AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ಇಂದು ಹಣವನ್ನು ಕಳೆದುಕೊಳ್ಳಬೇಕಾಗುವುದು-ಎಚ್ಚರ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 26 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ಇಂದು ಹಣವನ್ನು ಕಳೆದುಕೊಳ್ಳಬೇಕಾಗುವುದು-ಎಚ್ಚರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 26, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವರಿಯಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:56 ರಿಂದ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:48 ರಿಂದ  09:22ರ ವರೆಗೆ.

ಮೇಷ ರಾಶಿ : ದೈವಭಕ್ತಿಗೆ ನಿಮಗೆ ಪೂರಕ ವಾತಾವರಣ ಇರಲಿದೆ. ಎಂತಹ ಕಷ್ಟದಲ್ಲಿಯೂ ನೆಮ್ಮದಿಯನ್ನೇ ಹುಡುಕುವಿರಿ. ಹೊಸ ಕಾರ್ಯವನ್ನು ಮಾಡಲು ಅತಿಯಾದ ಭಯವು ಬರಲಿದೆ. ಅನಿರೀಕ್ಷಿತವಾಗಿ ಬಂಧುಗಳ ಆಗಮನವಾಗುವುದು. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಣ್ಣ ವಿಚಾರಕ್ಕೆ ಸುಮ್ಮನೇ ಗದ್ದಲ ಮಾಡಿಕೊಳ್ಳುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ. ಯಾರದೋ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು.

ವೃಷಭ ರಾಶಿ : ನಿಮಗೆ ದುರಭ್ಯಾಸಗಳು ಉನ್ನತಿಯನ್ನು ತಡೆಯುವುದು. ರೋಗ ಬಾಧೆಯಿಂದ ನೀವು ಹೊರಬರುವಿರಿ. ವ್ಯಾಪಾರದಲ್ಲಿ ನಷ್ಟಕ್ಕೆ ಪಾಲುದಾರರನ್ನು ತೋರಿಸುವುದು ಬೇಡ. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಬಹಳ ದಿನಗಳಿಂದ ಅಡಗಿದ್ದ ದುಃಖವು ಇಂದು ಪ್ರಕಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ಸ್ಪರ್ಧೆಯಲ್ಲಿ ವಿಜಯಿಯಾಗುವಿರಿ.

ಮಿಥುನ ರಾಶಿ : ನಿಮ್ಮ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತಗಸಾವನ್ನು ಕೊಡುವುದು.‌ ವಾಹನ ಸಂಚಾರಕ್ಕೆ ಅಡೆತಡೆಗಳಾಗಬಹುದು. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ಇಷ್ಟ ಮಿತ್ರರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ಕರ್ಕ ರಾಶಿ : ಭೂಮಿಯ ವ್ಯವಹಾರಕ್ಕೆ ಕೈ ಹಾಕಲು ಹಿಂದೇಟು ಹಾಕುವಿರಿ. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮಗೆ ಸಿಗದ ಅಧಿಕಾರದ ಬಗ್ಗೆ ನಿಮಗೆ ಸ್ವಲ್ಪ ಅಸಮಾಧನಾವಿರುವುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ದೇಹಕ್ಕೆ ಬೇಕಾದ ವ್ಯಾಯಾಮವನ್ನು ಮಾಡಿ ದೃಢ ಮಾಡಿಕೊಳ್ಳಬೇಕಾಗುವುದು.

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ