Horoscope: ರಾಶಿಭವಿಷ್ಯ; ಈ ರಾಶಿಯವರ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 11ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು
ನಿತ್ಯಭವಿಷ್ಯImage Credit source: freepik
Follow us
TV9 Web
| Updated By: Rakesh Nayak Manchi

Updated on: Mar 11, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಭ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:14 ರಿಂದ 09:43ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:13 ರಿಂದ ಮಧ್ಯಾಹ್ನ 12:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:12 ರಿಂದ 03:42ರ ವರೆಗೆ.

ಧನು ರಾಶಿ : ಇಂದು ನಿಮ್ಮ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರವು ಸಿಗುದೆಂಬ ನಂಬಿಕೆ‌ ಹೆಚ್ಚಿರುವುದು. ನಿಮ್ಮ ದೈನಂದಿನ ದಿನಚರಿಯಲ್ಲಿ ಕೆಲವು ಉಳಿತಾಯದ ಭಾಗವು ಸೇರಿಕೊಳ್ಳಬಹುದು. ಸಾಮಾಜಿಕ ವ್ಯವಹಾರದಲ್ಲಿ ಆಸಕ್ತಿ‌ಯು ಕಡಿಮೆ‌ ಆದಂತೆ ತೋರುವುದು. ಧನಸಹಾಯ ಮಾಡುವ ಮಾತನ್ನು ಉಳಿಸಿಕೊಳ್ಳಲು ನೀವು ಸೋಲಬಹುದು. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳುವಿರಿ. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಭವಿಷ್ಯವು ಅಸ್ಪಷ್ಟವಾಗಿ ಇರುವುದು ನಿಮಗೆ ಆತಂಕವಾಗಬಹುದು.

ಮಕರ ರಾಶಿ : ನಿಮ್ಮ ಸಂಗಾತಿಯ ಕೋಪಕ್ಕೆ ಎದುರು ಮಾತನಾಡದೇ ಸ್ವಲ್ಪ ಸಮಯ ಸುಮ್ಮನಿರಿ. ತಾನಾಗಿಯೇ ಶಾಂತವಾಗುವುದು. ನಿಮ್ಮ ಕುಟುಂಬದ ನಡುವೆ ಬೇರೆ ಯಾರೋ ಮಧ್ಯಪ್ರವೇಶಿಸುವುದು ಇಷ್ಟವಾಗದು. ನಿಮ್ಮ ಇಂದಿನ ಮಾತುಗಳು ಮಕ್ಕಳ‌ಮೇಲೆ ಹೆಚ್ಚು ಪರಿಣಾಮ ಬೀರುವುದು. ನಿಮಗೆ ಶತ್ರುಗಳ‌ ಚಿಂತೆಯೇ ಅಧಿಕವಾಗಿರುವುದು. ನೀವಾಗಿಯೇ ಏನನ್ನು ಮಾಡಿಕೊಳ್ಳಲು ಹೋಗುವುದು ಬೇಡ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು.

ಕುಂಭ ರಾಶಿ : ಇಂದು ನೀವು ಹಲವು ಒತ್ತಡಗಳಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಬಗ್ಗೆ ಅಸಮಾಧಾನವನ್ನು ಹೊಂದುವ ಬದಲು, ಶಾಂತಚಿತ್ತರಾಗಿ ವರ್ತಿಸಿ. ನಿಮ್ಮ ಭಾವವನ್ನು ತೋರಿಸಿ. ನಿಮ್ಮ ಉದ್ಯೋಗದ ಬಗ್ಗೆ ತಂದೆಯವರು ವಿಚಾರಿಸಬಹುದು. ಮುಚ್ಚುಮರೆ ಇಲ್ಲದೇ ‌ಹೇಳಿ. ಸಂಗಾತಿಯ ಜೊತೆಗಿನ ಕೆಲವು ಸಂದರ್ಭಗಳನ್ನು ಎದುರಿಸುವುದು ಕಷ್ಟವಾದೀತು. ಸಿಗು ಸಂತೋಷದ ಸಮಯವನ್ನು ಸದ್ವಿನಿಯೋಗ ಮಾಡಿಕೊಳ್ಳುವಿರಿ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌ ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದೆ.

ಮೀನ ರಾಶಿ : ಇಂದು ನೀವು ಕುಟುಂಬದ ಸದಸ್ಯರಿಗೆ ಹಣವನ್ನು ನೀಡುವಾಗ ಕಾನೂನಾತ್ಮಕ ಕ್ರಮಗಳನ್ನು ಅನುಸರಿಸಿ.‌ ಹೊಸ ಪರಿಚಿತರ ಜೊತೆ ಮಾತನಾಡಲು ಮುಜುಗರವಾಗಬಹುದು. ಮಕ್ಕಳಿಗೆ ಉತ್ತಮ‌ ವಿದ್ಯೆಯನ್ನು ಕೊಡುಸುವ ಆಸೆ ಇರುವುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾದೀತು. ಪ್ರಯಾಣವನ್ನು ಕುಟಂಬದ ಜೊತೆ ಮಾಡುವಿರಿ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಯಾರದೋ ಬೇಸರವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ನಿಮ್ಮದೇ ಸರಿ ಎಂಬ ಭಾವ ನಿಮ್ಮಲ್ಲಿ ಇರುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ