ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ 30ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವೈಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 14:07ರಿಂದ 15:44ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ ಬೆಳಿಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:17 ರಿಂದ ಬೆಳಿಗ್ಗೆ 10:540ರ ವರೆಗೆ.
ಧನು ರಾಶಿ :ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಸಹಾಯಕ್ಕೆ ಸಹೋದ್ಯೋಗಿಗಳು ಬರುವರು. ಯಾವುದನ್ನೂ ನೀವು ಸುಮ್ಮನೇ ಹೇಳುವುದು ಬೇಡ. ಗಾಂಭೀರ್ಯವನ್ನು ಬಿಟ್ಟು ನಗುಮೊಗದಲ್ಲಿ ಇರಿ. ನೀವು ಯಾರಿಗಾದರೂ ಮಾತುಕೊಟ್ಟರೆ, ಅದನ್ನು ಪೂರೈಸಲು ಪ್ರಯತ್ನಿಸುವಿರಿ. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ವ್ಯಾಪಾರಕ್ಕೆ ಯೋಗ್ಯವಾದ ಮಾತು ಇರಲಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು.
ಮಕರ ರಾಶಿ :ನಿಮ್ಮ ಅತ್ಯುತ್ಸಾಹಕ್ಕೆ ದೇಹವು ಸಹಕರಿಸದೇ ಇರಬಹುದು. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ.ದಾಂಪತ್ಯದಲ್ಲಿ ಆಪ್ತಭಾವವಿರಲಿದೆ. ಕಛೇರಿಯಲ್ಲಿ ಆದ ಒತ್ತಡವನ್ನು ಮನೆಗೆ ತರಬೇಡಿ. ವ್ಯವಹಾರದ ವಿಚಾರದಲ್ಲಿ ಶುದ್ಧತೆ ಮುಖ್ಯವಾಗಿ ಬೇಕಿದೆ. ನಿಮ್ಮ ಮೇಲೆ ನಿಮಗಾಗದವರು ಅಪವಾದವನ್ನು ತರಬಹುದು. ಪ್ರೀತಿಯಲ್ಲಿ ದುಃಖವಾಗಬಹುದು. ದೂರದಲ್ಲಿರುವ ನಿಮಗೆ ಮನೆಯ ವಾತಾವರಣ ಹಿತವೆನಿಸಬಹುದು. ಮನಸ್ಸು ಸ್ಥಿರವಾಗಿರಲಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನಿಮಗೆ ಶುಭ ಸುದ್ದಿಯು ಬರುವುದು. ರಾಜಕೀಯವಾಗಿ ಒತ್ತಡಗಳು ಬರಬಹುದು. ಅದನ್ನು ತಾಳ್ಮೆಯಿಂದ ಎದುರಿಸಬೇಕು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು.
ಕುಂಭ ರಾಶಿ :ನೀವು ಎಂತಹ ವಿಚಾರದಲ್ಲಿ ಪ್ರಸ್ತಾಪಿಸಿದರೂ ವಿವಾದವಾಗುವುದು. ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಜೀವನದ ತೊಂದರೆಗಳನ್ನು ಸಂಬಂಧಿಕರೊಂದಿಗೆ ಹಂಚಿಕೊಳ್ಳಬೇಡಿ. ಸಣ್ಣ ಹುಣ್ಣನ್ನು ದೊಡ್ಡ ಗಾಯ ಮಾಡುವರು. ಗೃಹನಿರ್ಮಾಣ ಅಥವಾ ಗೃಹವನ್ನು ಖರೀದಿಸುವ ಯೋಚನೆ ಮಾಡಲಿದ್ದೀರಿ. ಹೆಚ್ಚು ಕೆಲಸಗಳು ಇರುವುದರಿಂದ ಗೊಂದಲವು ಹೆಚ್ಚಾಗುವುದು. ಸಣ್ಣ ಮೊತ್ತವನ್ನೂ ಹಣವೆಂದೇ ಭಾವಿಸಿ. ಇದೇ ನಿಮಗೆ ಮುಂದಿನ ಸಂಪತ್ತನ್ನು ಕೊಡಿಸುವುದು. ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ.
ಮೀನ ರಾಶಿ :ಇಂದು ನೀವು ಏಕಾಂತವಾಗಿ ಇರಲು ಆಗದು. ಏನಾದರೂ ಅಡಚಣೆ ಇರುವುದು. ನಿಮ್ಮೊಳಗೆ ಅತೃಪ್ತಭಾವವು ಇರಲಿದೆ. ಯಾರದೋ ಕೆಲಸದಲ್ಲಿ ಮಗ್ನರಾಗುವಿರಿ. ಆಲಸ್ಯವು ಮೈತುಂಬಿಕೊಂಡು ನಿದ್ರೆಯನ್ನು ಮಾಡುವ ಮನಃಸ್ಥಿತಿಯಲ್ಲಿ ಇರುವಿರಿ. ಹೊಸ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವ ಯೋಚನೆ ದಟ್ಟವಾಗಿ ಮನದಲ್ಲಿ ಬೇರೂರಲಿದೆ. ಆಪ್ತರ ಜೊತೆ ಹೊಸ ಉದ್ಯೋಗದತ್ತ ಗಮನಹರಿಸುವಿರಿ. ಬೆನ್ನುನೋವು ಕಾಣಿಸಿಕೊಂಡೀತು. ಇಂದು ಯಾರನ್ನೂ ಒಪ್ಪಿಕೊಳ್ಳಲಾರಿರಿ. ನೀವು ಇಂದು ಹೊರಗಿನವರಿಗೆ ಯಾವುದೇ ಆಂತರಿಕ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬಾರದು. ಸಂಬಂಧಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ನಿಮ್ಮ ಯೋಜನೆಗಳನ್ನು ನೀವು ವೇಗಗೊಳಿಸುತ್ತೀರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ. ನಿಮ್ಮ ಬಗ್ಗೆ ಸರಿಯಾದ ತಿಳಿವಳಿಕೆ ಇರದು.
-ಲೋಹಿತ ಹೆಬ್ಬಾರ್-8762924271 (what’s app only)