Horoscope: ದಿನ ಭವಿಷ್ಯ; ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬಬೇಡಿ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ.ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 08 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಶೂಲಿ, ಕರಣ: ಬವ , ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಯಮಘಂಡ ಕಾಲ 14:09 ರಿಂದ ಸಂಜೆ 15:46ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.
ಧನು ರಾಶಿ :ಇಂದು ನಿಮ್ಮ ಮನೆಯ ಒತ್ತಡದದ ಕಾರಣ ಯಾವ ಕಾರ್ಯವನ್ನೂ ಪೂರ್ಣಗೊಳಿಸಲಾಗದು. ಹಣವನ್ನು ಸಂಪೂರ್ಣವಾಗಿ ಇತರೇತರ ಕಾರ್ಯಗಳಿಗೆ ಖರ್ಚು ಮಾಡಿ ತುರ್ತಿಗೆ ಹಣವಿಲ್ಲದಂತೆ ಮಾಡಿಕೊಳ್ಳುವಿರಿ. ಅತಿಯಾದ ಸಂತೋಷದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಇಲ್ಲವಾದರೆ ನೀವು ನಷ್ಟವನ್ನು ಅನುಭವಿಸುವಿರಿ. ಮನೆಯ ವಾತಾವರಣವು ಪ್ರಿಯವಾಗುವುದು. ಹೆತ್ತವರ ಜೊತೆ ನೀವು ಸಂತೋಷದಿಂದ ಸಮಯವನ್ನು ಕಳೆಯಬೇಕಾಗಬಹುದು. ಮನಸ್ಸಿನಲ್ಲಿ ಸ್ವಲ್ಪ ಗೊಂದಲಗಳು ಉಂಟಾಗಬಹುದು. ಅದು ನಿಮ್ಮನ್ನು ತುಂಬಾ ಉದ್ವೇಗಕ್ಕೆ ಒಳಗೊಳಿಸುವುದು. ಆರೋಗ್ಯದ ವಿಷಯದಲ್ಲಿ ಸ್ವಲ್ಪ ನೀವು ಕಾಳಜಿವಹಿಸಿ. ಸಂಬಂಧಿಕರಿಂದ ನಿಮ್ಮ ಬಗ್ಗೆ ದೂರುಗಳು ಬರಬಹುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ಕೆಲಸದಲ್ಲಿ ಗೌಪ್ಯತೆ ಇರಲಿ.
ಮಕರ ರಾಶಿ :ಇಂದು ನೀವು ಯಾರ ಮಾತನ್ನೂ ಗಂಭೀರವಾಗಿ ತೆಗೆದುಕೊಳ್ಳಲಾರಿರಿ. ಬೇಡದ್ದನ್ನೂ ಮನಸ್ಸಿನಲ್ಲಿ ಹಾಕಿಕೊಂಡು ಸಂಕಟಪಡುವಿರಿ. ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯವನ್ನು ಸಾಧಿಸವಹುದು. ಅದಕ್ಕೆ ಅವಕಾಶವನ್ನು ಕೊಡಬೇಡಿ. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗದು ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಪೂರ್ಣಗೊಳಿಸುವಿರಿ. ಈ ಸಮಯದಲ್ಲಿ ಖರ್ಚುಗಳು ಅಧಿಕವಾಗಬಹುದು. ಕಛೇರಿಯಲ್ಲಿ ನೀವು ಬಹಳ ಚಿಂತನಶೀಲವಾಗಿ ಕೆಲಸ ಮಾಡುವಿರಿ. ನಿಮ್ಮ ಮೇಲೆ ಯಾರಾದರೂ ಪಿತೂರಿ ಮಾಡಬಹುದು. ಇಂದಿನ ನಿಮ್ಮ ಪ್ರಯಾಣದಿಂದ ಕಷ್ಟವಾಗಬಹುದು. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸಿದೆ. ವ್ಯಾಪಾರದ ಏರುಪೇರುಗಳಿಂದ ಅಸಮಾಧಾನ ಇರುವುದು.
ಕುಂಭ ರಾಶಿ :ಇಂದು ನೀವು ಭವಿಷ್ಯಕ್ಕಾಗಿ ಆರ್ಥಿಕತೆಯ ಬಗ್ಗೆ ಅಧಿಕ ಆಲೋಚನೆ ಮಾಡುವ ಸನ್ನಿವೇಶ ಬರಲಿದೆ. ನಿಮ್ಮ ಅಂತಸ್ಸತ್ತ್ವವೇ ಎಲ್ಲ ಕಾರ್ಯಗಳನ್ನು ಖುಷಿಯಿಂದ ಮಾಡಲು ಸಹಕಾರಿಯಾಗುವುದು. ಅದು ನಿಮ್ಮ ಆತಂಕವನ್ನು ಹೆಚ್ಚಿಸುತ್ತದೆ. ಎಲ್ಲವನ್ನೂ ನಿರ್ವಹಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆ. ಆದರೆ ಅದನ್ನು ನಿಮಗೆ ಪರಿಚಯಿಸುವ ಕೆಲಸವಾಗಬೇಕು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲವಾಗಿರುವುದು. ಕಷ್ಟಪಟ್ಟು ಬಹಳ ಪ್ರೀತಿಯಿಂದ ಕೆಲಸವನ್ನು ಮಾಡುತ್ತೀರಿ ಮತ್ತು ನಿಮ್ಮ ಉತ್ಸಾಹವನ್ನು ಪರಿಗಣಿಸಿ ಹಿರಿಯರು ನಿಮ್ಮನ್ನು ಪ್ರೋತ್ಸಾಹಿಸಬಹುದು. ಅದು ನಿಮ್ಮ ಕೆಲಸದ ಹೊರೆಯನ್ನು ತಗ್ಗಿಸುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಉತ್ತಮ ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡಿ. ಕುಟುಂಬದ ಎಲ್ಲ ಸದಸ್ಯರಿಗೆ ಸಂತೋಷವನ್ನು ನೀವು ಕೊಡುವಿರಿ.
ಮೀನ ರಾಶಿ :ಇಂದು ನಿಮ್ಮ ಮಾನಸಿಕ ಸ್ಥಿತಿಯು ಸ್ತಿಮಿತದಲ್ಲಿ ಇರದು. ನಿಮ್ಮ ಆಸಕ್ತಿಗೆ ಯೋಗ್ಯವಾದ ಕಾರ್ಯವು ಸಿಗುವತನಕ ಕಾಯಬೇಕಾಗುವುದು. ವಿದ್ಯಾರ್ಥಿಯಾಗಿದ್ದರೆ ಶಿಕ್ಷಣದಲ್ಲಿನ ಅಡೆತಡೆಗಳು ಸರಿಯಾಗಬಹುದು. ದಾಂಪತ್ಯ ಜೀವನದಲ್ಲಿ ನೀವು ಪ್ರೀತಿಯನ್ನು ಅನುಭವಿಸುವಿರಿ. ಕೆಲವು ದಿನಗಳ ಕಾಲ ಮನೆಯಿಂದ ಹೊರಗೆ ಸುತ್ತಾಡಲು ಯೋಜಿಸಬಹುದು. ಉದ್ಯೋಗಿಗಳಿಗೆ ಇಂದು ಶುಭ ಸೂಚನೆಗಳು ಸಿಗಲಿದೆ. ಮಕ್ಕಳಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅದು ನಿಮಗೆ ತುಂಬಾ ಹೆಮ್ಮೆ ತರುತ್ತದೆ. ಕಷ್ಟಪಟ್ಟು ಕೆಲಸ ಮಾಡುತ್ತೀರಿ ಮತ್ತು ನಿಮ್ಮ ವಿರೋಧಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮ ವಿವಾಹವು ಮುಂದೆ ಹೋಗಲು ಅನ್ಯಾನ್ಯ ಕಾರಣಗಳು ಇರಬಹುದು.
-ಲೋಹಿತ ಹೆಬ್ಬಾರ್-8762924271 (what’s app only)