Horoscope: ದಿನಭವಿಷ್ಯ: ಇಂದು ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 20 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ 10:53 ರಿಂದ ಮಧ್ಯಾಹ್ನ12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:41ರ ವರೆಗೆ.
ಧನು ರಾಶಿ: ನಿಮ್ಮ ದಿನಚರಿಯಲ್ಲಿ ವ್ಯತ್ಯಾಸವಾಗುವುದು. ನಿಮ್ಮ ಪ್ರತಿಭೆಗೆ ಇಂದು ಪರೀಕ್ಷಾಕಾಲವಾಗಲಿದೆ. ಇದರಿಂದ ನಿಮ್ಮ ಆತ್ಮಬಲವು ಅಧಿಕವಾಗುವುದು. ಆರ್ಥಿಕತೆಯ ದುರ್ಬಲದಿಂದಾಗಿ ದುರ್ಮಾರ್ಗದವನ್ನು ಅನುಸರಿಸುವ ಸಾಧ್ಯತೆ ಇದೆ. ಹಾಗಾಗಿ ನಿಮ್ಮ ಆಲೋಚನೆಗಳು ಸಕಾರಾತ್ಮಕವಾಗಿ ಇರಲಿ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಲ್ಲ. ಮಾನಸಿಕ ನೆಮ್ಮದಿಯು ಕಡಿಮೆ ಆಗಲಿದೆ. ನೀವಿಟ್ಟ ನಂಬಿಕೆಯೇ ನಿಮಗೆ ಶಾಶ್ವತವಾಗಿ ಸಿಗುವುದು. ತುರ್ತು ಕಾರ್ಯಗಳಿಂದ ನಿಮಗೆ ಒತ್ತಡ ಉಂಟಾಗಬಹುದು. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು. ಮಕ್ಕಳನ್ನು ನಯದಿಂದ ಸರಿದಾರಿಗೆ ತರಬೇಕಾಗುವುದು. ಹಲವಾರು ಗೊಂದಲಗಳು ನಿಮ್ಮ ಮನಸ್ಸಿನಲ್ಲಿ ಓಡಾಡಬಹುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು.
ಮಕರ ರಾಶಿ: ನೀವು ಕಷ್ಟದಲ್ಲಿರುವ ಸ್ನೇಹಿತನಿಗೆ ಸಹಾಯ ಮಾಡುವಿರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಪ್ರಯತ್ನಿಸುತ್ತೀರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ವಿವಾದವಾದೀತು. ಅಹಿತಕರ ಸುದ್ದಿಯು ನಿಮ್ಮನ್ನು ಕುಗ್ಗಿಸೀತು. ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ತೆಗೆದುಕೊಳ್ಳಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಬಂಧುಗಳಿಂದಾದ ನೋವನ್ನು ನೀವು ಹೇಳಿಕೊಳ್ಳಲಾರಿರಿ. ಅನವಶ್ಯಕ ಸಂಪರ್ಕವನ್ನು ಕಡಿದುಕೊಳ್ಳಲು ಇಚ್ಛಿಸುವಿರಿ. ಕಾನೂನಿನ ಪಾಠವನ್ನು ಹಿರಿಯರು ಮಾಡುವರು. ಉದ್ಯೋಗಕ್ಕಾಗಿ ಬಂದ ಬಂಧುವಿಗೆ ಮಾರ್ಗದರ್ಶನ ಮಾಡುವಿರಿ. ಸಹೋದರನ ಸಹಕಾರವು ಅನುಕೂಲವೇ ಆಗುವುದು. ಪ್ರತೀಕಾರಕ್ಕೆ ಸಮಯದ ನಿರೀಕ್ಷೆಯಲ್ಲಿ ಇರುವಿರಿ.
ಕುಂಭ ರಾಶಿ: ನೀವು ಇಂದು ಕೆಲವು ಸಮಸ್ಯೆಗಳು ಇದ್ದರೂ ಅದನ್ನು ಬದಿಗೊತ್ತಿ ಸಕಾರಾತ್ಮಕ ಚಿಂತನೆಯಲ್ಲಿ ತೊಡಗುವಿರಿ. ನಿಮ್ಮ ಕಾರ್ಯಗಳು ಅಪರಿಪೂರ್ವಾಗುತ್ತದೆ ಎಂಬ ಭರವಸೆಯಿದ್ದರೆ ಅದನ್ನು ಬಿಟ್ಟುಬಿಡಿ. ಆರ್ಥಿಕವಾದ ಹೂಡಿಕೆಯನ್ನು ಇಂದು ಮಾಡುವುದು ಬೇಡ. ಅಪವ್ಯಯವಾದೀತು. ಸುಮ್ಮನೇ ಓಡಾಟವಾಗುವುದು. ಅಪರಿತರನ್ನು ಪರಿಚಿತರನ್ನಾಗಿ ಮಾಡಿಕೊಳ್ಳಿ. ಸ್ನೇಹ ಬೆಳೆಸಲು ಸಮಯವನ್ನು ತೆಗೆದುಕೊಳ್ಳಿ. ತಲೆ ಕೆಡಿಸಿಕೊಳ್ಳದೇ ಜಾಣ್ಮೆಯಿಂದ ಪರಿಹರಿಸಿ. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ದೇಹವನ್ನು ದಂಡಿಸಲು ನಿಮಗೆ ಆಗದು. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ.
ಮೀನ ರಾಶಿ: ನೀವು ಇಂದು ಒಳ್ಳೆಯ ಕ್ರಮವನ್ನು ರೂಢಿಸಿಕೊಳ್ಳಲು ಪ್ರಯತ್ನಿಸಿ. ಮನೆಯಲ್ಲಿ ಶಿಸ್ತಿನ ವಾತಾವರಣವು ಸಂತೋಷವನ್ನು ತರುವುದು. ದೀರ್ಘಕಾಲದ ಖಾಯಿಲೆಯು ಇಂದು ಸ್ವಲ್ಪ ಕಡಿಮೆಯಾಗಲಿದೆ. ಅನಾರೋಗ್ಯದ ಆಸ್ಪತ್ರೆಗೆ ದಾಖಲಾಗುವ ಸಂಭವವಿದೆ. ಇದರಿಂದ ಆರ್ಥಿಕವಾಗಿ ಏರುಪೇರಾಗಬಹುದು. ವೈಯಕ್ತಿಕ ಕೆಲಸದ ಕಾರಣ ಕಛೇರಿಯ ಕಾರ್ಯಗಳು ಹಿಂದುಳಿಯಬಹುದು. ನಿಮ್ಮ ಸಂಗಾತಿಯನ್ನು ಬೆಂಬಲಿಸಿ,ದುರ್ಬಲಗೊಂಡ ಬಂಧವನ್ನು ಮತ್ತೆ ಬಲಗೊಳಿಸಿ. ಬಹಳ ಹುಡುಕಾಟದ ಅನಂತರದ ಉತ್ತಮ ವಿವಾಹ ಸಂಬಂಧವು ಬರುವುದು. ಕರ್ತವ್ಯದ ವಿಚಾರದಲ್ಲಿ ನೀವು ಆಲಸ್ಯವೋ ಬೇಜವಾಬ್ದಾರಿಯೋ ಒಳ್ಳೆಯದಲ್ಲ. ಬಂಧುಗಳಿಂದ ಬೇಗ ಹಣವನ್ನು ಕೊಡುವುದಾಗಿ ಪಡೆಯುವಿರಿ. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ.
ಲೋಹಿತ ಹೆಬ್ಬಾರ್-8762924271 (what’s app only)




