Horoscope 23 Nov: ದಿನಭವಿಷ್ಯ, ನಿಮ್ಮಿಂದ ಹಣವು ಖರ್ಚಾಗುವುದು, ಬರಬೇಕಾದ ಹಣ ನಿಮಗೆ ಬಾರದೇ ಬೇಸರ
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 23 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ವ್ಯಾಘಾತ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:44 ರಿಂದ 03:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:38 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:29 ರಿಂದ 10:54ರ ವರೆಗೆ.
ಮೇಷ ರಾಶಿ: ಬರುವ ಅಪಾಯವನ್ನು ಜಾಣ್ಮೆಯಿಂದ ದಾಟುವಿರಿ. ಉದ್ಯೋಗದ ಹೊಸ ಆಯಾಮವು ತೆರೆದುಕೊಳ್ಳುವುದು. ನಿಮ್ಮ ಖರ್ಚಿನಿಂದ ದೂರ ಪ್ರಯಾಣವನ್ನು ಮಾಡಲಾರಿರಿ. ಪೂರ್ವಾಗ್ರಹವಿಲ್ಲದೇ ಎಲ್ಲರ ಜೊತೆ ಮಾತನಾಡುವುದು ಒಳ್ಳೆಯದು. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು. ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಯಶಸ್ಸನ್ನು ಹಂಬಲವು ಅತಿಯಾಗಿ ಕಾಣಿಸುವುದು. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ನಕಾರಾತ್ಮಕತೆಗೆ ಅವಕಾಶ ಬೇಡ. ಅನಗತ್ಯ ಖರ್ಚನ್ನು ಸಂಗಾತಿಯು ನಿಲ್ಲಿಸಬಹುದು.
ವೃಷಭ ರಾಶಿ: ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಬಂಧುಗಳಿಂದ ಅನಗತ್ಯ ಕಿರಿಕಿರಿಯನ್ನು ಸಹಿಸಬೇಕಾದೀತು. ಖಾಸಗಿಯಾಗಿ ಇರಬೇಕು ಎನಿಸಬಹುದು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಉಂಟುಮಾಡೀತು. ದ್ವೇಷವನ್ನು ಮರೆತು ಪ್ರೀತಿಯಿಂದ ಇರುವಿರಿ. ಆಪದ್ಧನವನ್ನು ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಯಾವುದೇ ಪ್ರಚಾರವಿಲ್ಲದೇ ನಿಮ್ಮನ್ನು ಪ್ರಕಟಪಡಿಸಿಕೊಳ್ಳುವಿರಿ. ದುರಾಲೋಚನೆಯು ನಿಮ್ಮ ಸಂತೋಷಕ್ಕೆ ತೊಂದರೆಯನ್ನು ಕೊಡಬಹುದು. ಮನೆಗೆ ಬೇಕಾಗಿ ವಸ್ತುಗಳನ್ನು ಖರೀದಿಸುವಿರಿ.
ಮಿಥುನ ರಾಶಿ: ಭಾವುಕರಾಗುವ ಸಂದರ್ಭವು ಬರಬಹುದು. ಕೆಲವರನ್ನು ನೀವು ದೂರವಿಡುವುದು ಮುಖ್ಯವಾಗಿರುವುದು. ಉದ್ಯಮವು ಒಂದೊಂದೇ ಹಂತವನ್ನು ಏರಲಿದ್ದು, ನಿಮಗೆ ಉತ್ಸಾಹವು ಅಧಿಕವಾಗಬಹುದು. ಸಹೋದರರ ಬಾಂಧವ್ಯವು ಸಡಿಲಾಗುವುದು. ಇಂದಿನ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರೋಗ್ಯವು ವ್ಯತ್ಯಾಸವಾದ ಕಾರಣ ಕಷ್ಟವಾದೀತು. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಬಹುದು. ನಿಮ್ಮ ನಿರ್ಧಾರವನ್ನು ಬದಲು ಮಾಡಿದ್ದಕ್ಕೆ ಬೇಸರವಾದೀತು. ಹೇಳಬಾರಸ ವಿಚಾರವನ್ನು ಹೇಳುವ ಬಯಕೆಯು ಇರುವುದು.
ಕಟಕ ರಾಶಿ: ರಾಜಕೀಯ ಒತ್ತಡವು ನಿಮಗೆ ಬೇಡದ ಕಾರ್ಯವನ್ನು ಮಾಡಲು ಪ್ರೇರಿಸುವುದು. ನಿಮಗೆ ಆಗದವರು ನಿಮ್ಮ ಬಗ್ಗೆ ಹೇಳಿಯಾರು. ಪರೋಪಕಾರದ ಸ್ಮರಣೆಯು ಇಲ್ಲದೇಹೋಗುವುದು. ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳಬಹುದು. ಕಾರ್ಯಗಳಲ್ಲಿ ಸಿಗುವ ಪೂರ್ಣಜಯದಿಂದ ನಿಮಗೆ ಖುಷಿಯಾಗಲಿದೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ ಅಷ್ಟೇ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ನಿಮ್ಮ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ. ಆರ್ಥಿಕತೆಯ ವೃದ್ಧಿಗಾಗಿ ತಂತ್ರವನ್ನು ಮಾಡುವಿರಿ. ಪ್ರಭಾವೀ ವ್ಯಕ್ತಿಗೆ ಮೆಚ್ಚಿಸಿ ಅಧಿಕಾರವನ್ನು ಪಡೆಯುವಿರಿ. ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳುವುದು ಬೇಡ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಬರುವಿರಿ.
ಸಿಂಹ ರಾಶಿ: ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಇಂದು ಸಾಧ್ಯವಾಗುವುದು. ನಿಮ್ಮವರಿಗೆ ಹೊಸ ವಸ್ತುಗಳನ್ನು ಕೊಡಿಸುವಿರಿ. ದಾಂಪತ್ಯದ ಒಳ ಜಗಳವು ಕುಟುಂಬಕ್ಕೆ ಗೊತ್ತಾಗಲಿದೆ. ದುರಭ್ಯಾಸವನ್ನು ರೂಢಿಸಿಕೊಳ್ಳುವಿರಿ. ಇನ್ನೊಬ್ಬರ ಸ್ವತ್ತನ್ನು ಅಪೇಕ್ಷಿಸುವುದು ಬೇಡ. ಮೋಹದಿಂದ ಹೊರಬರುವುದು ಕಷ್ಟವಾದೀತು. ನಿಮ್ಮ ಶತ್ರುಗಳು ಬಲಗೊಳ್ಳುವ ಸಾಧ್ಯತೆ ಇದೆ. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಹೂಡಿಕೆಯ ವ್ಯವಹಾರವು ಕೆಲವರಲ್ಲಿ ಮಾತ್ರ ಇರಲಿ. ಸಹನೆಯನ್ನು ನೀವು ಪ್ರಯತ್ನದಿಂದ ಬೆಳೆಸಿಕೊಳ್ಳಬೇಕಾದೀತು. ದೇಹಕ್ಕೆ ಬಲವಾದ ಪೆಟ್ಟು ಬೀಳಬಹುದು. ಅಪರಿಚಿತರ ಜೊತೆ ಮಾತನಾಡಲು ಮುಜುಗರಪಟ್ಟುಕೊಳ್ಳಬಹುದು. ಆರಾಮದಿಂದ ಈ ದಿನವನ್ನು ಕಳೆಯಬೇಕು ಎಂದು ಅನ್ನಿಸಬಹುದು.
ಕನ್ಯಾ ರಾಶಿ: ಕುಟುಂಬದಲ್ಲಿ ಆಸ್ತಿಯ ವಿಚಾರದಲ್ಲಿ ಕಲಹವು ಕಾಣಿಸಿಕೊಳ್ಳುವುದು. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳುವಿರಿ. ನಿಮ್ಮ ಸಂಸ್ಥೆಗೆ ಹೆಚ್ಚಿನ ಮನ್ನಣೆಯು ಸಿಗುವುದು. ನಿಮ್ಮ ಲಾಭವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನಿರುವುದು. ಉದ್ಯೋಗದಲ್ಲಿ ಅವಘಡವು ಸಂಭವಿಸುವ ಸಾಧ್ಯತೆ ಇದೆ. ಇಂದು ನೀವು ಬಹಳ ಆಕರ್ಷಕವಾಗಿ ಕಾಣುವಿರಿ. ಯಾರು ಏನೇ ಅಂದರೂ ನಿಮ್ಮ ನಿರ್ಧಾರವನ್ನು ಬದಲಿಸಲು ನೀವು ಸರಿಯಾಗದು.
ತುಲಾ ರಾಶಿ: ಮಕ್ಕಳ ವಿಚಾರದಲ್ಲಿ ನಿಮ್ಮ ನಿಲುವು ಸರಿ ಇರದು. ನಿಮ್ಮ ಗೌರವಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ದಾಂಪತ್ಯದಲ್ಲಿನ ಮಾತುಗಳು ನಿಮಗೆ ಅನಿರೀಕ್ಷಿತವಾಗಿರುವುದು. ಆರೋಗ್ಯದ ಸಮತೋಲನವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಸಿಗದ ಹಣದ ಬಗ್ಗೆ ನಿಮಗೆ ಬೇಸರವಿರದು. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಕೆಲವರನ್ನು ನೀವು ನಂಬಬೇಕಾಗುತ್ತದೆ. ಸರಳವಾಗಿರಲು ಇರುವುದು ನಿಮಗೆ ಕಷ್ಟವಾದೀತು. ಇನ್ನೊಬ್ಬರ ಜೊತೆ ಮಾತನಾಡುವಾಗ ಹೆದರಿಕೆ ಇರುವುದು. ನೆಮ್ಮದಿಯನ್ನು ಏಕಾಂತದಲ್ಲಿ ಪಡೆದುಕೊಳ್ಳುವಿರಿ.
ವೃಶ್ಚಿಕ ರಾಶಿ: ನಿಮ್ಮ ಇಂದಿನ ಕೆಲಸವು ತೃಪ್ತಿಯನ್ನು ಕೊಡುವುದು. ಖರ್ಚುಗಳು ಅಧಿಕವಿದ್ದರೂ ಚಿಂತೆ ಇಲ್ಲದೇ ಮಾಡುವಿರಿ. ಕೆಲವರ ಜೊತೆ ಮಾತನಾಡಲು ಸಂಕೋಚವಾದೀತು. ಮನೆಯ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಸಂಗಾತಿಯ ಬಗ್ಗೆ ಆರೋಗ್ಯದ ಕಾಳಜಿ ತೋರಿಸುವಿರಿ. ನಿಗದಿತ ಅವಧಿಯಲ್ಲಿ ನಿಮ್ಮ ಕೆಲಸಗಳನ್ನು ಪೂರ್ಣ ಮಾಡಿಕೊಳ್ಳುವಿರಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು. ಭವಿಷ್ಯದ ದೃಷ್ಟಿಯಿಂದ ಹಣವನ್ನು ಯಾರಿಗೂ ಹೇಳದೇ ಗೌಪ್ಯವಾಗಿ ಇಡುವಿರಿ. ಇನ್ನೊಬ್ಬರ ಬಗ್ಗೆ ಗೊತ್ತಿಲ್ಲದೇ ಮಾತನಾಡಿ ನೋವನ್ನು ಉಂಟುಮಾಡುವಿರಿ.
ಧನು ರಾಶಿ: ನಿಷ್ಠುರತೆಯಿಂದ ಎಲ್ಲರ ಮೇಲು ಸಿಟ್ಟಾಗುವಿರಿ. ಹಳೆಯ ಸಾಲವನ್ನು ತೀರಿಸಿ ಮತ್ತೆ ಮಾಡಬೇಕಾದೀತು. ಕೃಷಿಯಲ್ಲಿ ನಿಮ್ಮದೇ ಹೆಸರನ್ನು ಗಳಿಸುವಿರಿ. ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ಮಿತ್ರನಿಗೆ ಗೊತ್ತಿಲ್ಲದೇ ಹಣವನ್ನು ಪಡೆಯುವಿರಿ. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು. ಸಾಲದಿಂದ ಮುಕ್ತರಾಗಲು ನಿಮಗೆ ಸಾಧ್ಯವಾಗದು. ತಾಳ್ಮೆಯನ್ನು ನೀವು ಕಳೆದುಕೊಳ್ಳುವಿರಿ.
ಮಕರ ರಾಶಿ: ಮಂಗಲ ಕಾರ್ಯಗಳಿಗೆ ನಿಮ್ಮಿಂದ ಹಣವು ಖರ್ಚಾಗುವುದು. ಪಾಲುದಾರಿಕೆಯಲ್ಲಿ ನಿಮ್ಮದೇ ಮೇಲುಗೈ ಸಾಧಿಸಲಿದೆ. ನಿಮ್ಮ ಬಾಲಿಶ ಮಾತುಗಳು ನಿಮ್ಮ ನಡವಳಿಕೆಯನ್ನು ತೋರಿಸುವುದು. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೇಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಸಂಗಾತಿಯಿಂದ ಶುಭ ಸಮಾಚಾರವು ಇರಲಿದೆ. ಸ್ನೇಹಿತರ ಜೊತೆ ಸುತ್ತಾಟದಿಂದ ಖರ್ಚು ಬರಬಹುದು.
ಕುಂಭ ರಾಶಿ: ಸಾಲದ ವಿಚಾರದಲ್ಲಿ ಜಾಗರೂಕತೆ ಅವಶ್ಯಕ. ನಿಮಗೆ ಮನೆಯು ಬಂಧನದಂತೆ ಅನ್ನಿಸಬಹುದು. ದುರ್ಘಟನೆಯಿಂದ ಮನಸ್ಸು ಕಲಕಬಹುದು. ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಚಿರಪರಿಚಯವು ನಿಮಗೆ ಹೊಸತಾಗಿ ಕಾಣಿಸಬಹುದು. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಕಳೆದುಹೋಗಬಹದು. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು. ಅನಾರೋಗ್ಯದ ಕಾರಣ ವಿಶ್ರಾಂತಿಯಿಂದ ಅನಿವಾರ್ಯವಾಗುವುದು. ಇನ್ನೊಬ್ಬರ ವಿಷಯದಲ್ಲಿ ಹೊಟ್ಟೆಕಿಚ್ಚು ಇರುವುದು.
ಮೀನ ರಾಶಿ: ಮೇಲಧಿಕಾರಿಗಳು ನಿಮ್ಮ ಮನವಿಯನ್ನು ಒಪ್ಪಬಹುದು. ಮನೆಗೆಲಸವೇ ನಿಮ್ಮ ಇಡೀ ದಿನಕ್ಕೆ ಆಗುವಷ್ಟು ಇರುವುದು. ಮನೆಯ ಹಿರಿಯರು ನಿಮಗೆ ಉಪದೇಶ ಕೊಡಬಹುದು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರು ನಿಗ್ರಹ. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ. ಕೆಲವರ ಮಾತು ನಿಮಗೆ ಬಾಲಿಶ ಎನಿಸಬಹುದು. ಸಂಪತ್ತಿನ ರಕ್ಷಣೆಯನ್ನು ಮಾಡಿಕೊಳ್ಳುವುದು ಇಂದು ಅಸಾಧ್ಯವಾಗುವುದು.
ಲೋಹಿತಶರ್ಮಾ – 8762924271 (what’s app only)