Horoscope: ರಾಶಿಭವಿಷ್ಯ: ಪ್ರೀತಿ ವಿಚಾರದಲ್ಲಿ ಈ ರಾಶಿಯವರಿಗೆ ಮೋಸವಾಗುವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 12ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ: ಪ್ರೀತಿ ವಿಚಾರದಲ್ಲಿ ಈ ರಾಶಿಯವರಿಗೆ ಮೋಸವಾಗುವುದು
ದಿನಭವಿಷ್ಯImage Credit source: freepik
Follow us
TV9 Web
| Updated By: Rakesh Nayak Manchi

Updated on: Mar 12, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 12) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೇವತಿ, ಯೋಗ : ಶುಕ್ಲ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:42 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:43 ರಿಂದ 11:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:42 ರಿಂದ 02:12ರ ವರೆಗೆ.

ಧನು ರಾಶಿ: ಫಲವನ್ನು ನಿರೀಕ್ಷಿ ಕಾರ್ಯವನ್ನು ಮಾಡಿ ಕೊನೆಗೆ ಸಂಕಟಪಡುವಿರಿ. ನಿಮ್ಮ ಕೆಲಸಕ್ಕೆ ಯಾರಾದರೂ ನೆರವಾಗಬಹುದು. ವೃತ್ತಿಯಲ್ಲಿ ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣರೂಪದಲ್ಲಿ ಒಪ್ಪಿಕೊಳ್ಳುವಿರಿ. ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಪೂರ್ಣ ನಂಬಿಕೆ ಇರದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌.

ಮಕರ ರಾಶಿ: ಇಂದು ಮಹಿಳೆಯರು ತಾಳ್ಮೆಯಿಂದ ವರ್ತಿಸಿ ತಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಬೇಕಾಗುವುದು. ವಿದ್ಯಾರ್ಥಿಗಳು ದಾರಿ ತಪ್ಪುವ ಸಾಧ್ಯತೆ ಇದೆ. ಮನೆಯಲ್ಲಿ ಇರುವುದು ನೆಮ್ಮದಿಯನ್ನು ನೀಡುವುದು. ಬಿಡಿಸಲಾಗದಷ್ಟು ಆಪ್ತವಾದ ಸಂಬಂಧವು ದೂರವಾಗಬಹುದು. ಇಂದು ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ನಿಮ್ಮ‌ ಮೇಲೆ‌ ನಂಬಿಕೆಯನ್ನು ಕಳೆದುಕೊಳ್ಳುವ ಮೊದಲು ಕಾರ್ಯವನ್ನು ಪೂರೈಸಿ. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಮಾತಿಗೆ ಮಾತು ಬೆಳೆಸಿಕೊಳ್ಳುವುದು ಬೇಡ. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ನಿಮ್ಮ ವೈವಾಹಿಕ ಸಂಬಂಧವು ಹೊಂದಾಣಿಕೆಯನ್ನು ಆಶ್ರಯಿಸಿರುವುದು.

ಕುಂಭ ರಾಶಿ: ನಿಮಗೆ ಇಂದು ಕಛೇರಿಯಲ್ಲಿ ಸ್ತ್ರೀಯರಿಂದ ಮುಜುಗರ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದ ಕಾರಣಕ್ಕೆ ಪ್ರಯಾಣ ಮಾಡುವುದು ನಿಮಗೆ ಕಷ್ಟವಾಗಬಹುದು. ಪುಣ್ಯಸ್ಥಳಕ್ಕೆ ಭೇಟಿ ನೀಡುವ ಮೂಲಕ ಮನಸ್ಸಿಗೆ ನೆಮ್ಮದಿ ಸಿಗುವುದು. ಸರ್ಕಾರದ ಉದ್ಯೋಗಸ್ಥರು ಕೆಲವರು ಒತ್ತಡಕ್ಕೆ ಸಿಕ್ಕಿಕೊಳ್ಳಬೇಕಾಗುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಸ್ನೇಹಿತರ ಸಹಾಯಕ್ಕೆ ಹಿಂದೇಟು ಹಾಕುವುದು ಸರಿಯಾಗದು. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ಮೀನ ರಾಶಿ: ಇಂದು ನಿಮ್ಮ ಮಕ್ಕಳು ನಿಮಗೆ ಖರ್ಚನ್ನು ಮಾಡಿಸುವರು. ಪ್ರಭಾವಿ ವ್ಯಕ್ತಿಗಳ ಭೇಟಿಯಿಂದ ಸಕಾರಾತ್ಮಕವಾಗಿ ಏನಾದರೂ ಆಗಬಹುದು ಎಂಬ ನಿರೀಕ್ಷೆ ಇರಲಿದೆ. ಆಸ್ತಿಯ ವಿಚಾರದಲ್ಲಿ ವಿರೋಧಿಗಳಿಂದ ತೊಂದರೆ ಬರಬಹುದು. ವ್ಯಾಪಾರಸ್ಥರು ಅಧಿಕ ಖರ್ಚಿನ‌ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ