Horoscope: ದಿನ ಭವಿಷ್ಯ; ಇಂದು ನಿಮ್ಮ ದಾಂಪತ್ಯ ಜೀವನವು ಸುಖವಾಗಿರುವುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 01, 2024 | 12:43 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ನಿಮ್ಮ ದಾಂಪತ್ಯ ಜೀವನವು ಸುಖವಾಗಿರುವುದು
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​01ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:17ರಿಂದ ಬೆಳಗ್ಗೆ 10:54ರ ವರೆಗೆ, ಯಮಘಂಡ ಕಾಲ 14:07 ರಿಂದ 15:44ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:04 ರಿಂದ ಬೆಳಿಗ್ಗೆ 07:41ರ ವರೆಗೆ.

ಧನು ರಾಶಿ :ಇಂದು ನೀವು ಬಹಳ ಚಾತುರ್ಯದಿಂದ ಕೆಲಸವನ್ನು ಮಾಡಿದರೂ ನಷ್ಟವಾಗಬಹುದು. ಆರೋಗ್ಯದ ವಿಚಾರದಲ್ಲಿ ಚಿಂತೆ ಬೇಡ. ಸರಿಮಾಡಿಕೊಳ್ಳುವ ಬಗ್ಗೆ ಚಿಂತಿಸಿ. ದುಪ್ಪಟ್ಟು ವ್ಯಯಿಸುವ ಸನ್ನಿವೇಶಗಳು ಇಂದು ಬರಬಹುದು. ಉದ್ವೇಗದಿಂದ ಕೆಲವೊಂದು ಸಮಸ್ಯೆಗಳನ್ನು ತಂದುಕೊಳ್ಳುವಿರಿ. ನ್ಯಾಯಾಲಯದಲ್ಲಿ ಗೆಲುವು ಸಿಗುವ ಸಾಧ್ಯತೆ ಇದೆ‌. ಇಷ್ಟ ಪಟ್ಟು ಮಾಡುವ ಕೆಲಸವು ಸಂತೋಷವನ್ನು ಕೊಡಲಿದೆ. ದಾಂಪತ್ಯದಲ್ಲಿ ಅಪಮಬಿಕೆಗಳು ತಲೆ ಹಾಕಬಹುದು. ನೀವು ಬಹಳ ಸಮಯದ ಅನಂತರ ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಂಗಾತಿಯ ನಡುವಣ ಭಿನ್ನಾಭಿಪ್ರಾಯವನ್ನು ಮಾತನಾಡಿ ಪರಿಹರಿಸಬಹುದು. ನಿಮ್ಮ ಹಳೆಯ ತಪ್ಪುಗಳಿಂದ ನೀವು ಕಲಿಯಬೇಕು. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ದೇಹವನ್ನು ದಂಡಿಸಲಾಗದ ಸ್ಥಿತಿ ಇರುವುದು.

ಮಕರ ರಾಶಿ :ಇಂದು ನಿಮ್ಮ ದಾಂಪತ್ಯ ಜೀವನವು ಸುಖವಾಗಿರುವುದು. ಮಕ್ಕಳ ಜೊತೆ ಪತಿ ಪತ್ನಿಯರಿಬ್ಬರೂ ಕಾಲವನ್ನು ಕಳೆಯುವಿರಿ. ದೂರದ ಊರಿಗೆ ಪ್ರಯಾಣ ಹೋಗುವ ಯೋಜನೆಗಳನ್ನು ಹಾಕಿಕೊಳ್ಳುವಿರಿ. ನಕಾರಾತ್ಮಕ ಭಾವನೆಗಳಿಗೆ ಅವಕಾಶವನ್ನು ಕೊಡಬೇಡಿ. ನಿಮ್ಮ ಶತ್ರುಗಳನ್ನು ನೀವು ಕಂಡುಕೊಳ್ಳುವಿರಿ. ನಿಮ್ಮ ವ್ಯಕ್ತಿತ್ವದ ಪರೀಕ್ಷೆ ಆಗಲಿದೆ. ಸಜ್ಜನರ ಸಹವಾಸವು ನಿಮಗೆ ಸಿಗಬಹುದು. ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ಯಾರನ್ನೂ ನೀವು ಇಷ್ಟಪಡಲಾರಿರಿ.‌ ಮಾತುಗಳು ಕಿರಿಕಿರಿ ಎನಿಸಬಹುದು. ಇಂದು ಕೆಲವು ಸಂದರ್ಭದಲ್ಲಿ ಸುಳ್ಳು ಹೇಳಬೇಕಾಗಬಹುದು. ನಿಮ್ಮ ಸಂಪೂರ್ಣ ಗಮನವು ವೈಯಕ್ತಿಕ ವಿಷಯಗಳ ಮೇಲೆ ಇರುತ್ತದೆ. ನಿಮ್ಮ ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ನಿಮ್ಮ ಸಂಗಾತಿಯಿಂದ ನೀವು ಎಲ್ಲದಕ್ಕೂ ಬೆಂಬಲ ಪಡೆಯುವಿರಿ.

ಕುಂಭ ರಾಶಿ :ನೀವು ಮಾಡುವ ವೃತ್ತಿಯಿಂದ ಊಹಿಸದ ಯಶಸ್ಸು ಸಿಗುವುದು. ಅನಿರೀಕ್ಷಿತ ತಿರುವುಗಳು ಗೊಂದಲವನ್ನು ಉಂಟುಮಾಡೀತು. ನಿಮ್ಮ ಗೆಳೆತನವು ಖುಷಿ ಕೊಡುವುದು‌. ಅತಿಯಾದ ಆಲೋಚನೆಗಳು ಮಾನಸಿಕ ನೆಮ್ಮದಿಯನ್ನು ದೂರಮಾಡಲಿವೆ. ಅತಿಯಾದ ಸಲುಗೆ ನಿಮಗೆ ಅಸಹ್ಯವಾದೀತು.‌ ಆತ್ಮಾವಲೋಕನದ ಅವಶ್ಯಕತೆ ಇರಲಿದೆ. ಭವಿಷ್ಯಕ್ಕಾಗಿ ಹಣವನ್ನು ಹೂಡಿಕೆ ಮಾಡುವ ಆಲೋಚನೆಯನ್ನು ಮಾಡುವಿರಿ. ಆರ್ಥಿಕವಾಗಿ ಸ್ವಲ್ಪ ಗಟ್ಟಿಯಾಗಬಹುದಾಗಿದೆ. ಕೃಷಿಯ ಕುರಿತು ಆಸಕ್ತಿ ಬರಲಿದೆ. ಎದುರಾಳಿಯು ನಿಮ್ಮ‌ ವಿರುದ್ಧ ಸಂಚು ಮಾಡಬಹುದು. ಮನೆಯನ್ನು ನವೀಕರಿಸಲು ಸಹ ನೀವು ಹೆಚ್ಚು ಗಮನಹರಿಸುತ್ತೀರಿ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮ ಸುಳ್ಳನ್ನು ಯಾರಾದರೂ ನಂಬಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡಬೇಕೆನಿಸುವುದು.

ಮೀನ ರಾಶಿ : ಇಂದಿನ ನಿಮ್ಮ ವಹಿವಾಟುಗಳು ಗೊಂದಲದಿಂದ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳಿಗೆ ಸಹಾಯ ಮಾಡಬೇಕಾಗಬಹುದು. ಮನೆಗೆ ಅವಶ್ಯವಿರುವ ವಸ್ತುಗಳನ್ನು ಖರೀದಿಸುವಿರಿ. ನಿಮ್ಮನ್ನು ವಿರೋಧಿಸುವ ವ್ಯಕ್ತಿಗಳು ಹುಟ್ಟಿಕೊಳ್ಳಬಹುದು. ಆರ್ಥಿಕತೆಯ ಸುಧಾರಣೆಗೆ ನಿಮ್ಮದೇ ಯೋಜನೆಗಳನ್ನು ಹಾಕಿಕೊಳ್ಳುವಿರಿ. ದಾಂಪತ್ಯದಲ್ಲಿ ಸುಖವಿದ್ದರೂ ನೆಮ್ಮದಿಯ ಕೊರತೆ ಕಾಣಿಸಬಹುದು. ಬಂಧುಗಳ ಜೊತೆ ದುಃಖವನ್ನು ಹಂಚಿಕೊಳ್ಳುವಿರಿ. ಸ್ವಾಭಿಮಾನವು ಹೆಚ್ಚು ಕಾಣಿಸುವುದು. ಯಾವುದೇ ಕೆಲಸದಲ್ಲಿ ನಿರ್ಲಕ್ಷ್ಯವನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ. ಸಂತಾನ ಸುದ್ದಿಯು ನಿಮಗೆ ಖುಷಿ ಕೊಟ್ಟೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ‌ ಸ್ಥಿತಿಗೆ ಮರಳುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)