AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು

ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 19 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು
ದಿನಭವಿಷ್ಯImage Credit source: freepik
TV9 Web
| Edited By: |

Updated on:Apr 19, 2024 | 10:37 PM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾ ಫಲ್ಗುಣೀ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:51 ರಿಂದ  09:25ರ ವರೆಗೆ.

ಧನು ರಾಶಿ : ಇಂದು ನೀವು ದುಸ್ಸಾಧ್ಯವಾದ ಕಾರ್ಯವನ್ನೇ ಮಾಡಲು ಉದ್ಯುಕ್ತರಾಗುವಿರಿ. ಮನೆಗೆ ಖರ್ಚು ಮಾಡುವಾಗ ನಿಮ್ಮ ಆರ್ಥಿಕ‌ಸ್ಥಿತಿಯನ್ನೂ ಗಮನಿಸಿ. ನೆರೆಹೊರೆಯವರ ಜೊತೆ ಸಣ್ಣ ವಿಚಾರಕ್ಕೆ ಜಗಳ ಆಗಬಹುದು. ದಾಂಪತ್ಯದಲ್ಲಿ ಉಂಟಾದ ವೈಮನಸ್ಸನ್ನು ಮೊದಲು ಸರಿಮಾಡಿಕೊಂಡು ಮುನ್ನಡೆಯಿರಿ. ಜಾಗರೂಕತೆಯಿಂದ ಕಾರ್ಯದಲ್ಲಿ ಮಗ್ನರಾಗುವಿರಿ. ಭವಿಷ್ಯದ ಬಗ್ಗೆ ಕಾಳಜಿಯೂ ಗೊಂದಲೂ ಇರುತ್ತದೆ. ನಿಮ್ಮ ಮನೆಯ ನಿರ್ಮಾಣಕ್ಕೆ ಸೂಕ್ತ ಭೂಮಿಯನ್ನು ಆಯ್ಕೆ ಮಾಡುವಿರಿ. ಸಂಗಾತಿಯ ಬಗ್ಗೆ ಇದ್ದ ಬೇಸರವು ಮಾಯವಾಗಲಿದೆ. ಕೆಲಸದ ಬಗ್ಗೆ ಉತ್ಸಾಹದಿಂದ ಇರಬೇಕು. ಆತ್ಮವಿಶ್ವಾಸದ ಕೊರತೆಯಿಂದ ನಿಮ್ಮ ಕಾರ್ಯವು ವಿಳಂಬವಾಗಬಹುದು. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ನಿಮ್ಮ ಶ್ರಮವು ದುರುಪಯೋಗವಾಗುವುದು. ದೂರಪ್ರಯಾಣದಿಂದ ನಿಮಗೆ ಖರ್ಚಾಗುವುದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ : ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಇನ್ನೊಬ್ಬರನ್ನು ನಿಂದಿಸುವುದು ಬೇಡ. ಅವರೇ ಅವರ ಕರ್ಮದ ಫಲವನ್ನು ಉಣ್ಣುವರು. ವ್ಯಾಪಾರಕ್ಕೆ ಸಂಬಂಧಿಸಿದಂತೆ ನಿಮ್ಮ ಯೋಜನೆಗಳನ್ನು ಕೈಗೊಳ್ಳಬೇಡಿ. ನಿದ್ರಾಹೀನತೆಯ ಕಾರಣ ಒತ್ತಡ ಎನಿಅಬಹುದು. ಯಾರಿಂದಲೂ ಕೂಡಲೇ ಬದಲಾವಣೆಯನ್ನು ಬಯಸುವುದು ಬೇಡ. ಮನಸ್ಸು ಒಳ್ಳೆಯದಾದರೂ ದುಡುಕಿ ಮಾತನಾಡಿದರೆ ಕೆಟ್ಟದ್ದಾದೀತು. ಸಾಲದ ವ್ಯವಹಾರದಿಂದ ದೂರವಿರಿ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಂದರೆ ಬರಬಹುದು.

ಕುಂಭ ರಾಶಿ : ನಿಮ್ಮ ಗುರಿಯನ್ನು ಯಾರಾದರೂ ಬದಲಿಸಬಹುದು. ಗುರಿಯತ್ತ ನಿಮ್ಮ ಗಮನವನ್ನು ಇಟ್ಟುಕೊಳ್ಳಿ. ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಪುಣ್ಯ ಸ್ಥಳಗಳಿಗೆ ನೀವು ಹೋಗುವಿರಿ. ಉದರ ಬಾಧೆಯು ನಿಮಗೆ ಕಷ್ಟವಾದೀತು. ಸ್ವಭಾವದ ಕಾರಣ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಪ್ರವಾಸ ಮಾಡಲು ಸಾದ್ಯವಾಗುವುದಿಲ್ಲ. ಉದ್ಯಮಿಗಳು ಹೂಡಿಕೆಯ ಬಗ್ಗೆ ಚಿಂತಾಮಗ್ನರಾಗುವರು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಕುಟುಂಬದ ಪೋಷಣೆಯಲ್ಲಿ ಇಂದು ಸಹಭಾಗಿತ್ವ ಇರುವುದು. ಅಜ್ಞಾನದಿಂದ ಕೆಲಸದಲ್ಲಿ ಲೋಪವಾಗಬಹುದು.

ಮೀನ ರಾಶಿ : ಇಂದು ನೀವು ಬಯಸಿದ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂತೋಷ ಇರುತ್ತದೆ. ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಹೆಚ್ಚು ಅನುಕೂಲ. ಕೌಟುಂಬಿಕ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಈ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳುಬೇಕು. ಉದ್ಯೋಗದಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಎದುರಾಗುತ್ತವೆ. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ.‌ ಸಮಾನ ಚಿಂತನಶೀಲರ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 12:45 am, Fri, 19 April 24

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ