನ್ನು ತಿಳಿದೂ ಅದನ್ನು ಮಾಡಲಾರಿರಿ. ಎಂದೋ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ಚುಗೆಯಾಗಲಿದೆ. ಆರ್ಥಿಕತೆಯನ್ನು ನಿಭಾಯಿಸುವುದನ್ನು ಕಲಿಯಿರಿ. ಪಿತ್ತಸಂಬಂಧಿಯಾದ ರೋಗವು ಬರಬಹುದು. ವ್ಯಾಪಾರದಲ್ಲಿ ಇಂದಿನ ನಿಮ್ಮ ಬೆಳವಣಿಗೆಯು ನಿಮಗೆ ಅಚ್ಚರಿಯನ್ನು ತರಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.
ಕಟಕ ರಾಶಿ :ನಿಮ್ಮ ಜಾಣತನವೇ ಮುಳುವಾಗಬಹುದು. ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ. ಯಾವ ಮಾತನ್ನೂ ನೋವಾಗುವಂತೆ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟುಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ಸಂತೋಷವನ್ನು ಯಾರೂ ಸಹಿಸಲಾರರು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ. ಸ್ತ್ರೀಯರು ನಿಮಗೆ ಬೆಂಬಲವನ್ನು ನೀಡುವರು. ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಗಬಹುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು.
ಸಿಂಹ ರಾಶಿ :ಇಂದು ನಿಮ್ಮ ಮಾತಿನಿಂದ ಕುಟುಂಬದಲ್ಲಿ ಆತಂಕವು ಸೃಷ್ಟಿಯಾಗಬಹುದು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನಿರೀಕ್ಷಿತ ಜವಾಬ್ದಾರಿಗಳು ಸಿಕ್ಕಿ ಸ್ವಲ್ಪ ಒತ್ತಡವೆನಿಸಬಹುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಹೊಂದಾಣಿಕೆಯನ್ನು ಬಹಳ ಸೂಕ್ಷ್ಮವಾಗಿ ಮಾಡಿಕೊಳ್ಳಬೇಕಾಗಬಹುದು. ಗೌರವವನ್ನು ಪಡೆಯುತ್ತೀರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು. ಅಧಿಕಾರಿಗಳಿಂದ ನಿಮಗೆ ಭಯವು ಇರುವುದು.
ಕನ್ಯಾ ರಾಶಿ :ಇಂದು ನಿಮ್ಮ ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಬೇಡಿ. ನಿಮ್ಮ ಮೇಲಧಿಕಾರಿಗಳ ಜೊತೆ ಚರ್ಚಿಸಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಅನೇಕ ಗೊಂದಲಗಳು ನಿಮ್ಮ ಜೀವನದಲ್ಲಿ ಬರುವುದು. ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಮನೆಯನ್ನು ಬದಲಿಸುವ ಯೋಚನೆ ಮಾಡಬಹುದು ಇಂದು. ಇಂದು, ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಯಾರನ್ನೂ ಅಪ್ರಯೋಜಕರಂತೆ ನೋಡುವುದು ಬೇಡ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ.
ತುಲಾ ರಾಶಿ :ವ್ಯವಸ್ಥೆಯ ಮುಖ್ಯಸ್ಥರಾಗಿ ಮುನ್ನಡೆಸುವುದು ಕಷ್ಟವಾಗುವುದು. ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ನಿಮ್ಮ ಮನಸ್ಸಿನ ವಿಕಾರವನ್ನು ತೋರಿಸುವುದು ಬೇಡ. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ದುಂದುವೆಚ್ಚ ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಪ್ರೀತಿಯಿಂದ ಆತಿಥ್ಯವನ್ನು ಕೊಡಿಸುವರು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ.
ವೃಶ್ಚಿಕ ರಾಶಿ :ಯಾರದೋ ಹಣವು ಅನಿರೀಕ್ಷಿತವಾಗಿ ಕೈ ಸೇರುವುದು. ನಿಮ್ಮ ಬಹುದಿನದ ಸಮಸ್ಯೆಯು ಬಗೆಹರಿಯಲಿದೆ. ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇನ್ನೊಬ್ಬರ ಸಂಪತ್ತನ್ನು ಅಪಹರಿಸಿದ ಅಪವಾದ ಬರುವುದು. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಚೆನ್ನಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು.
ಧನು ರಾಶಿ :ಕಾಲಹರಣದಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳುವಿರಿ. ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಅನ್ನಿಸುವುದು. ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ಮನೆಯವರ ಜೊತೆ ಈ ದಿನವನ್ನು ಕಳೆಯುವಿರಿ. ಆಪ್ತವಲಯದಿಂದ ಆಘಾತಕಾರಿ ಸುದ್ದಿಯು ಬರಬಹುದು. ನಿಮ್ಮ ನಂಬಿಕೆಯು ಸುಳ್ಳಾಗಿ ಬೇಸರವಾಗಬಹುದು. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸುವಿರಿ. ನಿಮ್ಮ ಅಪೂರ್ಣ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ನಿದ್ರೆಯಲ್ಲಿ ಹೆಚ್ಚು ಕನಸು ಕಾಣುವಿರಿ.
ಮಕರ ರಾಶಿ :ನಿಮಗೆ ಗೊತ್ತಿಲ್ಲದೇ ಸಿಟ್ಟನ್ನು ನಿಯಂತ್ರಣದಲ್ಲಿ ಇರಿಸಿರುವಿರಿ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದಿನ ಶಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಮಾಡುವುದು ಉತ್ತಮ. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಉದ್ಯೋಗದ ಹುಡುಕಾಟದಲ್ಲಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಕೆಲವು ಅನಿರೀಕ್ಷಿತ ಲಾಭಗಳಿಂದಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಕೌಟುಂಬಿಕ ವಿಚಾರದಲ್ಲಿ ಭಿನ್ನಮತ ಬರಬಹುದು.
ಕುಂಭ ರಾಶಿ :ನಿಮ್ಮ ವಸ್ತುವಿನಿಂದಲೇ ತೊಂದರೆಯಾಗಲಿದೆ. ಆಲಸ್ಯವು ನಿಮ್ಮ ಒಳ್ಳೆತನಕ್ಕೆ ಮುಳುವಾಗಬಹುದು. ನಿಮ್ಮ ಗುರಿಯನ್ನು ಯಾರಾದರೂ ತಪ್ಪಿಸಬಹುದು. ನಿಮ್ಮನ್ನು ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ನಿಮ್ಮಲ್ಲಿ ಕಲಾವೃಕ್ಷವಿದ್ದು ಅದಕ್ಕೆ ಸರಿಯಾಗಿ ನೀರೆರಿಯಿರಿ. ಇದೇ ನಿಮ್ಮನ್ನು ಎತ್ತರಕ್ಕೆ ಒಯ್ಯಲಿದೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಬೇಕಾದ ಔಷಧವನ್ನು ಮಾಡಿ. ನಿಮ್ಮ ಮೇಲೆ ಒತ್ತಡ ಅಧಿಕವಾಗಿ ಬರಬಹುದು. ಇಂದು ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ನಿಮ್ಮ ಮನಸ್ಸಿನಲ್ಲಿ ನೀವು ತುಂಬಾ ಸಂತೋಷವಾಗಿರುತ್ತೀರಿ. ಪ್ರವಾಸ ವಿಚಾರದಲ್ಲಿ ಬಹಳ ಗೊಂದಲವಿರುವುದು. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು. ಶತ್ರುಗಳ ಬಗ್ಗೆ ಹೆಚ್ಚು ಚಿಂತೆ ಮಾಡಬೇಕಾಗುವುದು.
ಮೀನ ರಾಶಿ :ನೀವು ಮನೆಯವರಿಗೆ ತೊಂದರೆಯಾಗದಂತೆ ನೀವೇ ಉದ್ಯೋಗದ ಜೊತೆ ಉನ್ನತ ವಿದ್ಯಾಭ್ಯಾಸವನ್ನೂ ಮಾಡಬೇಕಾಗುವ ಸ್ಥಿತಿ ಬರಬಹುದು. ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಕಲಹವೇರ್ಪಡಬಹುದು. ಆಪ್ತರ ಜೊತೆ ಹಣಕಾಸಿನ ವಿಚಾರವಾಗಿ ಸಮಾಲೋಚನೆ. ಹಳೆಯ ಸ್ನೇಹಿತರಿಂದ ಬೆಂಬಲವನ್ನು ಪಡೆಯುವಿರಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಗೌರವವನ್ನೂ ಪಡೆಯುವಿರಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ವಾಹನ ಖರೀದಿಗೆ ದಾಖಲೆಗಳನ್ನು ತಯಾರಿಸಿಕೊಳ್ಳುವಿರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು.
–ಲೋಹಿತ ಹೆಬ್ಬಾರ್-8762924271 (what’s app only)