Horoscope: ಈ ರಾಶಿಯವರ ಸ್ನೇಹಿತರು ದಾರಿಯನ್ನು ತಪ್ಪಿಸಬಹುದು-ಎಚ್ಚರ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 20 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರ ಸ್ನೇಹಿತರು ದಾರಿಯನ್ನು ತಪ್ಪಿಸಬಹುದು-ಎಚ್ಚರ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 20, 2024 | 12:43 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 02:12 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:06 ರಿಂದ ಬೆಳಿಗ್ಗೆ 07:43ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:20 ರಿಂದ 10:57ರ ವರೆಗೆ.

ಧನು ರಾಶಿ : ಇಂದು ದಂಪತಿಗಳ ನಡುವೆ ಕಲಹವೆದ್ದು ಇಬ್ಬರ ತಪ್ಪುಗಳನ್ನು ಪರಸ್ಪರ ಹೇಳಿ ವಾದ ಮಾಡುವಿರಿ. ಹೂಡಿಕೆಗಳನ್ನು ಮಾಡಿ, ಲಾಭವು ನಿಮ್ಮನ್ನು ಬಂದು ಸೇರುವುದು. ಸ್ನೇಹಿತನಿಗೆ ಧನಸಹಾಯ ಅಥವಾ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸಿಕೊಡುವಿರಿ. ಯಾವುದನ್ನಾದರೂ ಹೇಳುವುದು ಸುಲಭ, ಸ್ವತಃ ಮಾಡಲು ಬಂದಾಗ ವಾಸ್ತವದ ಪರಿಚಯವಾಗುವುದು. ಸಂಗಾತಿಯನ್ನು ನೀವು ಇಷ್ಟಪಡಬಹುದು. ಅನಾರೋಗ್ಯವಿದ್ದರೂ ಸದಾ ಉತ್ಸಾಹಿಗಳಾಗಿ ಇರುವಿರಿ. ಮಕ್ಕಳ ವಿಚಾರಕ್ಕೆ ಸಿಟ್ಟಾಗುವಿರಿ. ಉದ್ಯೋಗದ ಬದಲಾವಣೆಯು ನಿಮಗೆ ಹವ್ಯಾಸದಂತೆ ಆಗುವುದು. ಸರ್ಜನಶೀಲ ವ್ಯಕ್ತಿಗಳಾಗಿದ್ದರೆ ನಿಮಗೆ ಅವಕಾಶಗಳು ಹೆಚ್ಚು ಬರುತ್ತದೆ. ಒಳ್ಳೆಯದನ್ನು ಬೆಂಬಲಿಸಿ. ಸುಮ್ಮನೇ ಸುತ್ತಾಟ ಇಂದು ಬೇಡ. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗವುದು.

ಮಕರ ರಾಶಿ : ನೀವು ಇಂದು ಸೌಂದರ್ಯಕ್ಕೆ ಪ್ರಾಮುಖ್ಯ‌ ಕೊಟ್ಟು ಕಾರ್ಯವನ್ನು ವಿಳಂಬ ಮಾಡುವಿರಿ. ರೂಪ ಹಾಗೂ ವ್ಯಕ್ತಿತ್ವ ಸ್ನೇಹಿತರನ್ನು ಗಳಿಸಲು ಸಹಕಾರಿ. ಪರಿಸ್ಥಿತಿಗಳು ಹೇಗೂ ಬರಲಿ, ಮನಸ್ಸು ಮತ್ತು ಬುದ್ಧಿ ದೃಢವಾಗಿರಲಿ. ನಿರೀಕ್ಷಿತವಾದ ಸಂಪತ್ತು ನಿಮಗೆ ಸಿಗಲಿದೆ. ಯಾವದೇ ವಿಚಾರವನ್ನು ನಿಮ್ಮ ಸಾಮರ್ಥ್ಯ ಹಾಗೂ ವಿದ್ಯೆ ತಕ್ಕಂತೆ ಯೋಚಿಸಿ. ಎಲ್ಲವನ್ನೂ ಸರಿ ಮಾಡುತ್ತೇನೆ ಎಂಬ ಹುಂಬುತನವನ್ನು ತೋರಿಸಬೇಡಿ. ಇಬ್ಬಂದಿತನದಿಂದ ಕಷ್ಟವಾಗುವುದು. ಅದನ್ನು ಗಮನಿಸಿಕೊಂಡು ನಿಮ್ಮ ಕೆಲಸವನ್ನು ಮುಂದುವರಿಸಿ. ಸ್ನೇಹಿತರು ದಾರಿಯನ್ನು ತಪ್ಪಿಸಬಹುದು. ಯಾರ ಬಳಿ ಏನನ್ನು ಹೇಳಬೇಕು ಎಂಬ ಬಗ್ಗೆ ಸ್ಪಷ್ಟತೆ ಇರಲಿ. ಮೆಲ್ಲಗೆ ಮಾತನಾಡಿ. ಆಲಸ್ಯದ ಮನೋಭಾವವನ್ನು ನೀವು ಬಿಡಬೇಕಾದೀತು. ಉದ್ವೇಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ. ಗೃಹನಿರ್ಮಾಣ ಮಾಡುವುದು ನಿಮಗೆ ಅನಿವಾರ್ಯವಾದೀತು.

ಕುಂಭ ರಾಶಿ : ನೀವು ಯಾರಿಗಾದರೂ ಸಾಲ ಕೊಡುವ ಮೊದಲು ಆಲೋಚನೆ ಇರಲಿ. ಸಾಲವು ಮರಳಿ ಬರಬಹುದು ಎಂದು ಹೇಳಲು ಸಾಧ್ಯವಿಲ್ಲ. ಪರರ ದುಃಖದಲ್ಲಿ ಭಾಗಿಯಾಗಿ ಮನಸ್ಸನ್ನು ಹಗುರಗೊಳಿಸುವಿರಿ. ಅಂದುಕೊಂಡಿದ್ದು ಆಗುವುದಿಲ್ಲ ಎಂಬ ನಂಬಿಕೆಯಿಂದ ಹೊರಗೆ ಬನ್ನಿ. ಎಲ್ಲವನ್ನೂ ನಾವಂದು ಕೊಂಡಂತೆ ನಡೆಸಲು ಸಾಧ್ಯವಿಲ್ಲ. ನಿಮ್ಮ ವಿದ್ಯಾರ್ಹತೆಯನ್ನು ಪರೀಕ್ಷಿಸಬಹುದು. ನಿಮ್ಮ ಬಗ್ಗೆ ನಿಮ್ಮವರಿಗೆ ತಿಳಿಸುವ ಅನಿವಾರ್ಯತೆ ಬರಬಹುದು. ನಿಮ್ಮ ಬಗ್ಗೆ ನಿಮಗೆ ಸ್ಪಷ್ಟತೆ ಇರಲಿ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವನು. ಅಹಂಕಾರದ ಕಾರಣ ನೀವು ಕೆಲವರಿಂದ ದೂರಾಗಬೇಕಾಗುವುದು. ಮಿಶ್ರಫಲವನ್ನು ಪಡೆಯುವಿರಿ. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ತಮ್ಮಷ್ಟಕ್ಕೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಿ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು.

ಮೀನ ರಾಶಿ : ಇಂದಿನ ಎಂತ ಸ್ಥಿತಿಯಲ್ಲಿಯೂ ಮನಸ್ಸು ತಾಳ್ಮೆಯನ್ನು ಬಿಡದಿರಲಿ. ಜನರಿಂದ ಕೆಲಸದ ವಿಚಾರದಲ್ಲಿ ಮನ್ನಣೆ ದೊರೆಯಲಿದೆ. ಉಪಕಾರಕ್ಕೆ ಸತ್ಫಲವನ್ನು ಪಡಯಬಹುದಾಗಿದೆ. ಕಾರಣಾಂತರಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಮನೆಯಲ್ಲಿ‌ ಪ್ರಶಾಂತವಾದ ವಾತಾವರಣವಿರಲಿದ್ದು ನಿಮಗೆ ಬಹಳ ಖುಷಿ ಎನಿಸುವುದು. ನಿಮ್ಮ ತಮಾಷೆಯ ಸ್ವಭಾವವು ಇತರರಿಗೆ ಬೇಸರ ತರಿಸಬಹುದು. ಹಿರಿಯರ ಭೇಟಿಯಿಂದ ನಿಮ್ಮ ಜೀವನದ ಕೆಲವು ಭಾಗಗಳನ್ನು ಬದಲಿಸಿಕೊಳ್ಳುವಿರಿ. ಯಾರಾದರೂ ನಕರಾತ್ಮಕವಾಗಿ ಮಾತನಾಡಿದರೆ ಅವರ ಜೊತೆ ವಿವಾದಕ್ಕೆ ಇಳಿಯುವಿರಿ. ದಿನದಲ್ಲಿ ಶುಭವು ಹೆಚ್ಚಿರಲಿದೆ. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’