AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 22ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು
ರಾಶಿ ಭವಿಷ್ಯ
TV9 Web
| Edited By: |

Updated on: Mar 22, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 22) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ :ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:09 ರಿಂದ ಸಂಜೆ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 15:41 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:07 ರಿಂದ 09:38 ರ ವರೆಗೆ.

ಧನು ರಾಶಿ : ನೀವು ಹೊಸ ಹುರುಪಿನಿಂದ ಏನನ್ನಾದರೂ ಅಸಂಬದ್ಧ ಮಾಡಬಹುದು. ಆದಷ್ಟು ನಿಮ್ಮ ನಿಯಂತ್ರಣವನ್ನು ಬಿಟ್ಟು ಕದಲುವುದು ಬೇಡ. ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಜಾಣ್ಮೆಯ ವ್ಯವಹಾರದಿಂದ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮ್ಮ ಸಾವಧಾನತೆಯು ಕಿರಿಕಿರಿಯನ್ನು ಇತರರಿಗೆ ಕೊಟ್ಟೀತು. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಟವಾದೀತು. ಯಾರು ಏನೇ ಅಂದರೂ ಬೇಕಾದಷ್ಟನ್ನು ಮಾತ್ರ ಪಡೆಯುವಿರಿ.

ಮಕರ ರಾಶಿ : ಆರ್ಥಿಕತೆಯು ಹಲವು ಗೊಂದಲಗಳ ಗೂಡಾಗಿ ಸರಿಯಾದ ನಿರ್ಧಾರವು ಕಷ್ಟವಾದೀತು. ನಿಮಗೆ ಯಾವುದಾದರೂ ಒಂದು ರೀತಿಯಲ್ಲಿ ಲಾಭವಾಗುವುದು. ನಿಮ್ಮ ಬಗ್ಗೆ ಯಾರಾದರೂ ಆಡಿಕೊಳ್ಳಬಹುದು. ನಿಮ್ಮ ಶಿಕ್ಷಣವನ್ನು ಸರಿಯಾಗಿ ಬಳಸಿಕೊಳ್ಳುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಯಾರದೋ ಅನುಭವವು ನಿಮ್ಮದಾಗದು. ಎಲ್ಲ ಅವಕಾಶವನ್ನು ನೀವು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ದೂರದೃಷ್ಟಿಯು ನಿಮ್ಮ ಚಿಂತನೆಗೆ ಇರಲಿ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ನಿಮ್ಮ ಉತ್ಸಾಹವು ಇತರರಿಗೆ ಮಾರ್ಗದರ್ಶನವಾದೀತು.

ಕುಂಭ ರಾಶಿ : ನಿಮ್ಮ ಬಗ್ಗೆ ಇರುವ ಪೂರ್ವಾಗ್ರಹವು ಹೋಗಬಹುದು. ಮನೆಯ ಖರ್ಚಿನ್ನು ನೀವೇ ನೋಡಿಕೊಳ್ಳಬೇಕಾಗುವುದು. ನೆರೆಹೊರೆಯವರ ಜೊತೆ ಸೌಹಾರ್ದ ಮಾತುಕತೆ ಇರಲಿದೆ. ವೈವಾಹಿಕ ಜೀವನದಿಂದ ಶತ್ರುಗಳು ಅಧಿಕವಾಗಿ ಆಗಬಹುದು‌. ಇಂದು ಕೇವಲ ಓಡಾಟವೇ ಆಗಲಿದೆ. ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ಸುಳ್ಳು ಹೇಳಿ ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡಾರು. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ‌ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಮ್ಮ ಕಾರ್ಯವನ್ನು ಮಾಡಬೇಕಾಗುವುದು. ದೈವದ ಮೇಲಿಟ್ಟ ನಂಬಿಕೆಯನ್ನು ಅಚಲಗೊಳಿಸಿಕೊಳ್ಳಿ.

ಮೀನ ರಾಶಿ : ಇಂದು ನಿಮ್ಮ ಆರ್ಥಿಕತೆಗೆ ಅನುಕೂಲವಾಗುವಂತಹ ವ್ಯವಹಾರದಲ್ಲಿ ಇರುವಿರಿ. ಯಾರದ್ದಾದರೂ ಮೆಚ್ಚಿಗೆಯಿಂದ ನಿಮಗೆ ಖುಷಿಯಾಗುವುದು. ವೈವಾಹಿಕ ಜೀವನವು ಉತ್ತಮವಾಗಿರಲಿದ್ದು, ಸಂಗಾತಿಯ ಜೊತೆ ಬಾಧವ್ಯವು ರಸವತ್ತಾಗಿ ಇರಲಿದೆ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾರ ಸಣ್ಣತನವನ್ನೂ ನೀವು ಸಹಿಸಿಕೊಳ್ಳಲಾರಿರಿ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಎಲ್ಲದಕ್ಕೂ ಮಾರ್ಗದರ್ಶನ ಬೇಕು ಎನಿಸುವುದಕ್ಕಿಂತ ಸ್ವಂತವಾಗಿ ಆಲೋಚಿಸುವುದೂ ಮುಖ್ಯವಾಗುವುದು. ಇಂದು ನಿಮಗೆ ವೃತ್ತಿಯಲ್ಲಿ ಸಹಾಕಾರವು ಸಿಗದೇ ತೊಂದರೆಪಡುವಿರಿ. ಧಾರ್ಮಿಕ ಕಾರ್ಯದಿಂದ ನೆಮ್ಮದಿ ಸಿಗಲಿದೆ. ನಿಮ್ಮ ಹಾಸ್ಯ ಪ್ರಜ್ಞೆಯಿಂದ ಎಲ್ಲರನ್ನೂ ನಗಿಸುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್